ದೇಶ

ಕೇಂದ್ರದಲ್ಲಿ ಮತ್ತೆ ಬಿಜೆಪಿ ಅಧಿಕಾರಕ್ಕೆ ಬಂದರೆ, ಭಾರತ ಹಿಂದೂ ಪಾಕಿಸ್ತಾನವಾಗಲಿದೆ: ಶಶಿ ತರೂರ್

2019ರ ಲೋಕಸಭಾ ಚುನಾವಣೆಯಲ್ಲಿ ಮತ್ತೆ ಬಿಜೆಪಿ ಗೆದ್ದರೆ ದೇಶದಲ್ಲಿ 'ಹಿಂದೂ ಪಾಕಿಸ್ತಾನ'ದಂತಹ ವಾತಾವರಣ ನಿರ್ಮಾಣವಾಗಲಿದೆ ಎಂದು ಮಾಜಿ ಕೇಂದ್ರ ಸಚಿವ ಶಶಿ ತರೂರ್ ಹೇಳಿದ್ದಾರೆ...

ಕೇಂದ್ರದಲ್ಲಿ ಮತ್ತೆ ಬಿಜೆಪಿ ಅಧಿಕಾರಕ್ಕೆ ಬಂದರೆ, ಭಾರತ ಹಿಂದೂ ಪಾಕಿಸ್ತಾನವಾಗಲಿದೆ: ಶಶಿ ತರೂರ್
ಶಶಿ ತರೂರ್
Published On :
ತಿರುವನಂತಪುರಂ: 2019ರ ಲೋಕಸಭಾ ಚುನಾವಣೆಯಲ್ಲಿ ಮತ್ತೆ ಬಿಜೆಪಿ ಗೆದ್ದರೆ ದೇಶದಲ್ಲಿ 'ಹಿಂದೂ ಪಾಕಿಸ್ತಾನ'ದಂತಹ ವಾತಾವರಣ ನಿರ್ಮಾಣವಾಗಲಿದೆ ಎಂದು ಮಾಜಿ ಕೇಂದ್ರ ಸಚಿವ ಶಶಿ ತರೂರ್ ಹೇಳಿದ್ದಾರೆ. 
ಅಲ್ಪಸಂಖ್ಯಾತರ ಹಕ್ಕುಗಳನ್ನು ಗೌರವಿಸದ ಪಾಕಿಸ್ತಾನದ ಮಾದರಿಯಲ್ಲಿ ಬಿಜೆಪಿ ಹೊಸ ಸಂವಿಧಾನವನ್ನು ಬರೆಯಲಿದೆ. ದೇಶದ ಪ್ರಜಾಸತ್ತಾತ್ಮಕ ಸಂವಿಧಾನವು ನಾವು ಅರ್ಥಮಾಡಿಕೊಂಡಿರುವಂತೆ ಉಳಿಯುವುದಿಲ್ಲ. ಮೂಲ ಆಶಯಗಳನ್ನು ಸಂವಿಧಾನದಿಂದ ಬೇರ್ಪಡಿಸಿ ಹೊಸ ಸಂವಿಧಾನವನ್ನು ಬರೆಯಲಿದ್ದಾರೆ ಎಂದು ಶಶಿ ತರೂರ್ ಹೇಳಿದ್ದಾರೆ. 
ಹಿಂದೂ ರಾಷ್ಟ್ರ ನಿರ್ಮಾಣಕ್ಕೆ ಅಗತ್ಯವಾದ ತತ್ವ ಸಿದ್ಧಾಂತಗಳನ್ನು ಹೊಸ ಸಂವಿಧಾನವು ಹೊಂದಿರಲಿದೆ. ಅದರಲ್ಲಿ ಅಲ್ಪಸಂಖ್ಯಾತರ ಸಮಾನತೆಯನ್ನು ತೆಗೆದುಹಾಕಲಾಗುತ್ತದೆ. ಈ ಮೂಲಕ ಹಿಂದೂ ಪಾಕಿಸ್ತಾನ ವಾತಾವರಣವನ್ನು ನಿರ್ಮಿಸಲಾಗುತ್ತದೆ ಎಂದರು. 
ಬಿಜೆಪಿ ಮತ್ತೆ ಅಧಿಕಾರಕ್ಕೆ ಬಂದರೆ ದೇಶದ ಸ್ವಾತಂತ್ರ್ಯಕ್ಕಾಗಿ ಹೋರಾಡಿದ ಮಹಾತ್ಮ ಗಾಂಧಿ, ನೆಹರೂ, ಸರ್ದಾರ್ ವಲ್ಲಬಾಯ್ ಪಟೇಲ್, ಮೌಲಾನಾ ಆಜಾದ್ ರಂತಹ ಮಹಾನ್ ನಾಯಕರ ಆಶಯದಂತಿರುವುದಿಲ್ಲ ಎಂದು ಶಶಿ ತರೂರ್ ಹೇಳಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.