ಮತಾಂತರಗೊಳ್ಳುವ ಜನರಿಗೆ ಸರ್ಕಾರಿ ಸೌಲಭ್ಯಗಳನ್ನು ನಿಷೇಧಿಸಬೇಕು; ಬಿಜೆಪಿ ಸಂಸದ
ಮತಾಂತರಗೊಂಡು ಧರ್ಮ ಬದಲಿಸಿಕೊಳ್ಳುವ ಜನರಿಗೆ ಸರ್ಕಾರಿ ಸೌಲಭ್ಯಗಳನ್ನು ನಿಷೇಧಿಸಬೇಕೆಂದು ಬಿಜೆಪಿ ಸಂಸದ ದಿನೇಶ್ ಕಶ್ಯಪ್ ಅವರು ಸೋಮವಾರ ಹೇಳಿದ್ದಾರೆ...

Published On :
ಜಗ್ದಾಲ್ಪುರ: ಮತಾಂತರಗೊಂಡು ಧರ್ಮ ಬದಲಿಸಿಕೊಳ್ಳುವ ಜನರಿಗೆ ಸರ್ಕಾರಿ ಸೌಲಭ್ಯಗಳನ್ನು ನಿಷೇಧಿಸಬೇಕೆಂದು ಬಿಜೆಪಿ ಸಂಸದ ದಿನೇಶ್ ಕಶ್ಯಪ್ ಅವರು ಸೋಮವಾರ ಹೇಳಿದ್ದಾರೆ.
ಸಾರ್ವಜನಿಕ ರ್ಯಾಲಿಯೊಂದರಲ್ಲಿ ಮಾತನಾಡಿರುವ ಅವನರು, ಮತಾಂತರಗೊಳ್ಳುತ್ತಿರುವುದೇ ದೊಡ್ಡ ಸಮಸ್ಯೆಯಾದಿ ಪರಿಣಮಿಸಿದೆ. ಮತಾಂತರಗೊಳ್ಳುವ ಜನರಿಗೆ ಸರ್ಕಾರಿ ಸೌಲಭ್ಯಗಳನ್ನು ನಿಷೇಧಿಸಬೇಕು ಎಂದು ಹೇಳಿದ್ದಾರೆ.
ಪ್ರಮುಖವಾಗಿ ಧರ್ಮ ಬದಲಿಸಿಕೊಳ್ಳುವ ಆದಿವಾಸಿಗಳಿಗೆ ಸರ್ಕಾರಿ ಸೌಲಭ್ಯಗಳನ್ನು ನಿಷೇಧಿಸಬೇಕು ಎಂದು ತಿಳಿಸಿದ್ದಾರೆ.
ಈ ಹೇಳಿಕೆಗೆ ಕೆಲ ಪರ ಹಾಗೂ ವಿರೋಧ ಪ್ರತಿಕ್ರಿಯೆಗಳು ವ್ಯಕ್ತವಾದ ಬಳಿಕ ತಮ್ಮ ಹೇಳಿಕೆಯನ್ನು ಸಮರ್ಥಿಸಿಕೊಂಡ ಕಶ್ಯಪ್ ಅವರು, ಇದು ನನ್ನ ವೈಯಕ್ತಿಕ ಅಭಿಪ್ರಾಯ. ಮತಾಂತರಗೊಳ್ಳುವ ಜನರಿಗೆ ಸರ್ಕಾರಿ ಸೌಲಭ್ಯಗಳನ್ನು ನಿಷೇಧಿಸಬೇಕು. ಇದನ್ನು ಅನುಸರಿಸುವುದು ಉತ್ತಮವಾಗಿರುತ್ತದೆ. ಈ ರೀತಿಯ ನಿರ್ಧಾರದಿಂದ ಮತಾಂತರಗೊಳ್ಳುವ ಸಂಖ್ಯೆಗಳೂ ಕೂಡ ಕಡಿಮೆಯಾಗುತ್ತದೆ ಎಂದು ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


