ಮುಂಗಾರು ಅಧಿವೇಶನ: ಎಲ್ಲಾ ವಿಷಯಗಳ ಕುರಿತು ಚರ್ಚೆಗೆ ಸರ್ಕಾರ ಸಿದ್ಧ; ಪ್ರಧಾನಿ ಮೋದಿ
ಸಂಸತ್ತಿನ ಮುಂಗಾರು ಅಧಿವೇಶನ ಬುಧವಾರದಿಂದ ಆರಂಭಗೊಳ್ಳುತ್ತಿದ್ದು, ಎಲ್ಲಾ ವಿಚಾರಗಳ ಕುರಿತು ಚರ್ಚೆ ನಡೆಸಲು ಸರ್ಕಾರ ಸಿದ್ಧವಿದೆ ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಹೇಳಿದ್ದಾರೆ...

Published On :
ನವದೆಹಲಿ: ಸಂಸತ್ತಿನ ಮುಂಗಾರು ಅಧಿವೇಶನ ಬುಧವಾರದಿಂದ ಆರಂಭಗೊಳ್ಳುತ್ತಿದ್ದು, ಎಲ್ಲಾ ವಿಚಾರಗಳ ಕುರಿತು ಚರ್ಚೆ ನಡೆಸಲು ಸರ್ಕಾರ ಸಿದ್ಧವಿದೆ ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಹೇಳಿದ್ದಾರೆ.
ಮುಂಗಾರು ಅಧಿವೇಶನ ಹಿನ್ನಲೆಯಲ್ಲಿ ರಾಜಧಾನಿ ದೆಹಲಿಯ ಸಂಸತ್ತು ಭವನಕ್ಕೆ ಆಗಮಿಸಿದ ಪ್ರಧಾನಿ ಮೋದಿಯವರು ಸಂಸತ್ತು ಪ್ರವೇಶಿಸುವುದಕ್ಕೂ ಮುನ್ನ ಸುದ್ದಿಗಾರರೊಂದಿಗೆ ಮಾತನಾಡಿದ್ದಾರೆ.
ಸಂಸತ್ತು ಅಧಿವೇಶನದಲ್ಲಿ ಚರ್ಚೆಗಳು ಯಾವುದೇ ತೊಡಕುಗಳಿಲ್ಲದೆ ಸಾಗಲಿದೆ ಎಂಬ ಭರವಸೆಯಿದೆ. ಯಾವುದೇ ವಿಚಾರವಾದರೂ, ಯಾವುದೇ ಪಕ್ಷ ಬೇಕಾದರೂ ಸದನದಲ್ಲಿ ದನಿ ಎತ್ತಬಹುದು. ಎಲ್ಲಾ ರೀತಿಯ ವಿಚಾರಗಳ ಕುರಿತಂತೆ ಚರ್ಚೆ ನಡೆಸಲು ಸರ್ಕಾರ ಸಿದ್ಧವಿದೆ ಎಂದು ಹೇಳಿದ್ದಾರೆ.
ಭಾರೀ ಮಳೆಯಿಂದಾಗಿ ಹಲವು ರಾಜ್ಯಗಳು ಸಂಕಷ್ಟಗಳನ್ನು ಅನುಭವಿಸುತ್ತಿವೆ. ಕೆಲ ರಾಜ್ಯಗಳಲ್ಲಿ ಸರಾಸರಿಗಿಂತಲೂ ಕಡಿಮೆ ಮಳೆಯಾಗಿದೆ. ಈ ವಿಚಾರಗಳ ಕುರಿತಂತೆಯೂ ಚರ್ಚೆ ನಡೆಸಲಾಗುತ್ತದೆ ಎಂದು ತಿಳಿಸಿದ್ದಾರೆ.
ಇಂದಿನಿಂದ ಆರಂಭವಾಗುತ್ತಿರುವ ಅಧಿವೇಶನದಲ್ಲಿ ಯಥಾಪ್ರಕಾರ ಕೋಲಾಹಲ ಎಬ್ಬಿಸುವ ನಿರೀಕ್ಷೆಗಳಿವೆ. ಮಕ್ಕಳ ಕಳ್ಳರೆಂದು ಅಮಾಯಕರನ್ನು ಬಡಿದು ಕೊಲ್ಲುತ್ತಿರುವುದು, ನಿರುದ್ಯೋಗ, ಮಹಿಳಾ ಸುರಕ್ಷತೆ, ಜಮ್ಮು-ಕಾಶ್ಮೀರ ಪರಿಸ್ಥಿತಿ, ಕದನ ವಿರಾಮ ಉಲ್ಲಂಘನೆ, ಬೆಲೆ ಏರಿಕೆ ಇತ್ಯಾದಿ ವಿಚಾರಗಳನ್ನು ಪ್ರಸ್ತಾಪ ಮಾಡಲು ಕಾಂಗ್ರೆಸ್ ಮುಂದಾಳತ್ವದ ಪ್ರತಿಪಕ್ಷಗಳು ನಿರ್ಧರಿಸಿವೆ. ಈ ವಿಷಯಗಳ ಕುರಿತು ಚರ್ಚೆಗೆ ಅವಕಾಶ ನೀಡಿದರೆ ಮಾತ್ರ ಸುಗಮ ಸಂಸತ್ ಕಲಾಪಕ್ಕೆ ಅವಕಾಶ ನೀಡುವುದಾಗಿಯೂ ವಿಪಕ್ಷಗಳು ತಿಳಿಸಿವೆ.
ಇದರಿಂದಾಗಿ ಮುಂಗಾರು ಅಧಿವೇಶನವು ಗುಡುಗು, ಸಿಡಿಲಿನಿಂದ ಕೂಡಿರುವ ಮುನ್ಸೂಚನೆಯನ್ನೂ ವಿಪಕ್ಷಗಳು ನೀಡಿವೆ.
ಮುಂಗಾರು ಅಧಿವೇಶನದಲ್ಲಿ ಸುಮಾರು 25 ಮಸೂದೆಗಳನ್ನು ಪಟ್ಟಿ ಮಾಡಲಾಗಿದೆ. ಇದರಲ್ಲಿ 18 ಹೊಸ ವಿಧೇಯಕಗಳಾದರೆ, 7 ವಿಧೇಯಕಗಳು ಕಳೆದ ಅಧಿವೇಶನದಿಂದ ಮುಂದುವರೆದಿವೆ. ದೇಶಭ್ರಷ್ಟ ಆರ್ಥಿಕ ಅಪರಾಧಿಗಳ ಮಸೂದೆ-2018, ತ್ರಿವಳಿ ತಲಾಖ್ ಮಸೂದೆ-2017 ಹಾಗೂ ಲೈಂಗಿಕ ಅಲ್ಪಸಂಖ್ಯಾತರ ಹಕ್ಕು ರಕ್ಷಣೆ ಮಸೂದೆ-2016 ಪ್ರಮುಖವಾದವು.
ಇನ್ನು ಈ ಹಿಂದಿನ ಅಧಿವೇಶನದಲ್ಲಿ ಅವಿಶ್ವಾಸ ನಿರ್ಣಯ ಮಂಡಿಸಲು ವಿಫಲ ಯತ್ನ ನಡೆಸಿದ್ದ ಪ್ರತಿಪಕ್ಷಗಳು ಈ ಅಧಿವೇಶನದಲ್ಲಿ ಪುನಃ ಅವಿಶ್ವಾಸ ನಿಲುವಳಿ ಮಂಡಿಸಲು ನಿರ್ಧರಿಸಿವೆ. ಆಂಧ್ರಪ್ರದೇಶಕ್ಕೆ ವಿಶೇಷ ಸ್ಥಾನಮಾನ ನೀಡಿಕೆ ನಿರಾಕರಣೆಗೆ ಸಂಬಂಧಿಸಿದಂತೆ ಅವಿಶ್ವಾಸ ನಿರ್ಣಯ ಮಂಡನೆಗೆ ಸಮ್ಮತಿ ಸೂಚಿಸಲಾಗಿದೆ ಎಂದು ಕಾಂಗ್ರೆಸ್ ತಿಳಿಸಿದೆ.
ಜನರ ಸಾಮೂಹಿಕ ಹತ್ಯೆ ಖಂಡಿಸಿ ರಾಜ್ಯಸಭೆಯಲ್ಲಿ ಬುಧವಾರ ಸದನ ಕಲಾಪ ಆರಂಭಕ್ಕೆ ತೃಣಮೂಲ ಕಾಂಗ್ರೆಸ್ ಶೂನ್ಯ ವೇಳೆ ನೊಟೀಸ್ ನೀಡಿದೆ. ಜನರ ಸಾಮೂಹಿಕ ಹತ್ಯೆ ಇಡೀ ದೇಶವನ್ನು ದಿಗ್ಭ್ರಮೆಗೊಳಿಸಿದೆ ಎಂದು ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ ಹೇಳಿದೆ. ಇದರಿಂದ ಸಂಸತ್ತಿನ ಮುಂಗಾರು ಅಧಿವೇಶನ ಆರಂಭಕ್ಕೆ ಗದ್ದಲದ ವಾತಾವರಣ ಕಂಡುಬರುವ ಸಾಧ್ಯತೆಯಿದೆ.
ಆರ್ ಜೆಡಿ ಕೂಡ ತೃಣಮೂಲ ಕಾಂಗ್ರೆಸ್ ಗೆ ಬೆನ್ನೆಲುಬಾಗಿ ನಿಂತಿದ್ದು ಅದರ ಸಂಸದ ಜೆಪಿ ಯಾದವ್ ಲೋಕಸಭೆಯಲ್ಲಿ ಇದೇ ವಿಷಯಕ್ಕೆ ಸಂಬಂಧಪಟ್ಟಂತೆ ನಿಲುವಳಿ ಸೂಚನೆ ಮಂಡಿಸಿದ್ದಾರೆ.
ಸಿಪಿಐ ನಾಯಕ ಡಿ ರಾಜಾ, ರಾಜ್ಯಸಭೆಯಲ್ಲಿ ಜನಸಮೂಹ ಹತ್ಯೆ ಕುರಿತು ಮತ್ತು ಸಾಮಾಜಿಕ ಕಾರ್ಯಕರ್ತ ಸ್ವಾಮಿ ಅಗ್ನಿವೇಶ್ ಮೇಲೆ ದಾಳಿ ಖಂಡಿಸಿ ನಿಲುವಳಿ ಸೂಚನೆ ಮಂಡಿಸಿದರು.
ಜನರ ಸಾಮೂಹಿಕ ಹತ್ಯೆ ಖಂಡಿಸಿ ರಾಜ್ಯಸಭೆಯಲ್ಲಿ ಬುಧವಾರ ಸದನ ಕಲಾಪ ಆರಂಭಕ್ಕೆ ತೃಣಮೂಲ ಕಾಂಗ್ರೆಸ್ ಶೂನ್ಯ ವೇಳೆ ನೊಟೀಸ್ ನೀಡಿದೆ. ಜನರ ಸಾಮೂಹಿಕ ಹತ್ಯೆ ಇಡೀ ದೇಶವನ್ನು ದಿಗ್ಭ್ರಮೆಗೊಳಿಸಿದೆ ಎಂದು ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ ಹೇಳಿದೆ. ಇದರಿಂದ ಸಂಸತ್ತಿನ ಮುಂಗಾರು ಅಧಿವೇಶನ ಆರಂಭಕ್ಕೆ ಗದ್ದಲದ ವಾತಾವರಣ ಕಂಡುಬರುವ ಸಾಧ್ಯತೆಯಿದೆ.
ಆರ್ ಜೆಡಿ ಕೂಡ ತೃಣಮೂಲ ಕಾಂಗ್ರೆಸ್ ಗೆ ಬೆನ್ನೆಲುಬಾಗಿ ನಿಂತಿದ್ದು ಅದರ ಸಂಸದ ಜೆಪಿ ಯಾದವ್ ಲೋಕಸಭೆಯಲ್ಲಿ ಇದೇ ವಿಷಯಕ್ಕೆ ಸಂಬಂಧಪಟ್ಟಂತೆ ನಿಲುವಳಿ ಸೂಚನೆ ಮಂಡಿಸಿದ್ದಾರೆ.
ಸಿಪಿಐ ನಾಯಕ ಡಿ ರಾಜಾ, ರಾಜ್ಯಸಭೆಯಲ್ಲಿ ಜನಸಮೂಹ ಹತ್ಯೆ ಕುರಿತು ಮತ್ತು ಸಾಮಾಜಿಕ ಕಾರ್ಯಕರ್ತ ಸ್ವಾಮಿ ಅಗ್ನಿವೇಶ್ ಮೇಲೆ ದಾಳಿ ಖಂಡಿಸಿ ನಿಲುವಳಿ ಸೂಚನೆ ಮಂಡಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Congressಕಾಂಗ್ರೆಸ್bjpಬಿಜೆಪಿModiParliamentoppositionಪ್ರಧಾನಿ ಮೋದಿNDAವಿಪಕ್ಷಗಳುMonsoon sessionಮುಂಗಾರು ಅಧಿವೇಶನಸಂಸತ್ತುಎನ್\'ಡಿಎ
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.
ಬ್ರೇಕಿಂಗ್ ನ್ಯೂಸ್
ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಹೆಚ್ಚಿದ ಒತ್ತಡ: ಮುಖ್ಯ ಚುನಾವಣಾ ಆಯುಕ್ತರನ್ನ ವಜಾ ಮಾಡೊದು ಅಷ್ಟು ಸುಲಭನಾ? ಯಾರಿಗಿದೆ ಆ ಪವರ್? ಸಂವಿಧಾನ ಹೇಳುವುದೇನು?ರಾಹುಕಾಲ ಎಂದರೇನು? ಮದುವೆಗೆ ಅನ್ವಯಿಸುತ್ತದೆಯೇ? ರಾಹು ಶಾಂತಿಗಾಗಿ ನಿಂಬೆ ಹಣ್ಣು ದೀಪ ಹಚ್ಚುವುದು ಸೂಕ್ತವೇ?ಗೌರಿಬಿದನೂರಿನ ಮಣ್ಣಲ್ಲಿ ಅರಳಿದ ಮರುಭೂಮಿ ಹಣ್ಣು: ಅಸಾಧ್ಯವನ್ನು ಸಾಧ್ಯವಾಗಿಸಿದ ಹಠವಾದಿ; ಸ್ವಾವಲಂಬಿ ಕೃಷಿಗೆ ಹೊಸ ಭಾಷ್ಯ ಬರೆದ ದಿವಾಕರ್ ಚನ್ನಪ್ಪ..!ಕರ್ನಾಟಕದ ನಂ.1 ಶ್ರೀಮಂತ ಯಾರು ಗೊತ್ತಾ? ಅಂಬಾನಿ, ಅದಾನಿ ಬಿಡಿ; ಇಲ್ಲಿದೆ ನಮ್ಮ ಕರುನಾಡ ಸಿರಿವಂತರ ಟಾಪ್ ಲಿಸ್ಟ್!ಫ್ಯಾಟ್ ನಿಂದ ಫಿಟ್ ವರೆಗೆ: ಸಾಹೇಬಲಾಲ್ ಛಪ್ಪರ್ಬಂದ್ ಸ್ಫೂರ್ತಿದಾಯಕ ಪಯಣವಿದೇಶಿ ಪ್ರವಾಸದ ಪ್ಲ್ಯಾನ್ ಇದೆಯೇ? ಒಂದು ಸಣ್ಣ ತಪ್ಪು ಭಾರೀ ದಂಡಕ್ಕೆ ಕಾರಣವಾಗಬಹುದು; ಪ್ರವಾಸಿಗರು ತಿಳಿದಿರಲೇಬೇಕಾದ ನಿಯಮಗಳಿವು...!ಮನಸ್ಸಿದ್ದರೆ ಮಾರ್ಗ ಎಂಬುದನ್ನು ರುಜುವಾತು ಮಾಡಿದ ಛಲವಾದಿ; 27 ವರ್ಷಗಳ ಹೋರಾಟದಲ್ಲಿ 26 ಬಾರಿ ಸೋತು 59ನೇ ವಯಸ್ಸಿನಲ್ಲಿ ಸರ್ಕಾರಿ ಶಿಕ್ಷಕರಾದ ವಿಜಯ್ಪಶ್ಚಿಮ ಘಟ್ಟಗಳ ESA - ಕಸ್ತೂರಿರಂಗನ್ ವರದಿ ಇನ್ನೂ ಏಕೆ ಜಾರಿಗೆ ಬಂದಿಲ್ಲ?


