ಸಂಸತ್ ಮುಂಗಾರು ಅಧಿವೇಶನ: ಮೋದಿ ಸರ್ಕಾರದ ವಿರುದ್ಧ ಕಾಂಗ್ರೆಸ್ಅವಿಶ್ವಾಸ ನಿರ್ಣಯ; ಸ್ಪೀಕರ್ ಸಮ್ಮತಿ
ಸಂಸತ್ ನ ಮುಂಗಾರು ಅಧಿವೇಶನ ಜು.18 ರಿಂದ ಪ್ರಾರಂಭವಾಗಿದ್ದು, ಲೋಕಸಭೆಯಲ್ಲಿ ಕಾಂಗ್ರೆಸ್ ಪಕ್ಷ ಪ್ರಧಾನಿ ನರೇಂದ್ರ ಮೋದಿ ಸರ್ಕಾರದ ವಿರುದ್ಧ ಅವಿಶ್ವಾಸ ನಿರ್ಣಯ ಮಂಡಿಸಿದೆ.

Published On :
ನವದೆಹಲಿ: ಸಂಸತ್ ನ ಮುಂಗಾರು ಅಧಿವೇಶನ ಜು.18 ರಿಂದ ಪ್ರಾರಂಭವಾಗಿದ್ದು, ಲೋಕಸಭೆಯಲ್ಲಿ ಕಾಂಗ್ರೆಸ್, ಟಿಡಿಪಿ ಪಕ್ಷಗಳು ಪ್ರಧಾನಿ ನರೇಂದ್ರ ಮೋದಿ ಸರ್ಕಾರದ ವಿರುದ್ಧ ಅವಿಶ್ವಾಸ ನಿರ್ಣಯ ಮಂಡಿಸಿದೆ.
"ಈ ಸರ್ಕಾರದ ಆಡಳಿತದಲ್ಲಿ ರೈತರ ಆತ್ಮಹತ್ಯೆ ಪ್ರಕರಣಗಳು ಹೆಚ್ಚಾಗಿವೆ. ಪ್ರತಿ ದಿನ ಮಹಿಳೆಯರ ಮೇಲೆ ಅತ್ಯಾಚಾರ ನಡೆಯುತ್ತಿದೆ ಎಂದು ಅವಿಶ್ವಾಸ ನಿರ್ಣಯ ಮಂಡಿಸಿರುವ ಕಾಂಗ್ರೆಸ್ ಸಂಸದ ಜ್ಯೋತಿರಾದಿತ್ಯ ಸಿಂಧಿಯಾ ಆರೋಪಿಸಿದ್ದಾರೆ.
ಸರ್ಕಾರದ ವಿರುದ್ಧ ಮಂಡಿಸಲಾಗಿರುವ ಅವಿಶ್ವಾಸ ನಿರ್ಣಯವನ್ನು ಸ್ಪೀಕರ್ ಸುಮಿತ್ರಾ ಮಹಾಜನ್ ಒಪ್ಪಿಗೆ ನೀಡಿದ್ದಾರೆ. ಅವಿಶ್ವಾಸ ನಿರ್ಣಯದ ಬಗ್ಗೆ ಪ್ರತಿಕ್ರಿಯೆ ನೀಡಿರುವ ಸರ್ಕಾರ, ಅವಿಶ್ವಾಸ ಚರ್ಚೆಗೆ ಸಿದ್ಧ ಎಂದು ಹೇಳಿದ್ದು, ಸಭಾಧ್ಯಕ್ಷರು 10 ದಿನಗಳಲ್ಲಿ ಚರ್ಚೆಗೆ ಸಮಯ ನಿಗದಿ ಮಾಡುವ ನಿರೀಕ್ಷೆ ಇದೆ.
ಸಂಸತ್ ಅಧಿವೇಶನದಲ್ಲಿ ಎಲ್ಲಾ ವಿಚಾರಗಳ ಕುರಿತು ಚರ್ಚೆ ನಡೆಸಲು ಸರ್ಕಾರ ಸಿದ್ಧವಿದೆ ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಹೇಳಿದ್ದರು, ಆದರೆ ವಿಪಕ್ಷಗಳು ಮೋದಿ ಸರ್ಕಾರದ ಹಲವು ನೀತಿಗಳ ವಿರುದ್ಧ ಪ್ರತಿಭಟಿಸಿ ಅವಿಶ್ವಾಸ ನಿರ್ಣಯ ಮಂಡಿಸುತ್ತವೆ ಎಂದು ವಿಶ್ಲೇಷಿಸಲಾಗಿತ್ತು.
ಕಾಂಗ್ರೆಸ್ ಅವಿಶ್ವಾಸ ನಿರ್ಯಣಯ ಮಂಡಿಸಿದರೆ ಸಮಾಜವಾದಿ ಪಕ್ಷ ಹಾಗೂ ಟಿಡಿಪಿ ಸಂಸದರು ಸದನದ ಬಾವಿಗಿಳಿದು, ಜನಸಮೂಹದಿಂದ ನಡೆಯುತ್ತಿರುವ ಹಲ್ಲೆ, ಹತ್ಯೆ ಹಾಗೂ ಆಂಧ್ರಪ್ರದೇಶಕ್ಕೆ ವಿಶೇಷ ಸ್ಥಾನಮಾನ ನೀಡುವುದೂ ಸೇರಿದಂತೆ ಹಲವು ವಿಷಯಗಳ ಬಗ್ಗೆ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Congressಕಾಂಗ್ರೆಸ್Lok SabhaಲೋಕಸಭೆModi governmentಮೋದಿ ಸರ್ಕಾರNo-Confidence Motionಅವಿಶ್ವಾಸ ನಿರ್ಣಯMonsoon Session of Parliament 2018ಸಂಸತ್ ಮುಂಗಾರು ಅಧಿವೇಶನ 2018
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.
ಬ್ರೇಕಿಂಗ್ ನ್ಯೂಸ್
ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಹೆಚ್ಚಿದ ಒತ್ತಡ: ಮುಖ್ಯ ಚುನಾವಣಾ ಆಯುಕ್ತರನ್ನ ವಜಾ ಮಾಡೊದು ಅಷ್ಟು ಸುಲಭನಾ? ಯಾರಿಗಿದೆ ಆ ಪವರ್? ಸಂವಿಧಾನ ಹೇಳುವುದೇನು?ರಾಹುಕಾಲ ಎಂದರೇನು? ಮದುವೆಗೆ ಅನ್ವಯಿಸುತ್ತದೆಯೇ? ರಾಹು ಶಾಂತಿಗಾಗಿ ನಿಂಬೆ ಹಣ್ಣು ದೀಪ ಹಚ್ಚುವುದು ಸೂಕ್ತವೇ?ಗೌರಿಬಿದನೂರಿನ ಮಣ್ಣಲ್ಲಿ ಅರಳಿದ ಮರುಭೂಮಿ ಹಣ್ಣು: ಅಸಾಧ್ಯವನ್ನು ಸಾಧ್ಯವಾಗಿಸಿದ ಹಠವಾದಿ; ಸ್ವಾವಲಂಬಿ ಕೃಷಿಗೆ ಹೊಸ ಭಾಷ್ಯ ಬರೆದ ದಿವಾಕರ್ ಚನ್ನಪ್ಪ..!ಕರ್ನಾಟಕದ ನಂ.1 ಶ್ರೀಮಂತ ಯಾರು ಗೊತ್ತಾ? ಅಂಬಾನಿ, ಅದಾನಿ ಬಿಡಿ; ಇಲ್ಲಿದೆ ನಮ್ಮ ಕರುನಾಡ ಸಿರಿವಂತರ ಟಾಪ್ ಲಿಸ್ಟ್!ಫ್ಯಾಟ್ ನಿಂದ ಫಿಟ್ ವರೆಗೆ: ಸಾಹೇಬಲಾಲ್ ಛಪ್ಪರ್ಬಂದ್ ಸ್ಫೂರ್ತಿದಾಯಕ ಪಯಣವಿದೇಶಿ ಪ್ರವಾಸದ ಪ್ಲ್ಯಾನ್ ಇದೆಯೇ? ಒಂದು ಸಣ್ಣ ತಪ್ಪು ಭಾರೀ ದಂಡಕ್ಕೆ ಕಾರಣವಾಗಬಹುದು; ಪ್ರವಾಸಿಗರು ತಿಳಿದಿರಲೇಬೇಕಾದ ನಿಯಮಗಳಿವು...!ಮನಸ್ಸಿದ್ದರೆ ಮಾರ್ಗ ಎಂಬುದನ್ನು ರುಜುವಾತು ಮಾಡಿದ ಛಲವಾದಿ; 27 ವರ್ಷಗಳ ಹೋರಾಟದಲ್ಲಿ 26 ಬಾರಿ ಸೋತು 59ನೇ ವಯಸ್ಸಿನಲ್ಲಿ ಸರ್ಕಾರಿ ಶಿಕ್ಷಕರಾದ ವಿಜಯ್ಪಶ್ಚಿಮ ಘಟ್ಟಗಳ ESA - ಕಸ್ತೂರಿರಂಗನ್ ವರದಿ ಇನ್ನೂ ಏಕೆ ಜಾರಿಗೆ ಬಂದಿಲ್ಲ?


