ಜಮ್ಮು ಮತ್ತು ಕಾಶ್ಮೀರದಲ್ಲಿ ಭೂಕುಸಿತ: 7 ಮಂದಿ ದುರ್ಮರಣ
ಕಣಿವೆ ರಾಜ್ಯ ಜಮ್ಮು ಮತ್ತು ಕಾಶ್ಮೀರದ ರಿಯಾಸಿ ಜಿಲ್ಲೆಯಲ್ಲಿ ಸಂಭವಿಸಿದ ಭೂಕುಸಿತದಲ್ಲಿ 7 ಮಂದಿ ದಾರುಣ ಸಾವನ್ನಪ್ಪಿದ್ದಾರೆ...

Published On :
ಶ್ರೀನಗರ: ಕಣಿವೆ ರಾಜ್ಯ ಜಮ್ಮು ಮತ್ತು ಕಾಶ್ಮೀರದ ರಿಯಾಸಿ ಜಿಲ್ಲೆಯಲ್ಲಿ ಸಂಭವಿಸಿದ ಭೂಕುಸಿತದಲ್ಲಿ 7 ಮಂದಿ ದಾರುಣ ಸಾವನ್ನಪ್ಪಿದ್ದಾರೆ.
ಸೆಹರ್ ಬಾಬಾ ಪ್ರದೇಶದಲ್ಲಿನ ವಾಟರ್ ಫಾಲ್ಸ್ ಬಳಿ ಜನರು ಸ್ನಾನ ಮಾಡುತ್ತಿದ್ದಾಗ ಭೂಕುಸಿತ ಸಂಭವಿಸಿದ್ದು ಇದರಲ್ಲಿ 7 ಮಂದಿ ಮೃತಪಟ್ಟಿದ್ದು 25ಕ್ಕೂ ಹೆಚ್ಚು ಜನರಿಗೆ ಗಂಭೀರ ಗಾಯಗಳಾಗಿವೆ.
ಮಧ್ನಾಹ್ನ 3.50ರಲ್ಲಿ ಭೂಕುಸಿತ ಸಂಭವಿಸಿದ್ದು ಸ್ಥಳದಲ್ಲೇ ಐವರು ಮೃತಪಟ್ಟಿದ್ದು ನಂತರ ಸಾವಿನ ಸಂಖ್ಯೆ 7ಕ್ಕೆ ಏರಿಕೆಯಾಗಿದೆ.
ಗಾಯಾಳುಗಳನ್ನು ಕತ್ರಾ ನಗರದ ನಾರಾಯಣ ಸೂಪರ್ ಸ್ಪೆಶಾಲಿಟಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಸದ್ಯ ರಕ್ಷಣಾ ಕಾರ್ಯಾಚರಣೆ ಮುಂದುವರೆಯುತ್ತಿದ್ದು ನಂತರ ಸಂಪೂರ್ಣ ಮಾಹಿತಿ ಸಿಗಲಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
ಜಮ್ಮು ಮತ್ತು ಕಾಶ್ಮೀರJammu and KashmirlandslideಭೂಕುಸಿತReasi districtSehar Baba Areaರಿಯಾಸಿ ಜಿಲ್ಲೆಸೆಹರ್ ಬಾಬಾ ಪ್ರದೇಶ
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


