ಕಲಾಂ 'ವಿಶನ್ 2020' ಕನಸು ಪ್ರಧಾನಿ ಮೋದಿಯವರ 'ನವ ಭಾರತ'ದಿಂದ ಸಾಕಾರ: ಜಿತೇಂದ್ರ ಸಿಂಗ್
ಮಾಜಿ ರಾಷ್ಟ್ರಪತಿ ದಿವಂಗತ ಡಾ. ಎಪಿಜೆ ಅಬ್ದುಲ್ ಕಲಾಂ ಅವರ 'ವಿಶನ್ 2020' ಕನಸು ಪ್ರಧಾನಿ ನರೇಂದ್ರಮೋದಿ ಅವರ 'ನವ ಭಾರತ'ದಿಂದ ಸಾಕಾರಗೊಳ್ಳುತ್ತಿದೆ ಎಂದು ಕೇಂದ್ರ ಸಚಿವ ಜೀತೆಂದ್ರ ಸಿಂಗ್ ಹೇಳಿದ್ದಾರೆ.

ನವದೆಹಲಿ: ಮಾಜಿ ರಾಷ್ಟ್ರಪತಿ ದಿವಂಗತ ಡಾ. ಎಪಿಜೆ ಅಬ್ದುಲ್ ಕಲಾಂ ಅವರ 'ವಿಶನ್ 2020' ಕನಸು ಪ್ರಧಾನಿ ನರೇಂದ್ರಮೋದಿ ಅವರ 'ನವ ಭಾರತ'ದಿಂದ ಸಾಕಾರಗೊಳ್ಳುತ್ತಿದೆ ಎಂದು ಕೇಂದ್ರ ಸಚಿವ ಜೀತೆಂದ್ರ ಸಿಂಗ್ ಹೇಳಿದ್ದಾರೆ.
ರಾಷ್ಟ್ರ ರಾಜಧಾನಿಯಲ್ಲಿ ಅಪಿಜೆ ಅಬ್ದುಲ್ ಕಲಾಂ ಕುರಿತ ವಿಶೇಷ ಉಪನ್ಯಾಸ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, 2020 ರೊಳಗೆ ಭಾರತ ಅಭಿವೃದ್ದಿ ಆಗಬೇಕೆಂದು ಅಬ್ದುಲ್ ಕಲಾಂ ಕನಸು ಕಂಡಿದ್ದರು. ಪ್ರಧಾನಿ ನರೇಂದ್ರಮೋದಿ ಈ ಕನಸನ್ನು ಸಾಕಾರಗೊಳಿಸುತ್ತಿದ್ದಾರೆ ಎಂದು ತಿಳಿಸಿದರು.
ಕಲಾಂ ಅವರು ವಿಜ್ಞಾನ ಕ್ಷೇತ್ರದಲ್ಲಿ ಬೆಳೆಸಿಕೊಂಡಿದ್ದ ಆಸಕ್ತಿ ಕುರಿತು ಮಾತಾಡಿದ ಸಚಿವರು, ಕಲಾಂ ಸಾರ್ವಜನಿಕ ಹಾಗೂ ಖಾಸಗಿ ವಿಷಯಗಳಿಂದ ಅವರು ಎಂದಿಗೂ ವಿರೋಧ ಕಟ್ಟಿಕೊಂಡಿರಲಿಲ್ಲ, ಕಲಿಕೆ ಹಾಗೂ ಅವರ ಸ್ಪೊರ್ತಿಯುತ ಅನುಭಗಳು ಎಂದಿಗೂ ಪ್ರೇರಣೆಯಾಗಲಿವೆ ಎಂದು ಸ್ಮರಿಸಿದರು.
ಪ್ರಧಾನಮಂತ್ರಿ ಕಾರ್ಯಾಲಯದಲ್ಲಿ ಆಯೋಜಿಸಿದ್ದ ಸಮಾರಂಭದಲ್ಲಿ ಸಾರ್ವಜನಿಕ ಹಿತಾಸಕ್ತಿ ರಕ್ಷಣೆಗಾಗಿ ಶ್ರಮಿಸಿದ ಅಧಿಕಾರಿಗಳಿಗೆ ಅಬ್ದುಲ್ ಕಲಾಂ ಸ್ಮಾರಕ ಪ್ರಶಸ್ತಿಯನ್ನು ವಿತರಿಸಲಾಯಿತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


