ಜಮ್ಮು-ಕಾಶ್ಮೀರ; ಕಲ್ಲುತೂರಾಟಗಾರರ ಮೇಲೆ ಸೇನೆ ಗುಂಡಿನ ದಾಳಿ, ಯುವಕ ಸಾವು, ಕುಪ್ವಾರದ ಹಲವೆಡೆ ನಿರ್ಬಂಧ
ಕಲ್ಲು ತೂರಾಟಗಾರರ ಮೇಲೆ ಸೇನೆ ಗುಂಡಿನ ದಾಳಿ ನಡೆಸಿದ ಪರಿಣಾಮ ಯುವಕನೊಬ್ಬ ಸಾವನ್ನಪ್ಪಿದ್ದು, ಈ ಹಿನ್ನಲೆಯಲ್ಲಿ ಕುಪ್ವಾರ ಜಿಲ್ಲೆ ಸೇರಿದಂತೆ ಹಲವೆಡೆ ನಿರ್ಬಂಧ ಹೇರಲಾಗಿದೆ ಎಂದು ಗುರುವಾರ ತಿಳಿದುಬಂದಿದೆ...

Published On :
ಶ್ರೀನಗರ: ಕಲ್ಲು ತೂರಾಟಗಾರರ ಮೇಲೆ ಸೇನೆ ಗುಂಡಿನ ದಾಳಿ ನಡೆಸಿದ ಪರಿಣಾಮ ಯುವಕನೊಬ್ಬ ಸಾವನ್ನಪ್ಪಿದ್ದು, ಈ ಹಿನ್ನಲೆಯಲ್ಲಿ ಕುಪ್ವಾರ ಜಿಲ್ಲೆ ಸೇರಿದಂತೆ ಹಲವೆಡೆ ನಿರ್ಬಂಧ ಹೇರಲಾಗಿದೆ ಎಂದು ಗುರುವಾರ ತಿಳಿದುಬಂದಿದೆ.
ಕಳೆದ ರಾತ್ರಿ 40-50 ಮಂದಿ ಪ್ರತಿಭಟನಾಕಾರರು ಭದ್ರತಾ ಪಡೆಗಳ ಮೇಲೆ ಕಲ್ಲು ತೂರಾಟ ನಡೆಸಿದ್ದರು. ಈ ವೇಳೆ ಐವರು ಯೋಧರು ಗಾಯಗೊಂಡಿದ್ದರು. ಈ ಹಿನ್ನಲೆಯಲ್ಲಿ ಆತ್ಮರಕ್ಷಣೆಗಾಗಿ ಸೇನೆ ಗುಂಡಿನ ದಾಳಿ ನಡೆಸಿದ್ದರು ಎಂದು ರಕ್ಷಣಾ ಸಚಿವಾಲಯದ ವಕ್ತಾರರು ಮಾಹಿತಿ ನೀಡಿದ್ದಾರೆ.
ಕಲ್ಲು ತೂರಾಟಗಾರರ ಮೇಲೆ ಸೇನೆ ಗುಂಡಿನ ದಾಳಿ ನಡೆಸಿದ ಹಿನ್ನಲೆಯಲ್ಲಿ ಯುವಕನೊಬ್ಬ ಸಾವನ್ನಪ್ಪಿದ್ದು, ಯಾವುದೇ ರೀತಿಯ ಅಹಿತಕರ ಘಟನೆಗಳು ನಡೆಯಬಾರದು ಎಂಬ ಕಾರಣಕ್ಕೆ ಅದಿಕಾರಿಗಳು ಉತ್ತರ ಕಾಶ್ಮೀರದ ಹಲವು ಜಿಲ್ಲೆಯಲ್ಲಿ ಸೆಕ್ಷನ್ 144 ಜಾರಿ ಮಾಡಿದ್ದಾರೆ.
ಶ್ರೀನಗರ, ಕುಪ್ವಾರ ಸೇರಿದಂತೆ ಹಲವೆಗೆ ಹೆಚ್ಚುವರಿಯಾಗಿ ಭದ್ರತಾ ಪಡೆಗಳು ಹಾಗೂ ಪೊಲೀಸರನ್ನು ನಿಯೋಜಿಸಲಾಗಿದ್ದು, ಕರ್ಫ್ಯೂ ಜಾರಿಯಾಗಿರುವ ಹಿನ್ನಲೆಯಲ್ಲಿ ಜನರು ಹೊರಗೆ ಬಾರದಂತೆ ಸೂಚನೆ ನೀಡಲಾಗಿದೆ. ಇತರೆ ಪ್ರದೇಶಗಳಿಂದ ಬರುತ್ತಿರುವ ಜನರನ್ನು ಹಿಂದಕ್ಕೆ ಕಳುಹಿಸಲಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಯುವಕನ ಸಾವಿನ ಹಿನ್ನಲೆಯಲ್ಲಿ ಕಾಶ್ಮೀರ ಪರಿಸ್ಥಿತಿ ಬೂದಿ ಮುಚ್ಚಿದ ಕೆಂಡದಂತಿದ್ದು, ಈ ಹಿನ್ನೆಲೆಯಲ್ಲಿ ಶೈಕ್ಷಣಿಕ ಸಸಂಸ್ಥೆಗಳನ್ನು ಬಂದ್ ಮಾಡಿಸಲಾಗಿದೆ ಎಂದು ತಿಳಿದುಬಂದಿದೆ.
ಬಂಡಿಪೋರಾ, ತ್ರೆಹ್ಗಾಮ್ ಮತ್ತು ಕುಪ್ವಾರದ ಚೌಕಿಬಾಲ್ ರಸ್ತೆಯಲ್ಲಿ ಕಳೆದ ರಾತ್ರಿ ಭದ್ರತಾ ಪಡೆಗಳ ಮೇಲೆ ಕಲ್ಲು ತೂರಾಟ ನಡೆಸಲಾಗಿತ್ತು. ಹೀಗಾಗಿ ಸೇನೆ ಗುಂಡಿನ ದಾಳಿ ನಡೆಸಬೇಕಾಗಿ ಬಂದಿತ್ತು. ಘಟನೆಯಲ್ಲಿ ಖಾಲಿದ್ ಗಫ್ಫರ್ ಮಲ್ಲಿಕ್ ಎಂಬ ವ್ಯಕ್ತಿ ಸೇರಿ ಇಬ್ಬರು ಗಾಯಗೊಂಡಿದ್ದರು. ಮಲಿಕ್ ಅವರು ಗಂಭೀರವಾಗಿ ಗಾಯಗೊಂಡಿದ್ದರು. ಕೂಡಲೇ ಅವರನ್ನು ಕುಪ್ವಾರದಲ್ಲಿರುವ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಮಲಿಕ್ ಸಾವನ್ನಪ್ಪಿದ್ದರು ಎಂದು ಅಧಿಕಾರಿಗಳು ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


