ದೇಶ

ನೊಯ್ಡಾ: ನಿರ್ಮಾಣ ಹಂತದ 2 ಕಟ್ಟಡಗಳು ಕುಸಿತ; 3 ಸಾವು

ಗ್ರೇಟರ್ ನೊಯ್ಡಾದ ಶಾಹ್'ಬೆರಿ ಗ್ರಾಮದಲ್ಲಿ ನಿರ್ಮಾಣ ಹಂತದ ಎರಡು ಕಟ್ಟಡಗಳು ಕುಸಿದುಬಿದ್ದ ಪರಿಣಾಮ ಮೂವರು ಸಾವನ್ನಪ್ಪಿರುವ ಘಟನೆ ಮಂಗಳವಾರ ನಡೆದಿದೆ...

ನೊಯ್ಡಾ: ನಿರ್ಮಾಣ ಹಂತದ 2 ಕಟ್ಟಡಗಳು ಕುಸಿತ; 3 ಸಾವು
ನೊಯ್ಡಾದಲ್ಲಿ ನಿರ್ಮಾಣ ಹಂತದ 2 ಕಟ್ಟಡಗಳು ಕುಸಿತ
Published On :
ನವದೆಹಲಿ: ಗ್ರೇಟರ್ ನೊಯ್ಡಾದ ಶಾಹ್'ಬೆರಿ ಗ್ರಾಮದಲ್ಲಿ ನಿರ್ಮಾಣ ಹಂತದ ಎರಡು ಕಟ್ಟಡಗಳು ಕುಸಿದುಬಿದ್ದ ಪರಿಣಾಮ ಮೂವರು ಸಾವನ್ನಪ್ಪಿರುವ ಘಟನೆ ಮಂಗಳವಾರ ನಡೆದಿದೆ. 
ಕಟ್ಟಡ ಕುಸಿದು ಬಿದ್ದ ಸುದ್ದಿ ತಿಳಿಯುತ್ತಿದ್ದಂತೆಯೇ ಸ್ಥಳಕ್ಕಾಮಗಮಿಸಿರುವ ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆಗಳು (ಎನ್'ಡಿಆರ್'ಎಫ್) ಸ್ಥಳಕ್ಕೆ ಧಾವಿಸಿದ್ದು, ಭಾರೀ ರಕ್ಷಣಾ ಕಾರ್ಯಾಚರಣೆಗಳನ್ನು ನಡೆಸುತ್ತಿದೆ. ಕಾರ್ಯಾಚರಣೆ ವೇಳೆ ಈವರೆಗೂ ಮೂರು ಮೃತದೇಹಗಳನ್ನು ಹೊರೆ ತೆಗೆದಿದ್ದಾರೆ. 
ಕಟ್ಟಡ ಕುಸಿತ ಸಂದರ್ಭದಲ್ಲಿ ಹಲವಾರು ಕಾರ್ಮಿಕರು ಕಟ್ಟಡದಲ್ಲಿದ್ದರು ಎಂದು ಹೇಳಲಾಗುತ್ತಿದ್ದು, ಅವಶೇಷಗಳಡಿ ಸಿಲುಕಿಕೊಂಡಿರುವ ಶಂಕೆಗಳು ವ್ಯಕ್ತವಾಗಿವೆ. 
ಈ ಹಿನ್ನಲೆಯಲ್ಲಿ ರಕ್ಷಣಾ ಕಾರ್ಯಾಚರಣೆ ಭರದಿಂದ ಸಾಗಿದೆ. ಘಟನೆ ಕುರಿತಂತೆ ಪ್ರತಿಕ್ರಿಯೆ ನೀಡಿರುವ ಉತ್ತರಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು, ಎನ್'ಡಿಆರ್'ಎಫ್ ಪಡೆ ಜೊತೆಗೆ ರಕ್ಷಣಾ ಕಾರ್ಯಾಚರಣೆಯಲ್ಲಿ ನೆರವಾಗುವಂತೆ ಜಿಲ್ಲಾ ಪೊಲೀಸರಿಗೆ ಸೂಚಿಸಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.