ಶಬರಿಮಲೆ ದೇವಾಲಯ ವಿವಾದ : ಪುರುಷರಂತೆ ಮಹಿಳೆಯರಿಗೂ ಪೂಜೆಯ ಸಮಾನ ಅವಕಾಶ -ಸುಪ್ರೀಂಕೋರ್ಟ್
ಕೇರಳದ ಪ್ರಸಿದ್ಧ ದೇವಾಲಯ ಶಬರಿಮಲೆಗೆ ಮಹಿಳೆಯರ ಪ್ರವೇಶವನ್ನು ಸುಪ್ರೀಂಕೋರ್ಟ್ ಬೆಂಬಲಿಸಿದೆ.ಪುರುಷರಂತೆ ಮಹಿಳೆರಿಗೂ ಸಮಾನವಾಗಿ ಪೂಜೆ ಸಲ್ಲಿಸಲು ಅವಕಾಶ ನೀಡಬೇಕೆಂದು ತೀರ್ಪು ಪ್ರಕಟಿಸಿದೆ.

ನವದೆಹಲಿ: ಕೇರಳದ ಪ್ರಸಿದ್ಧ ದೇವಾಲಯ ಶಬರಿಮಲೆಗೆ ಮಹಿಳೆಯರ ಪ್ರವೇಶವನ್ನು ಸುಪ್ರೀಂಕೋರ್ಟ್ ಬೆಂಬಲಿಸಿದೆ.
10 ರಿಂದ 50 ವರ್ಷದೊಳಗಿನ ಮಹಿಳೆಯರ ಶಬರಿಮಲೆ ಪ್ರವೇಶವನ್ನು ನಿಷೇಧ ಕುರಿತ ಅರ್ಜಿ ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್ , ಪುರುಷರಂತೆ ಮಹಿಳೆರಿಗೂ ಸಮಾನವಾಗಿ ಪೂಜೆ ಸಲ್ಲಿಸಲು ಅವಕಾಶ ನೀಡಬೇಕೆಂದು ತೀರ್ಪು ಪ್ರಕಟಿಸಿದೆ.
ದೇವಾಲಯಕ್ಕೆ ಹಲವು ವರ್ಷಗಳಿಂದ ಮಹಿಳೆಯರ ಪ್ರವೇಶ ನಿರ್ಬಂಧ ಪ್ರಶ್ನಿಸಿ ಭಾರತೀಯ ಯುವ ವಕೀಲರ ಅಸೋಸಿಯೇಷನ್ ಮತ್ತಿತರರು ಸಲ್ಲಿಸಿದ ಅರ್ಜಿ ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್ ಮುಖ್ಯ ನ್ಯಾಯಾಧೀಶ ದೀಪಕ್ ಮಿಶ್ರಾ ಮತ್ತು ನ್ಯಾಯಾಧೀಶರಾದ ಆರ್. ನಾರಿಮನ್ ,ಎ.ಎಂ. ಖನ್ವೀಲ್ ಕರ್ , ಡಿ. ವೈ. ಚಂದ್ರಚೂಡ್ , ಮತ್ತು ಇಂದು ಮಲ್ಹೋತ್ರಾ ಅವರಿದ್ದ ನ್ಯಾಯಪೀಠ, ಇದು ಸಂವಿಧಾನಕ್ಕೆ ವಿರೋಧವಾಗಿದೆ. ಒಂದು ಬಾರಿ ದೇವಾಲಯದ ಬಾಗಿಲು ತೆರೆದರೆ ಯಾರೂ ಬೇಕಾದರೂ ದೇವಾಲಯ ಪ್ರವೇಶಿಸಬಹುದು ಎಂದು ಹೇಳಿಕೆ ನೀಡಿದೆ.
ಖಾಸಗಿ ದೇವಾಲಯ ಎಂಬ ಕಲ್ಪನೆಯೇ ಇಲ್ಲ. ಪುರುಷರಂತೆ ಮಹಿಳೆಯರೂ ಸಮಾನವಾಗಿ ಪೂಜೆ ಸಲ್ಲಿಸಬೇಕು ಎಂದು ಮುಖ್ಯ ನ್ಯಾಯಮೂರ್ತಿ ದೀಪಕ್ ಮಿಶ್ರಾ ಹೇಳಿದ್ದಾರೆ.
ದೇವಾಲಯದಲ್ಲಿ ಮಹಿಳೆಯರ ಪ್ರವೇಶ ನಿರ್ಬಂಧಿಸುವ ಮೂಲಕ ಮೂಲಭೂತ ಹಕ್ಕುಗಳನ್ನು ಉಲ್ಲಂಘಿಸಲಾಗುತ್ತಿದೆ ಎಂಬ ಅರ್ಜಿ ವಿಚಾರಣೆಯನ್ನು ಕಳೆದ ವರ್ಷ ಅಕ್ಟೋಬರ್ ತಿಂಗಳಲ್ಲಿ ಸುಪ್ರೀಂಕೋರ್ಟ್ ಮಹತ್ವದ ಐದು ಪ್ರಶ್ನೆಗಳನ್ನು ರಚಿಸಿ ಸಂವಿಧಾನ ಪೀಠಕ್ಕೆ ವರ್ಗಾಯಿಸಿತ್ತು.
ಈ ಸಂಬಂಧದ ಅರ್ಜಿ ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್, ಮಹಿಳೆಯರಿಗೆ ದೇವಾಲಯ ಪ್ರವೇಶ ಅವಕಾಶ ಕಲ್ಪಿಸಿ ತೀರ್ಪು ನೀಡಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


