ದೇಶ

ಅವಿಶ್ವಾಸ ನಿರ್ಣಯದ ಪರ ನಿಲ್ಲಿ; ಸಂಸದರಿಗೆ ವಿಪ್ ಜಾರಿ ಮಾಡಿದ ಆಮ್ ಆದ್ಮಿ ಪಕ್ಷ

ಕೇಂದ್ರದ ಪ್ರಧಾನಮಂತ್ರಿ ನರೇಂದ್ರ ಮೋದಿ ನೇತೃತ್ವದ ಎನ್'ಡಿಎ ಸರ್ಕಾರದ ವಿರುದ್ಧ ವಿರೋಧ ಪಕ್ಷಗಳು ಮಂಡನೆ ಮಾಡಿರುವ ಅವಿಶ್ವಾಸ ನಿರ್ಣಯ ಮಂಡನೆಗೆ ಬೆಂಬಲ ನೀಡುವಂತೆ ತಮ್ಮ ಪಕ್ಷದ ಸಂಸದರಿಗೆ ಆಮ್ ಆದ್ಮಿ ಪಕ್ಷ ಗುರುವಾರ ಸೂಚನೆ ನೀಡಿದೆ...

ಅವಿಶ್ವಾಸ ನಿರ್ಣಯದ ಪರ ನಿಲ್ಲಿ; ಸಂಸದರಿಗೆ ವಿಪ್ ಜಾರಿ ಮಾಡಿದ ಆಮ್ ಆದ್ಮಿ ಪಕ್ಷ
ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್
Published On :
ನವದೆಹಲಿ; ಕೇಂದ್ರದ ಪ್ರಧಾನಮಂತ್ರಿ ನರೇಂದ್ರ ಮೋದಿ ನೇತೃತ್ವದ ಎನ್'ಡಿಎ ಸರ್ಕಾರದ ವಿರುದ್ಧ ವಿರೋಧ ಪಕ್ಷಗಳು ಮಂಡನೆ ಮಾಡಿರುವ ಅವಿಶ್ವಾಸ ನಿರ್ಣಯ ಮಂಡನೆಗೆ ಬೆಂಬಲ ನೀಡುವಂತೆ ತಮ್ಮ ಪಕ್ಷದ ಸಂಸದರಿಗೆ ಆಮ್ ಆದ್ಮಿ ಪಕ್ಷ ಗುರುವಾರ ಸೂಚನೆ ನೀಡಿದೆ. 
ಆಂಧ್ರಪ್ರದೇಶಕ್ಕೆ ವಿಶೇಷ ಸ್ಥಾನಮಾನ ನೀಡಿಕೆ ನಿರಾಕರಣೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಹಾಗೂ ಟಿಡಿಪಿ ಪಕ್ಷಗಳು ನಿನ್ನೆಯಷ್ಟೇ ಕೇಂದ್ರದ ವಿರುದ್ಧ ಅವಿಶ್ವಾಸ ನಿರ್ಣಯ ಮಂಡನೆ ಮಾಡಿತ್ತು. ವಿಪಕ್ಷಗಳ ಅವಿಶ್ವಾಸ ನಿರ್ಣಯ ಮಂಡನೆಯನ್ನು ಸ್ಪೀಕರ್ ಸುಮಿತ್ರಾ ಮಹಾಜನ್ ಅವರು ಅಂಗೀಕರಿಸಿದ್ದರು.
ಕೇಂದ್ರದ ವಿರುದ್ಧ ಲೋಕಸಭೆಯಲ್ಲಿ ಅವಿಶ್ವಾಸ ನಿರ್ಣಯ ಮಂಡನೆ ಮಾಡಿದ ಬಳಿಕ ಟಿಡಿಪಿ ಪಕ್ಷದ ನಾಯಕ ವೈ.ಎಸ್.ಚೌಧರಿ, ಆಂಧ್ರಪ್ರದೇಶ ರಾಜ್ಯ ಸಚಿವರಾದ ಟಿ.ಜಿ.ವೆಂಕಟೇಶ್, ಕೆ. ನಾರಾಯಣ ಮತ್ತು ನರಸಿಂಹ ರಾವ್ ಅವರು ಕೇಜ್ರಿವಾಲ್ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ್ದರು. 
ಮಾತುಕತೆ ವೇಳೆ ಉಭಯ ಸದನಗಳಲ್ಲಿ ಮೋದಿ ಸರ್ಕಾರದ ವಿರುದ್ಧ ದನಿ ಎತ್ತುವಂತೆ ಹಾಗೂ ಅವಿಶ್ವಾಸ ನಿರ್ಣಯ ಮಂಡನೆಗೆ ಬೆಂಬಲ ನೀಡುವಂತೆ ಮನವಿ ಮಾಡಿಕೊಂಡಿದ್ದರು. 
ಈ ಮನವಿಯನ್ನು ಪರಿಗಣಿಸಿರುವ ಆಮ್ ಆದ್ಮಿ ಪಕ್ಷ ಇದೀಗ ಟಿಡಿಪಿ ಮಂಡನೆ ಮಾಡಿರುವ ಅವಿಶ್ವಾಸ ನಿರ್ಣಯಕ್ಕೆ ಬೆಂಬಲ ನೀಡುವಂತೆ ಸೂಚಿಸಿದ್ದು, ಪಕ್ಷದ ಸಂಸದರಿಗೆ ವಿಪ್ ಜಾರಿ ಮಾಡಿದೆ ಎಂದು ತಿಳಿದುಬಂದಿದೆ. 
ಟಿಡಿಪಿ ಹಾಗೂ ಕಾಂಗ್ರೆಸ್ ಮಂಡನೆ ಮಾಡಿರುವ ಅವಿಶ್ವಾಸ ನಿರ್ಣಯ ಕುರಿತು ಜುಲೈ.20 ರಂದು ಲೋಕಸಭೆಯಲ್ಲಿ, ಜು.23 ರಂದು ರಾಜ್ಯಸಭೆಯಲ್ಲಿ ಚರ್ಚೆ ನಡೆಯಲಿದೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.