ಪ್ರತ್ಯೇಕತವಾದಿ ಆಸಿಯಾ ಅಂದ್ರಾಬಿ ಒಂದು ತಿಂಗಳ ಕಾಲ ನ್ಯಾಯಾಂಗ ಬಂಧನಕ್ಕೆ
ಪಾಕಿಸ್ತಾನದ ಬೆಂಬಲದೊಂದಿಗೆ ದೇಶದ ವಿರುದ್ದವೇ ಪಿತ್ತೂರಿ ನಡೆಸುತ್ತಿದ್ದ ಆರೋಪಕ್ಕೆ ಸಂಬಂಧಿಸಿದಂತೆ ದೆಹಲಿ ನ್ಯಾಯಾಲಯ ಇಂದು ಕಾಶ್ಮೀರದ ಪ್ರತ್ಯೇಕತವಾದಿ ಆಸಿಯಾ ಅಂದ್ರಾಬಿಯನ್ನು ಒಂದು ತಿಂಗಳ ಕಾಲ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ.

ನವದೆಹಲಿ:ಪಾಕಿಸ್ತಾನದ ಬೆಂಬಲದೊಂದಿಗೆ ದೇಶದ ವಿರುದ್ದವೇ ಪಿತ್ತೂರಿ ನಡೆಸುತ್ತಿದ್ದ ಆರೋಪಕ್ಕೆ ಸಂಬಂಧಿಸಿದಂತೆ ದೆಹಲಿ ನ್ಯಾಯಾಲಯ ಇಂದು ಕಾಶ್ಮೀರದ ಪ್ರತ್ಯೇಕತವಾದಿ ಆಸಿಯಾ ಅಂದ್ರಾಬಿಯನ್ನು ಒಂದು ತಿಂಗಳ ಕಾಲ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ.
ಅಂದ್ರಾಬಿ ನಿಷೇಧಿತ ದುಕ್ ತರೇನ್ -ಇ- ಮಿಲತ್ ಸಂಘಟನೆಯ ಮುಖ್ಯಸ್ಥೆಯಾಗಿದ್ದು, 10 ದಿನಗಳ ಎನ್ ಐಎ ವಶದ ನಂತರ ಇಬ್ಬರು ಮಹಿಳಾ ಸಹಚರರೊಂದಿಗೆ ಆಕೆಯನ್ನು ಇಂದು ನ್ಯಾಯಾಲಯಕ್ಕೆ ಹಾಜರುಪಡಿಸಲಾಯಿತು.
ಹೆಚ್ಚಿನ ವಿಚಾರಣೆಯ ಅಗತ್ಯವಿಲ್ಲ ಎಂದು ಎನ್ ಐಎ ಹೇಳಿಕೆ ನೀಡಿದ್ದ ಹಿನ್ನೆಲೆಯಲ್ಲಿ ಜಿಲ್ಲಾ ನ್ಯಾಯಾಧೀಶ ಪೊನಾಮ್ ಎ ಬಾಂಬ ಅವರು ಮೂವರು ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದರು.
ನೆರೆಯ ಪಾಕಿಸ್ತಾನದ ಬೆಂಬಲ ಪಡೆದು ದೇಶದ ಸಾರ್ವಭೌಮತ್ವ ಹಾಗೂ ಸಮಗ್ರತೆಗೆ ಧಕ್ಕೆ ತರುವಂತಹ ಪಿತೂರಿ ಕೆಲಸದಲ್ಲಿ ತೊಡಗಿದ್ದರು ಎಂದು ಎನ್ ಐಎ ಹೇಳಿಕೆ ನೀಡಿತ್ತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


