ದೇಶ

ಕೇರಳ: ಪೊಲೀಸರೆದುರು ಶರಣಾದ ಲೈಂಗಿಕ ದೌರ್ಜನ್ಯ ಆರೋಪ ಎದುರಿಸುತ್ತಿದ್ದ ಪಾದ್ರಿ

ಲೈಂಗಿಕ ದೌರ್ಜನ್ಯ ಆರೋಪ ಎದುರಿಸುತ್ತಿದ್ದ ಮಲಂಗಾ ಸಿರಿಯನ್ ಆರ್ಥೋಡಾಕ್ಸ್ ನ ಮೂವರು ಪಾದ್ರಿಗಳ ಪೈಕಿ ಓರ್ವ ಪಾದ್ರಿ ಪೊಲೀಸರೆದುರು ಶರಣಾಗಿದ್ದಾರೆ.

ಕೇರಳ: ಪೊಲೀಸರೆದುರು ಶರಣಾದ ಲೈಂಗಿಕ ದೌರ್ಜನ್ಯ ಆರೋಪ ಎದುರಿಸುತ್ತಿದ್ದ ಪಾದ್ರಿ
ಕೇರಳ: ಪೊಲೀಸರೆದುರು ಶರಣಾದ ಲೈಂಗಿಕ ದೌರ್ಜನ್ಯ ಆರೋಪ ಎದುರಿಸುತ್ತಿದ್ದ ಪಾದ್ರಿ
Published On :
ತಿರುವನಂತಪುರಂ: ಲೈಂಗಿಕ ದೌರ್ಜನ್ಯ ಆರೋಪ ಎದುರಿಸುತ್ತಿದ್ದ ಮಲಂಗಾ ಸಿರಿಯನ್ ಆರ್ಥೋಡಾಕ್ಸ್ ನ ಮೂವರು ಪಾದ್ರಿಗಳ ಪೈಕಿ ಓರ್ವ ಪಾದ್ರಿ ಪೊಲೀಸರೆದುರು ಶರಣಾಗಿದ್ದಾರೆ. 
ಪ್ರಕರಣದ ಎರಡನೇ ಆರೋಪಿ ಫಾದರ್ ಜಾಬ್ ಮ್ಯಾಥ್ಯೂ ಸಿಸಿಬಿ ಪೊಲೀಸರೆದುರು ಶರಣಾಗಿದ್ದು, ವಿಚಾರಣೆ ನಡೆಸಲಾಗುತ್ತಿದೆ.  ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಪಾದ್ರಿಗಳ ನಿರೀಕ್ಷಣಾ ಜಾಮೀನನ್ನು ಕೇರಳ ಕೋರ್ಟ್ ತಿರಸ್ಕರಿಸಿದ ಬೆನ್ನಲ್ಲೇ ಪಾದ್ರಿಗಳು ಶರಣಾಗಿದ್ದಾರೆ. 
ಅಬ್ರಾಹಂ ವರ್ಗೀಸ್ ಅಲಿಯಾಸ್ ಸೋನಿ, ಜಾಬ್ ಮ್ಯಾಥ್ಯೂ ಮತ್ತು ಜೇಸ್ ಕೆ ಜಾರ್ಜ್ ನಿರೀಕ್ಷಣಾ ಜಾಮೀನು ಕೋರಿ ಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು. ಆದರೆ ಮಹಿಳೆಯ ಪರಿಸ್ಥಿತಿಯನ್ನು ಅನುಕೂಲಕ್ಕೆ ತಕ್ಕಂತೆ ಬಳಸಿಕೊಂಡು ಲೈಂಗಿಕ ದೌರ್ಜನ್ಯ ಎಸಗಿರುವುದು ಮೇಲ್ನೋಟಕ್ಕೆ ಕಂಡುಬಂದಿದೆ ಎಂದು ಹೇಳಿದ್ದ ಕೋರ್ಟ್ ನಿರೀಕ್ಷಣಾ ಜಾಮೀನನ್ನು ನಿರಾಕರಿಸಿತ್ತು. 
ತನ್ನ ಪತ್ನಿಯ ಪರಿಸ್ಥಿತಿಯನ್ನು ಅನುಕೂಲಕ್ಕೆ ತಕ್ಕಂತೆ ಬಳಸಿಕೊಂಡು ಪಾದ್ರಿಗಳು ಆಕೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂದು ಕಳೆದ ತಿಂಗಳು ಮಹಿಳೆಯ ಪತಿ ದೂರು ದಾಖಲಿಸಿದ್ದರು. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.