ಲೋಕಸಭೆಯಲ್ಲಿ ಜು.20ಕ್ಕೆ ಮೋದಿ ಸರ್ಕಾರದ ವಿರುದ್ಧ ಅವಿಶ್ವಾಸ ಗೊತ್ತುವಳಿ ಚರ್ಚೆ ಮತ್ತು ಮತ ಚಲಾವಣೆ!
ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಎನ್'ಡಿಎ ಸರ್ಕಾರದ ವಿರುದ್ದ ಜುಲೈ 20ರಂದು ವಿಪಕ್ಷಗಳ ಅವಿಶ್ವಾಸ ಗೊತ್ತುವಳು ಕುರಿತು ಚರ್ಚೆ ಮತ್ತು ಮತ ಚಲಾವಣೆ ನಡೆಯಲಿದೆ...

Published On :
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಎನ್'ಡಿಎ ಸರ್ಕಾರದ ವಿರುದ್ದ ಜುಲೈ 20ರಂದು ವಿಪಕ್ಷಗಳ ಅವಿಶ್ವಾಸ ಗೊತ್ತುವಳು ಕುರಿತು ಚರ್ಚೆ ಮತ್ತು ಮತ ಚಲಾವಣೆ ನಡೆಯಲಿದೆ.
ಅವಿಶ್ವಾಸ ಗೊತ್ತುವಳಿ ಮಂಡನೆಯನ್ನು ಅಂಗೀಕರಿಸಿರುವ ಸ್ಪೀಕರ್ ಸುಮಿತ್ರಾ ಮಹಾಜನ್ ಅವರು, ಜುಲೈ.20 ರಂದು ಲೋಕಸಭೆಯಲ್ಲಿ ಈ ಕುರಿತು ಚರ್ಚೆ ಮತ್ತು ಅಂದೇ ಮತಚಲಾವಣೆಗೆ ದಿನಾಂಕ ನಿಗದಿ ಮಾಡಿದ್ದಾರೆ.
15 ವರ್ಷಗಳ ಬಳಿಕ ಇದೇ ಮೊದಲ ಬಾರಿಗೆ ಲೋಕಸಭೆಯಲ್ಲಿ ಅವಿಶ್ವಾಸ ಗೊತ್ತುವಳಿ ಮಂಡನೆಯಾಗಲಿದೆ. ಬಿಜೆಪಿ 273 ಲೋಕಸಭಾ ಸದಸ್ಯರನ್ನು ಹೊಂದಿದ್ದು ಶುಕ್ರವಾರ ಏನಾಗಲಿದೆ ಎಂದು ಕಾದು ನೋಡಬೇಕಿದೆ.
ಕಾಂಗ್ರೆಸ್, ಸಮಾಜವಾದಿ ಪಕ್ಷ(ಎಸ್ಪಿ), ತೆಲುಗುದೇಶಂ(ಟಿಡಿಪಿ) ಮತ್ತು ನ್ಯಾಷನಲ್ ಕಾನ್ಫರೆನ್ಸ್ ಮಂಡಿಸಿರುವ ಈ ಗೊತ್ತುವಳಿಯನ್ನು ಲೋಕಸಭೆಯಲ್ಲಿ ಅಂಗೀಕರಿಸಲಾಗಿದೆ.
ಆಂಧ್ರಪ್ರದೇಶಕ್ಕೆ ವಿಶೇಷ ಸ್ಥಾನಮಾನ ನೀಡಿಕೆ ನಿರಾಕರಣೆಗೆ ಸಂಬಂಧಿಸಿದಂತೆ ಕೇಂದ್ರದ ಆಡಳಿತಾರೂಢ ಎನ್'ಡಿಎ ಸರ್ಕಾರದ ವಿರುದ್ದ ಸಂಸತ್ತಿನಲ್ಲಿ ಕಾಂಗ್ರೆಸ್ ಹಾಗೂ ತೆಲುಗು ದೇಶಂ ಪಕ್ಷ (ಟಿಡಿಪಿ) ಅವಿಶ್ವಾಸ ನಿರ್ಣಯ ಮಂಡನೆ ಮಾಡಿತ್ತು.
ಜುಲೈ 20 ರಂದು ಲೋಕಸಭೆಯಲ್ಲಿ, ಜು.23 ರಂದು ರಾಜ್ಯಸಭೆಯಲ್ಲಿ ಈ ಕುರಿತು ಚರ್ಚೆಗೆ ಅವಕಾಶ ನೀಡಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Congressಕಾಂಗ್ರೆಸ್ParliamentLok SabhaಲೋಕಸಭೆModi governmentಮೋದಿ ಸರ್ಕಾರNo Confidence Motionಅವಿಶ್ವಾಸ ನಿರ್ಣಯ
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


