ಗಗನಸಖಿ ಸಾವಿನ ಪ್ರಕರಣಕ್ಕೆ ಟ್ವಿಸ್ಟ್ ಪತಿಯನ್ನು ಬಂಧಿಸಿದ ಪೊಲೀಸರು!
ದೆಹಲಿಯಲ್ಲಿ ಅಪಾರ್ಟ್ ಮೆಂಟ್ ನಿಂದ ಕೆಳಗೆ ಹಾರಿ ಗಗನಸಖಿಯೊರ್ವಳು ಮೃತಪಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಆಕೆಯ ಪತಿಯನ್ನು ಪೊಲೀಸರು ಬಂಧಿಸಿದ್ದಾರೆ...

Published On :
ನವದೆಹಲಿ: ದೆಹಲಿಯಲ್ಲಿ ಅಪಾರ್ಟ್ ಮೆಂಟ್ ನಿಂದ ಕೆಳಗೆ ಹಾರಿ ಗಗನಸಖಿಯೊರ್ವಳು ಮೃತಪಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಆಕೆಯ ಪತಿಯನ್ನು ಪೊಲೀಸರು ಬಂಧಿಸಿದ್ದಾರೆ.
ಮೃತ 39 ವರ್ಷದ ಅನಿಸಿಯಾ ಬಾತ್ರಾ ಜರ್ಮನ್ ಏರ್ ಲೈನ್ಸ್ ನ ಉದ್ಯೋಗಿಯಾಗಿದ್ದು ಜುಲೈ 13ರಂದು ಸಂಜೆ ಪಂಚಶೀಲ ಪಾರ್ಕ್ ಕಟ್ಟಡದಿಂದ ಕೆಳಗೆ ಹಾರಿದ್ದರು. ಕೂಡಲೇ ಆಕೆಯ ಪತಿ ಆಸ್ಪತ್ರೆಗೆ ಕರೆದೊಯ್ದಿದ್ದರು. ಆದರೆ ಮಾರ್ಗಮಧ್ಯೆ ಅನಿಸಿಯಾ ಮೃತಪಟ್ಟಿದ್ದರು.
ಅನಿಸಿಯಾದು ಆತ್ಮಹತ್ಯೆಯಲ್ಲ ಕೊಲೆಯೆಂದು ಆಕೆಯ ಪೋಷಕರು ಆರೋಪಿಸಿದ್ದರು. ಈ ಹಿನ್ನೆಲೆಯಲ್ಲಿ ಸಾಫ್ಟ್ ವೇರ್ ಉದ್ಯೋಗಿ ಮಾಯಾಂಕ್ ಸಿಂಘ್ವಿ ಅವರನ್ನು ಪೊಲೀಸರು ಬಂಧಿಸಿದ್ದಾರೆ.
ಪೊಲೀಸರು ಮಂಗಳವಾರ ಮಾಯಾಂಕ್ ಸಿಂಘ್ವಿಯನ್ನು ಕೋರ್ಟ್ ಮುಂದೆ ಹಾಜರುಪಡಿಸಲಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


