ಪ್ರವೀಣ್ ತೊಗಾಡಿಯಾಗೆ ಗುವಾಹತಿ ಪ್ರವೇಶಿಸದಂತೆ ನಿಷೇಧ
ಮುಂದಿನ ಎರಡು ತಿಂಗಳ ಕಾಲ ರಾಜಧಾನಿಯಲ್ಲಿ ಯಾವುದೇ ಸಾರ್ವಜನಿಕ ಸಭೆಗಳಲ್ಲಿ ಭಾಗವಹಿಸದಂತೆ ಮಾಜಿ...

Published On :
ಗುವಾಹತಿ: ಮುಂದಿನ ಎರಡು ತಿಂಗಳ ಕಾಲ ರಾಜಧಾನಿಯಲ್ಲಿ ಯಾವುದೇ ಸಾರ್ವಜನಿಕ ಸಭೆಗಳಲ್ಲಿ ಭಾಗವಹಿಸದಂತೆ ಮಾಜಿ ವಿಶ್ವ ಹಿಂದೂ ಪರಿಷತ್ ನಾಯಕ ಪ್ರವೀಣ್ ತೊಗಾಡಿಯಾ ಅವರಿಗೆ ಗುವಾಹತಿ ಪೊಲೀಸರು ನಿಷೇಧ ಹೇರಿದ್ದಾರೆ.
ಪ್ರವೀಣ್ ತೊಗಾಡಿಯಾ ಅವರು ಇಂದು ಮತ್ತು ಜುಲೈ 19ರಂದು ಗುವಾಹತಿಯಲ್ಲಿ ಅಂತರಾಷ್ಟ್ರೀಯ ಹಿಂದೂ ಪರಿಷತ್ ಸರಣಿ ಸಭೆಗಳಲ್ಲಿ ಭಾಗವಹಿಸಬೇಕಿತ್ತು. ಆದರೆ ಅವರು ಪ್ರಚೋದನಕಾರಿ ಹೇಳಿಕೆ ನೀಡುವ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ ಅವರಿಗೆ ನಿಷೇಧ ಹೇರಲಾಗಿದೆ ಮತ್ತು ನಗರದಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ ಎಂದು ಗುವಾಹತಿ ಪೊಲೀಸ್ ಆಯುಕ್ತ ಹಿರೆನ್ ಚಂದ್ರ ನಾಥ್ ಅವರು ತಿಳಿಸಿದ್ದಾರೆ.
ಹಿಂದೂತ್ವ ನಾಯಕ ಪ್ರವೀಣ್ ತೊಗಾಡಿಯಾ ಅವರು ಸೂಕ್ಷ್ಮ ಮತ್ತು ಪ್ರಚೋದನಕಾರಿ ಹೇಳಿಕೆ ನೀಡುವ ಸಾಧ್ಯತೆ ಇದೆ. ಪ್ರಚೋದನಕಾರಿ ಹೇಳಿಕೆಯಿಂದ ಧಾರ್ಮಿಕ ಭಾವನೆಗೆ ಧಕ್ಕೆಯಾಗುವ ಮತ್ತು ಶಾಂತಿ ಕದಡುವ ಸಾಧ್ಯತೆ ಇತ್ತು. ಹೀಗಾಗಿ ಅವರಿಗೆ ನಿಷೇಧ ಹೇರಲಾಗಿದೆ ಎಂದು ನಾತ್ ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


