'ಮಲ್ಯ ಸ್ಮಾರ್ಟ್' ಎಂದಿದ್ದಕ್ಕೆ ಕ್ಷಮೆ ಕೇಳಿದ ಕೇಂದ್ರ ಸಚಿವ
ಬ್ಯಾಂಕ್ ಗಳಿಗೆ ಸಾಲ ಮರುಪಾವತಿ ಮಾಡಲಾಗದೇ ಸುಸ್ತಿದಾರರಾಗಿರುವ ಉದ್ಯಮಿ ವಿಜಯ್ ಮಲ್ಯ ಅವರನ್ನು ಸ್ಮಾರ್ಟ್ ಎಂದಿದ್ದ ಕೇಂದ್ರ ಸಚಿವ ಜುವಾಲ್ ಒರಾಮ್ ಕ್ಷಮೆ ಕೇಳಿದ್ದಾರೆ.

Published On :
ನವದೆಹಲಿ: ಬ್ಯಾಂಕ್ ಗಳಿಗೆ ಸಾಲ ಮರುಪಾವತಿ ಮಾಡಲಾಗದೇ ಸುಸ್ತಿದಾರರಾಗಿರುವ ಉದ್ಯಮಿ ವಿಜಯ್ ಮಲ್ಯ ಅವರನ್ನು ಸ್ಮಾರ್ಟ್ ಎಂದಿದ್ದ ಕೇಂದ್ರ ಸಚಿವ ಜುವಾಲ್ ಒರಾಮ್ ಕ್ಷಮೆ ಕೇಳಿದ್ದಾರೆ.
2018ರ ರಾಷ್ಟ್ರೀಯ ಆದಿವಾಸಿ ಉದ್ಯಮಿಗಳ ಸಮ್ಮೇಳನದಲ್ಲಿ ಮಾತನಾಡುವ ವೇಳೆ ಜುವಾಲ್ ಒರಾಮ್, ಕೇವಲ ಕಷ್ಟಪಟ್ಟು ಕೆಲಸ ಮಾಡಿದ್ರೆ ಯಶಸ್ವಿಯಾಗಲ್ಲ. ಮಲ್ಯನ ರೀತಿ ಸ್ಮಾರ್ಟ್ ಆಗಿ ಎಂದು ಉದ್ಯಮಿಗಳಿಗೆ ಕಿವಿಮಾತು ಹೇಳಿದ್ದರು.
ವಿಜಯ್ ಮಲ್ಯನನ್ನು ನೀವೆಲ್ಲಾ ಟೀಕಿಸುತ್ತೀರಿ, ಆದರೆ ವಿಜಯ್ ಮಲ್ಯ ಸ್ಮಾರ್ಟ್, ಅವರು ಬುದ್ಧಿವಂತ ಜನರನ್ನು ನೌಕರರನ್ನಾಗಿ ನೇಮಿಸಿಕೊಂಡಿದ್ದರು, ಬ್ಯಾಂಕರ್ ಹಾಗೂ ರಾಜಕಾರಣಿಗಳು, ಸರ್ಕಾರದೊಂದಿಗೇ ಸ್ಮಾರ್ಟ್ ಆಗಿ ವ್ಯವಹರಿಸಿದರು ಎಂದು ಜುವಾಲ್ ಒರಾಮ್ ಹೇಳಿದ್ದಾರೆ.
ಈ ಹೇಳಿಕೆ ಬಗ್ಗೆ ಸ್ಪಷ್ಟನೆ ನೀಡಿರುವ ಒರಾಮ್, ನಾನು ಆಕಸ್ಮಿಕವಾಗಿ ವಿಜಯ್ ಮಲ್ಯ ಹೆಸರನ್ನು ಪ್ರಸ್ತಾಪಿಸಿದೆ, ಬೇರೆ ಯಾರ ಹೆಸರನ್ನಾದರೂ ಹೇಳಬೇಕಿತ್ತು, ಅವರ ಹೆಸರು ಉಲ್ಲೇಖಿಸಿ ತಪ್ಪು ಮಾಡಿದೆ ಎಂದು ಕ್ಷಮೆ ಕೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
ಕ್ಷಮೆapologyUnion Minister Jual OramMallya Smart Remarksಕೇಂದ್ರ ಸಚಿವ ಜುವಾಲ್ ಒರಾಮ್ಮಲ್ಯ ಸ್ಮಾರ್ಟ್ ಹೇಳಿಕೆ
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.
ಬ್ರೇಕಿಂಗ್ ನ್ಯೂಸ್
ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಹೆಚ್ಚಿದ ಒತ್ತಡ: ಮುಖ್ಯ ಚುನಾವಣಾ ಆಯುಕ್ತರನ್ನ ವಜಾ ಮಾಡೊದು ಅಷ್ಟು ಸುಲಭನಾ? ಯಾರಿಗಿದೆ ಆ ಪವರ್? ಸಂವಿಧಾನ ಹೇಳುವುದೇನು?ರಾಹುಕಾಲ ಎಂದರೇನು? ಮದುವೆಗೆ ಅನ್ವಯಿಸುತ್ತದೆಯೇ? ರಾಹು ಶಾಂತಿಗಾಗಿ ನಿಂಬೆ ಹಣ್ಣು ದೀಪ ಹಚ್ಚುವುದು ಸೂಕ್ತವೇ?ಗೌರಿಬಿದನೂರಿನ ಮಣ್ಣಲ್ಲಿ ಅರಳಿದ ಮರುಭೂಮಿ ಹಣ್ಣು: ಅಸಾಧ್ಯವನ್ನು ಸಾಧ್ಯವಾಗಿಸಿದ ಹಠವಾದಿ; ಸ್ವಾವಲಂಬಿ ಕೃಷಿಗೆ ಹೊಸ ಭಾಷ್ಯ ಬರೆದ ದಿವಾಕರ್ ಚನ್ನಪ್ಪ..!ಕರ್ನಾಟಕದ ನಂ.1 ಶ್ರೀಮಂತ ಯಾರು ಗೊತ್ತಾ? ಅಂಬಾನಿ, ಅದಾನಿ ಬಿಡಿ; ಇಲ್ಲಿದೆ ನಮ್ಮ ಕರುನಾಡ ಸಿರಿವಂತರ ಟಾಪ್ ಲಿಸ್ಟ್!ಫ್ಯಾಟ್ ನಿಂದ ಫಿಟ್ ವರೆಗೆ: ಸಾಹೇಬಲಾಲ್ ಛಪ್ಪರ್ಬಂದ್ ಸ್ಫೂರ್ತಿದಾಯಕ ಪಯಣವಿದೇಶಿ ಪ್ರವಾಸದ ಪ್ಲ್ಯಾನ್ ಇದೆಯೇ? ಒಂದು ಸಣ್ಣ ತಪ್ಪು ಭಾರೀ ದಂಡಕ್ಕೆ ಕಾರಣವಾಗಬಹುದು; ಪ್ರವಾಸಿಗರು ತಿಳಿದಿರಲೇಬೇಕಾದ ನಿಯಮಗಳಿವು...!ಮನಸ್ಸಿದ್ದರೆ ಮಾರ್ಗ ಎಂಬುದನ್ನು ರುಜುವಾತು ಮಾಡಿದ ಛಲವಾದಿ; 27 ವರ್ಷಗಳ ಹೋರಾಟದಲ್ಲಿ 26 ಬಾರಿ ಸೋತು 59ನೇ ವಯಸ್ಸಿನಲ್ಲಿ ಸರ್ಕಾರಿ ಶಿಕ್ಷಕರಾದ ವಿಜಯ್ಪಶ್ಚಿಮ ಘಟ್ಟಗಳ ESA - ಕಸ್ತೂರಿರಂಗನ್ ವರದಿ ಇನ್ನೂ ಏಕೆ ಜಾರಿಗೆ ಬಂದಿಲ್ಲ?


