ಚಲಿಸುತ್ತಿದ್ದ ರೈಲು ಹತ್ತಲು ಹೋಗಿ ಅಪಾಯಕ್ಕೆ ಸಿಲುಕಿದ್ದ ವ್ಯಕ್ತಿಯ ರಕ್ಷಣೆ, ವಿಡಿಯೋ ವೈರಲ್
ಚಲಿಸುತ್ತಿದ್ದ ರೈಲು ಹತ್ತಲು ಹೋಗಿ ಪ್ರಯಾಣಿಕನೋರ್ವ ಅಪಾಯಕ್ಕೆ ಸಿಲುಕಿದ್ದ ಘಟನೆ ಸೋಮವಾರ ಮುಂಬೈನಲ್ಲಿ ನಡೆದಿದೆ.

Published On :
ಮುಂಬೈ: ಚಲಿಸುತ್ತಿದ್ದ ರೈಲು ಹತ್ತಲು ಹೋಗಿ ಪ್ರಯಾಣಿಕನೋರ್ವ ಅಪಾಯಕ್ಕೆ ಸಿಲುಕಿದ್ದ ಘಟನೆ ಸೋಮವಾರ ಮುಂಬೈನಲ್ಲಿ ನಡೆದಿದೆ.
ಮುಂಬೈನ ಪನ್ವೆಲ್ ರೈಲು ನಿಲ್ದಾಣದಲ್ಲಿ ಈ ಘಟನೆ ನಡೆದಿದ್ದು, ಸಹ ಪ್ರಯಾಣಿಕರು ಮತ್ತು ರೈಲ್ವೇ ಪೊಲೀಸ್ ಅಧಿಕಾರಿಗಳ ಸಮಯ ಪ್ರಜ್ಞೆಯಿಂದ ಆಗಹುದಾಗಿದ್ದ ದುರಂತ ಕೂದಲೆಳೆ ಅಂತರದಲ್ಲಿ ತಪ್ಪಿದೆ.
ಚಲಿಸುತ್ತಿದ್ದ ರೈಲು ಹತ್ತಲು ಹೋದ ವ್ಯಕ್ತಿ ನಿಯಂತ್ರಣ ಸಿಗದೇ ರೈಲಿನ ಕಂಬಿ ಹಿಡಿದು ನೇತಾಡುತ್ತಿದ್ದ. ರೈಲು ವೇಗವಾಗಿ ಚಲಿಸುತ್ತಿದ್ದರಿಂದ ಆತ ಒಳಗೂ ಹೋಗಲಾರದೇ ರೈಲಿನಿಂದ ಕೆಳಗೂ ಇಳಿಯಲಾಗದೇ ಅಪಾಯಕ್ಕೆ ಸಿಲುಕಿದ್ದ. ಇದನ್ನು ಕಂಡ ಸಹ ಪ್ರಯಾಣಿಕರು ಜೋರಾಗಿ ಕೂಗಿದ್ದು, ಈ ವೇಳೆ ನಿಲ್ದಾಣದಲ್ಲಿದ್ದ್ ರೈಲ್ವೇ ಪೊಲೀಸರು ಕೂಡಲೇ ಓಡಿ ಹೋಗಿ ರೈಲಿನಲ್ಲಿ ನೇತಾಡುತ್ತಿದ್ದ ವ್ಯಕ್ತಿಯನ್ನು ಹಿಡಿದು ಎಳೆದುಕೊಂಡಿದ್ದಾರೆ.
ಆ ಮೂಲಕ ಸಾವಿನ ಅಂಚಿನಲ್ಲಿದ್ದ ವ್ಯಕ್ತಿ ಕೂದಲೆಳೆ ಅಂತರದಲ್ಲಿ ಅಪಾಯದಿಂದ ಪಾರಾಗಿದ್ದಾನೆ. ನಿಲ್ದಾಣದಲ್ಲಿದ್ದ ಸಿಸಿಟಿವಿ ಈ ದೃಶ್ಯಾವಳಿಯನ್ನು ಸೆರೆ ಹಿಡಿದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಈ ವಿಡಿಯೋ ವೈರಲ್ ಆಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
MumbaiಮುಂಬೈIndian Railwayಭಾರತೀಯ ರೈಲ್ವೇRailway policeರೈಲ್ವೇ ಪೊಲೀಸ್Panvel railway stationಪನ್ವೆಲ್ ರೈಲು ನಿಲ್ದಾಣ
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


