ರಾಹುಲ್ ಗಾಂಧಿ ವಿದೇಶಿ ಮೂಲದ ಬಗ್ಗೆ ಹೇಳಿಕೆ: ಬಿಎಸ್ ಪಿ ರಾಷ್ಟ್ರೀಯ ಸಂಯೋಜಕನ ವಜಾ
ರಾಹುಲ್ ಗಾಂಧಿ ವಿದೇಶಿ ಮೂಲದ ಬಗ್ಗೆ ಮಾತನಾಡಿದ್ದ ಬಿಎಸ್ ಪಿ ರಾಷ್ಟ್ರೀಯ ಸಂಯೋಜಕನ ವಿರುದ್ಧ ಮಾಯಾವತಿ ಕ್ರಮ ಕೈಗೊಂಡಿದ್ದಾರೆ.

Published On :
ನವದೆಹಲಿ: ರಾಹುಲ್ ಗಾಂಧಿ ವಿದೇಶಿ ಮೂಲದ ಬಗ್ಗೆ ಮಾತನಾಡಿದ್ದ ಬಿಎಸ್ ಪಿ ರಾಷ್ಟ್ರೀಯ ಸಂಯೋಜಕನ ವಿರುದ್ಧ ಮಾಯಾವತಿ ಕ್ರಮ ಕೈಗೊಂಡಿದ್ದಾರೆ. ಈ ಬೆಳವಣಿಗೆ 2019 ರ ಲೋಕಸಭಾ ಚುನಾವಣೆಗೆ ಕಾಂಗ್ರೆಸ್ ನೇತೃತ್ವದಲ್ಲಿ ಉಳಿದ ಪ್ರಾದೇಶಿಕ ಪಕ್ಷಗಳು ಮಹಾಘಟಬಂಧನ ರಚನೆ ಮಾಡುತ್ತವೆ ಎಂಬ ಊಹಾಪೋಹಗಳಿಗೆ ಇಂಬು ನೀಡುವಂತಿದೆ.
ಪಕ್ಷದ ಸಂಯೋಜಕ ಹುದ್ದೆಯಲ್ಲಿದ್ದ ಜೈ ಪ್ರಕಾಶ್ ಸಿಂಗ್ ಅವರನ್ನು ಹುದ್ದೆಯಿಂದ ವಜಾಗೊಳಿಸಿರುವ ಮಾಯಾವಗಿ 2019 ರ ಲೋಕಸಭಾ ಚುನಾವಣೆಗೆ ಮೈತ್ರಿ ರಚನೆಯಾಗುವುದರ ಬಗ್ಗೆ ಅಧಿಕೃತ ಘೋಷಣೆ ಹೊರಬೀಳುವವರೆಗೂ ಪಕ್ಷದಲ್ಲಿ ಯಾರೊಬ್ಬರೂ ಮೈತ್ರಿಯ ಬಗ್ಗೆ ಮಾತನಾಡಬಾರದು ಎಂದು ಹೇಳಿದ್ದಾರೆ.
ವಿಪಕ್ಷಗಳ ನಾಯಕರ ವಿರುದ್ಧ ವೈಯಕ್ತಿಕ ವಿಷಯಗಳನ್ನಿಟ್ಟುಕೊಂಡು ವಾಗ್ದಾಳಿ ನಡೆಸಿರುವುದಕ್ಕಾಗಿ ಜೈ ಪ್ರಕಾಶ್ ಸಿಂಗ್ ಅವರನ್ನು ಪಕ್ಷದ ಸಂಯೋಜಕ ಹುದ್ದೆಯಿಂದ ವಜಾ ಮಾಡುತ್ತಿರುವುದಾಗಿ ಮಾಯಾವತಿ ಹೇಳಿದ್ದಾರೆ.
ರಾಹುಲ್ ಗಾಂಧಿ ಅವರ ವಿದೇಶಿ ಮೂಲವನ್ನು ಉಲ್ಲೇಖಿಸಿ ಮಾತನಾಡಿದ್ದ ಜೈ ಪ್ರಕಾಶ್ ಸಿಂಗ್ ರಾಹುಲ್ ಗಾಂಧಿ ಅವರ ತಾಯಿ ವಿದೇಶಿಗರಾಗಿರುವುದರಿಂದ ರಾಹುಲ್ ಗಾಂಧಿ ದೇಶದ ಪ್ರಧಾನಿಯಾಗುವುದಕ್ಕೆ ಸಾಧ್ಯವಿಲ್ಲ ಎಂದು ಜೈ ಪ್ರಕಾಶ್ ಸಿಂಗ್ ಹೇಳಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Mayawatiಮಾಯಾವತಿಬಿಎಸ್ ಪಿ2019 elections2019 ಲೋಕಸಭಾ ಚುನಾವಣೆವಿರೋಧಪಕ್ಷಗಳುOpposition AlliancesBSP National coordinator
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.
ಬ್ರೇಕಿಂಗ್ ನ್ಯೂಸ್
ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಹೆಚ್ಚಿದ ಒತ್ತಡ: ಮುಖ್ಯ ಚುನಾವಣಾ ಆಯುಕ್ತರನ್ನ ವಜಾ ಮಾಡೊದು ಅಷ್ಟು ಸುಲಭನಾ? ಯಾರಿಗಿದೆ ಆ ಪವರ್? ಸಂವಿಧಾನ ಹೇಳುವುದೇನು?ರಾಹುಕಾಲ ಎಂದರೇನು? ಮದುವೆಗೆ ಅನ್ವಯಿಸುತ್ತದೆಯೇ? ರಾಹು ಶಾಂತಿಗಾಗಿ ನಿಂಬೆ ಹಣ್ಣು ದೀಪ ಹಚ್ಚುವುದು ಸೂಕ್ತವೇ?ಗೌರಿಬಿದನೂರಿನ ಮಣ್ಣಲ್ಲಿ ಅರಳಿದ ಮರುಭೂಮಿ ಹಣ್ಣು: ಅಸಾಧ್ಯವನ್ನು ಸಾಧ್ಯವಾಗಿಸಿದ ಹಠವಾದಿ; ಸ್ವಾವಲಂಬಿ ಕೃಷಿಗೆ ಹೊಸ ಭಾಷ್ಯ ಬರೆದ ದಿವಾಕರ್ ಚನ್ನಪ್ಪ..!ಕರ್ನಾಟಕದ ನಂ.1 ಶ್ರೀಮಂತ ಯಾರು ಗೊತ್ತಾ? ಅಂಬಾನಿ, ಅದಾನಿ ಬಿಡಿ; ಇಲ್ಲಿದೆ ನಮ್ಮ ಕರುನಾಡ ಸಿರಿವಂತರ ಟಾಪ್ ಲಿಸ್ಟ್!ಫ್ಯಾಟ್ ನಿಂದ ಫಿಟ್ ವರೆಗೆ: ಸಾಹೇಬಲಾಲ್ ಛಪ್ಪರ್ಬಂದ್ ಸ್ಫೂರ್ತಿದಾಯಕ ಪಯಣವಿದೇಶಿ ಪ್ರವಾಸದ ಪ್ಲ್ಯಾನ್ ಇದೆಯೇ? ಒಂದು ಸಣ್ಣ ತಪ್ಪು ಭಾರೀ ದಂಡಕ್ಕೆ ಕಾರಣವಾಗಬಹುದು; ಪ್ರವಾಸಿಗರು ತಿಳಿದಿರಲೇಬೇಕಾದ ನಿಯಮಗಳಿವು...!ಮನಸ್ಸಿದ್ದರೆ ಮಾರ್ಗ ಎಂಬುದನ್ನು ರುಜುವಾತು ಮಾಡಿದ ಛಲವಾದಿ; 27 ವರ್ಷಗಳ ಹೋರಾಟದಲ್ಲಿ 26 ಬಾರಿ ಸೋತು 59ನೇ ವಯಸ್ಸಿನಲ್ಲಿ ಸರ್ಕಾರಿ ಶಿಕ್ಷಕರಾದ ವಿಜಯ್ಪಶ್ಚಿಮ ಘಟ್ಟಗಳ ESA - ಕಸ್ತೂರಿರಂಗನ್ ವರದಿ ಇನ್ನೂ ಏಕೆ ಜಾರಿಗೆ ಬಂದಿಲ್ಲ?


