ದೇಶ

ಬಿಜೆಪಿಗೆ ಗುಡ್ ಬೈ ಹೇಳಿದ ಹಿರಿಯ ಪತ್ರಕರ್ತ, ಅಡ್ವಾಣಿ ಆಪ್ತ ಚಂದನ್‌ ಮಿತ್ರ ಟಿಎಂಸಿ ಸೇರ್ಪಡೆ

ಎರಡು ಬಾರಿ ರಾಜ್ಯಸಭಾ ಸದಸ್ಯರಾಗಿದ್ದ ಬಿಜೆಪಿ ಹಿರಿಯ ನಾಯಕ ಎಲ್.ಕೆ. ಅಡ್ವಾಣಿ ಆಪ್ತ, ಪತ್ರಕರ್ತ ಚಂದನ್ ಮಿತ್ರ ಬಿಜೆಪಿ ತೊರೆದಿದ್ದಾರೆ.

ಬಿಜೆಪಿಗೆ ಗುಡ್ ಬೈ ಹೇಳಿದ ಹಿರಿಯ ಪತ್ರಕರ್ತ, ಅಡ್ವಾಣಿ ಆಪ್ತ ಚಂದನ್‌ ಮಿತ್ರ ಟಿಎಂಸಿ ಸೇರ್ಪಡೆ
ಚಂದನ್‌ ಮಿತ್ರ
Published On :
ಕೋಲ್ಕತ್ತಾ: ಎರಡು ಬಾರಿ ರಾಜ್ಯಸಭಾ ಸದಸ್ಯರಾಗಿದ್ದ ಬಿಜೆಪಿ ಹಿರಿಯ ನಾಯಕ ಎಲ್.ಕೆ. ಅಡ್ವಾಣಿ ಆಪ್ತ, ಪತ್ರಕರ್ತ ಚಂದನ್ ಮಿತ್ರ ಬಿಜೆಪಿ ತೊರೆದಿದ್ದಾರೆ. ಇವರು ಇದೇ ಶನಿವಾರದಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸಮ್ಮುಖದಲ್ಲಿ ತೃಣಮೂಲ ಕಾಂಗ್ರೆಸ್ ಗೆ ಸೇರ್ಪಡೆಯಾಗಲಿದ್ದಾರೆ ಎನ್ನಲಾಗಿದೆ.
ಇದಾಗಲೇ ಚಂದನ್ ಮಿತ್ರ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಅವರಿಗೆ ರಾಜೀನಾಮೆ ಪತ್ರ ಸಲ್ಲಿಸಿದ್ದಾರೆ ಎನ್ನಲಾಗಿದ್ದು ಶನಿವಾರ (ಜುಲೈ 21) ತೃಣಮೂಲ ಕಾಂಗ್ರೆಸ್‌ ವತಿಯಿಂದ ಹುತಾತ್ಮರ ದಿನಾಚರಣೆ ಹಮ್ಮಿಕೊಳ್ಳಲಾಗಿದ್ದು ಆ ದಿನದ ಕಾರ್ಯಕ್ರಮದಲ್ಲಿ ಮಿತ್ರ ಟಿಎಂಸಿ ಗೆ ಸೇರ್ಪಡೆಯಾಗಲಿದ್ದಾರೆ.
ಪತ್ರಕರ್ತರಾಗಿ ವೃತ್ತಿಜೀವನ ಪ್ರಾರಂಭಿಸಿದ ಚಂದನ್ ಮಿತ್ರ ಪ್ರಸ್ತುತ ದೆಹಲಿಯ ಪಯೋನಿಯರ್ ಪತ್ರಿಕೆಯ ಸಂಪಾದಕರಾಗಿದ್ದಾರೆ.
ಬಿಜೆಪಿ ಮುಖಂಡ ಮಾಜಿ ಉಪ ಪ್ರಧಾನಿಗಳಾದ ಲಾಲ್ ಕೃಷ್ಣ ಅಡ್ವಾಣಿಯವರ ಆಪ್ತವಲಯದಲ್ಲಿ ಗುರುತಿಸಿಕೊಂಡಿದ್ದ ಚಂದನ್ ಮಿತ್ರ ಮೋದಿ-ಅಮಿತ್ ಶಾ ಮುಂದಾಳುತನದಲ್ಲಿ ಬದಿಗೆ ಸರಿಸಲ್ಪಟ್ಟಿದ್ದರು. ಇದರಿಂದಾಗಿ ಅಸಮಾಧಾನಗೊಂಡ ಮಿತ್ರ ಇದೀಗ ಬಿಜೆಪಿ ತೊರೆದು ಹೊರನಡೆದಿದ್ದಾರೆ ಎನ್ನಲಾಗುತ್ತಿದೆ.
ಮಿತ್ರ ಸಲ್ಲಿಸಿರುವ ರಾಜೀನಾಮೆ ಪತ್ರದಲ್ಲಿ ಅವರು ಪಕ್ಷದ ಕೆಲ ನೀತಿಗಳ ಬಗೆಗೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
2016 ರ ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಹೂಗ್ಲಿ ಕ್ಷೇತ್ರದಿಂದ ಸ್ಪರ್ಧಿಸಿದ್ದ ಮಿತ್ರ ಠೇವಣಿ ಕಳೆದುಕೊಂಡಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.