ದೇಶ

ಅಮಿತ್ ಶಾ ಸೂಚಿಸಿದ್ದೇ ಆದರೆ, ಸಂತಸದಿಂದ ಕರ್ನಾಟಕದಲ್ಲಿ ಸರ್ಕಾರ ರಚಿಸುತ್ತೇನೆ: ಸುಬ್ರಮಣಿಯನ್ ಸ್ವಾಮಿ

ಕರ್ನಾಟಕ ರಾಜ್ಯದಲ್ಲಿ ಸರ್ಕಾರ ರಚಿಸುವಂತೆ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಸೂಚಿಸಿದ್ದೇ ಆದರೆ, ಸಂತಸದಿಂದ ಸರ್ಕಾರ ರಚಿಸುತ್ತೇನೆಂದು ಬಿಜೆಪಿ ಹಿರಿಯ ನಾಯಕ ಸುಬ್ರಮಣಿಯನ್ ಸ್ವಾಮಿಯವರು ಸೋಮವಾರ ಹೇಳಿದ್ದಾರೆ...

ಅಮಿತ್ ಶಾ ಸೂಚಿಸಿದ್ದೇ ಆದರೆ, ಸಂತಸದಿಂದ ಕರ್ನಾಟಕದಲ್ಲಿ ಸರ್ಕಾರ ರಚಿಸುತ್ತೇನೆ: ಸುಬ್ರಮಣಿಯನ್ ಸ್ವಾಮಿ
ಬಿಜೆಪಿ ಹಿರಿಯ ನಾಯಕ ಸುಬ್ರಮಣಿಯನ್ ಸ್ವಾಮಿ
Published On :
ನವದೆಹಲಿ: ಕರ್ನಾಟಕ ರಾಜ್ಯದಲ್ಲಿ ಸರ್ಕಾರ ರಚಿಸುವಂತೆ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಸೂಚಿಸಿದ್ದೇ ಆದರೆ, ಸಂತಸದಿಂದ ಸರ್ಕಾರ ರಚಿಸುತ್ತೇನೆಂದು ಬಿಜೆಪಿ ಹಿರಿಯ ನಾಯಕ ಸುಬ್ರಮಣಿಯನ್ ಸ್ವಾಮಿಯವರು ಸೋಮವಾರ ಹೇಳಿದ್ದಾರೆ. 
ಸಮ್ಮಿಶ್ರ ಸರ್ಕಾರದಲ್ಲಿ ವಿಷಕಂಠನಂತೆ ನೋವುಗಳನ್ನು ನುಂಗಿ, ಅಮೃತವನ್ನು ನೀಡುವ ಪ್ರಯತ್ನ ಮಾಡುತ್ತಿದ್ದೇನೆಂಬ ಕುಮಾರಸ್ವಾಮಿಯವರ ಹೇಳಿಕೆಗೆ ಪ್ರತಿಕ್ರಿಯೆ ನೀಡಿರುವ ಅವರು, ಮುಖ್ಯಮಂತ್ರಿಯಾಗುವ ಕುಮಾರಸ್ವಾಮಿಯವರ ಕನಸು ನನಸಾಗಿದೆ. ಮುಖ್ಯಮಂತ್ರಿಯಾಗಿರುವುದು ತಮಗೆ ಸಂತಸ ತಂದಿಲ್ಲ ಎಂದು ಅವರು ಹೇಳಿದ್ದಾರೆ. ಈ ಬೇಸರ ಹೆಚ್ಚು ದಿನಗಳ ಕಾಲವಿರುವುದಿಲ್ಲ. ಪರಿಸ್ಥಿತಿಗಳು ಶೀಘ್ರದಲ್ಲಿಯೇ ಬದಲಾಗಲಿದೆ. ಕರ್ನಾಟಕದಲ್ಲಿ ಸರ್ಕಾರ ರಚನೆ ಮಾಡಲು ಅಮಿತ್ ಶಾ ಸೂಚಿಸಿದ್ದೇ ಆದರೆ, ಸಂತಸದಿಂದ ಸರ್ಕಾರ ರಚನೆ ಮಾಡುತ್ತೇನೆಂದು ಹೇಳಿದ್ದಾರೆ. 
ಯಾವುದೇ ಪಕ್ಷಗಳು ಕೈಜೋಡಿಸದೇ ಇರುವುದರಿಂದ ಕಾಂಗ್ರೆಸ್ ಪಕ್ಷ ಇದೀಗ ಹತಾಶೆಗೊಳಗಾಗಿದೆ. ಇದೀಗ ಕಾಂಗ್ರೆಸ್ ದೊಡ್ಡ ಸಂಕಷ್ಟಕ್ಕೆ ಸಿಲುಕಿಕೊಂಡಿದೆ. ಕರ್ನಾಟಕದಲ್ಲಿ ಏನಾಯಿತು ಎಂಬುದು ಎಲ್ಲರಿಗೂ ಗೊತ್ತಿದೆ. ಕರ್ನಾಟಕ ರಾಜ್ಯದಲ್ಲಿ ಇದ್ದಕ್ಕಿದ್ದಂತೆಯೇ ಪರಿಸ್ಥಿತಿಗಳು ಬದಲಾದವು. ತಮಗಾಗುತ್ತಿರುವ ಅವಮಾನದಿಂದಾಗಿ ಕೆಲವೊಮ್ಮೆ ಕಾಂಗ್ರೆಸ್ ನಾಯಕರು ದೇಗುಲಗಳಿಗೆ ಭೇಟಿ ನೀಡಿದರೆ, ಮತ್ತೆ ಕೆಲವೊಮ್ಮೆ ಮುಸ್ಲಿಮರಿಗೆ ಬೆಂಬಲ ನೀಡುತ್ತಿದ್ದಾರೆಂದು ವ್ಯಂಗ್ಯವಾಡಿದ್ದಾರೆ. 
ಜೆಪಿ ಭವನದಲ್ಲಿರುವ ಜೆಡಿಎಸ್ ಕಚೇರಿಯಲ್ಲಿ ಹಮ್ಮಿಕೊಳ್ಳಲಾಗಿದ್ದ ಪಕ್ಷದ ನೂತನ ಸಚಿವರು ಮತ್ತು ಶಾಸಕರ ಅಭಿನಂದನಾ ಕಾರ್ಯಕ್ರಮದಲ್ಲಿ ಮಾತನಾಡಿದ್ದ ಕುಮಾರಸ್ವಾಮಿಯವರು ತೀವ್ರ ಭಾವೋದ್ವೇಗಕ್ಕೆ ಒಳಗಾಗಿದ್ದರು.
ರಾಜ್ಯ ಸಮ್ಮಿಶ್ರ ಸರ್ಕಾರ ಮುಖ್ಯಮಂತ್ರಿಯಾಗಿರುವುದಕ್ಕೆ ಕಾರ್ಯಕರ್ತರಿಗೆ ಸಂತೋಷವಾಗಿದೆ. ಆದರೆ, ನಾನು ಸಂತೋಷದಲ್ಲಿಲ್ಲ. ನೋವಿನ ವಿಷ ನುಂಗುತ್ತಿರುವ ನಾನು ವಿಷಕಂಠನಾಗಿದ್ದು, ನಿಮಗೆ ಅಮೃತ ನೀಡುವ ಪ್ರಯತ್ನಗಳನ್ನು ಮಾಡುತ್ತಿದ್ದೇನೆಂದು ಕುಮಾರಸ್ವಾಮಿಯವರು ಹೇಳಿದ್ದರು. 

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.