ಬಿಜೆಪಿಯದ್ದು ಸಂಕುಚಿತ ಮನೋಭಾವ; ಶಶಿ ತರೂರ್ ಆರೋಪ
ಭಾರತೀಯ ಜನತಾ ಪಾರ್ಟಿಯನ್ನು ಸಂಕುಚಿತ ಮನೋಭಾವದ ಪಕ್ಷ ಎಂದು ಕಾಂಗ್ರೆಸ್ ನ ಹಿರಿಯ ...

ತಿರುವನಂತಪುರ: ಭಾರತೀಯ ಜನತಾ ಪಾರ್ಟಿಯನ್ನು ಸಂಕುಚಿತ ಮನೋಭಾವದ ಪಕ್ಷ ಎಂದು ಕಾಂಗ್ರೆಸ್ ನ ಹಿರಿಯ ಮುಖಂಡ ಶಶಿ ತರೂರ್ ಟೀಕಿಸಿದ್ದಾರೆ.
ಧರ್ಮದ ಹೆಸರಿನಲ್ಲಿ ಬಿಜೆಪಿ ಜನರನ್ನು ವಿಭಜಿಸಲು ನೋಡುತ್ತಿದೆ. ಬಿಜೆಪಿಯು ಚುನಾವಣೆ ದಿನ ಹತ್ತಿರ ಬರುವಾಗ ಜನರ ಮತಗಳನ್ನು ಧಾರ್ಮಿಕ ಧ್ರುವೀಕರಣ ಮಾಡುತ್ತದೆ ಎಂಬ ಗ್ರಹಿಕೆಯಿದೆ ಎಂದು ಎಎನ್ಐ ಸುದ್ದಿ ಸಂಸ್ಥೆಗೆ ಪ್ರತಿಕ್ರಿಯೆ ನೀಡಿದ್ದಾರೆ.
ರಾಹುಲ್ ಗಾಂಧಿ ನೇತೃತ್ವದ ಕಾಂಗ್ರೆಸ್ ಪಕ್ಷ ದೇಶದಲ್ಲಿರುವ ಸಮಸ್ಯೆಗಳನ್ನು ಕಾರ್ಯತಂತ್ರದ ಮೂಲಕ ಬಗೆಹರಿಸಲು ಯತ್ನಿಸುತ್ತಿದೆ. ಧಾರ್ಮಿಕ ವಿಚಾರಗಳಿಂದ ಕಾಂಗ್ರೆಸ್ ಯಾವತ್ತಿಗೂ ದೂರವಿರಲು ಪ್ರಯತ್ನಿಸುತ್ತದೆ. ಆದರೆ ಬಿಜೆಪಿ ಧರ್ಮದ ವಿಚಾರವಿಟ್ಟುಕೊಂಡೇ ರಾಜಕೀಯ ಮಾಡುತ್ತಿದೆ ಎಂದು ಆಪಾದಿಸಿದರು,
ಹಣದುಬ್ಬರ ನಿಯಂತ್ರಣ, ಕೃಷಿ ಸಮುದಾಯದ ಸಮಸ್ಯೆಗಳನ್ನು ಬಗೆಹರಿಸುವಲ್ಲಿ ಕೇಂದ್ರ ಸರ್ಕಾರ ವಿಫಲವಾಗಿದೆ .ದೇಶದಲ್ಲಿ ಆರ್ಥಿಕ ಪ್ರಗತಿ ಕುಂಠಿತಗೊಂಡಿದೆ, ಇಂಧನ ಬೆಲೆ ಏರಿಕೆ, ಆಹಾರ ಉತ್ಪನ್ನಗಳ ಬೆಲೆ ಏರಿಕೆ ಮತ್ತು ರಫ್ತು ಮತ್ತು ಉತ್ಪಾದನೆಯಲ್ಲಿ ಕುಸಿತಗೊಂಡಿರುವುದರಿಂದ ದೇಶದ ಜನತೆ ಬಿಜೆಪಿಯನ್ನು ಮುಂದಿನ ಚುನಾವಣೆಯಲ್ಲಿ ಗೆಲ್ಲಿಸುವುದಿಲ್ಲ ಎಂದು ಹೇಳಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


