ದೇಶ

ಆರ್‏ಟಿಐ ಕಾಯ್ದೆಯಲ್ಲಿ ಬದಲಾವಣೆ ತಂದರೆ ಅದು ನಿಷ್ಪ್ರಯೋಜಕವಾಗುತ್ತದೆ: ರಾಹುಲ್ ಗಾಂಧಿ

ಪ್ರತಿಯೋರ್ವ ಭಾರತೀಯನಿಗೂ ತಿಳಿಯುವ ಹಕ್ಕಿದೆ ಮತ್ತು ಅದನ್ನು ಸರಕಾರ ನಿರಾಕರಿಸುವಂತಿಲ್ಲ ಎಂದು ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಹೇಳಿದ್ದಾರೆ.....

ಆರ್‏ಟಿಐ ಕಾಯ್ದೆಯಲ್ಲಿ ಬದಲಾವಣೆ ತಂದರೆ ಅದು ನಿಷ್ಪ್ರಯೋಜಕವಾಗುತ್ತದೆ: ರಾಹುಲ್ ಗಾಂಧಿ
ರಾಹುಲ್ ಗಾಂಧಿ
Published On :
ನವದೆಹಲಿ: ಪ್ರತಿಯೋರ್ವ ಭಾರತೀಯನಿಗೂ ತಿಳಿಯುವ ಹಕ್ಕಿದೆ ಮತ್ತು ಅದನ್ನು ಸರಕಾರ ನಿರಾಕರಿಸುವಂತಿಲ್ಲ  ಎಂದು ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಹೇಳಿದ್ದಾರೆ.
ಮಾಹಿತಿ ಹಕ್ಕು ಕಾಯಿದೆಗೆ ಸರಕಾರ ತರಲು ಬಯಸಿರುವ ತಿದ್ದುಪಡಿಯನ್ನು ವಿರೋಧಿಸಿರುವ ರಾಹುಲ್ ಗಾಂಧಿ ಕೇಂದ್ರ ಸರ್ಕಾರ ಜನರಿಂದ ಸತ್ಯವನ್ನು ಮುಚ್ಚಿಡುವ ಪ್ರಯತ್ನ ಮಾಡುತ್ತಿದೆ ಎಂದು ಆರೋಪಿಸಿದ್ದಾರೆ.
ಪಾರದರ್ಶಕತೆ ಮತ್ತು ಮಾಹಿತಿ ಗಾಗಿರುವ ಮೈಲುಗಲ್ಲು ಕಾನೂನು ಎಂದೇ ತಿಳಿಯಲ್ಪಟ್ಟಿರುವ ಮಾಹಿತಿ ಹಕ್ಕು ಕಾಯಿದೆಗೆ ತಿದ್ದುಪಡಿ ತಂದಲ್ಲಿ ಅದರಿಂದ ಆ ಕಾಯಿದೆಯು ನಿರುಪಯುಕ್ತವಾಗುತ್ತದೆ ಎಂದು ರಾಹುಲ್‌ ಟ್ವೀಟ್‌ ಮಾಡಿದ್ದಾರೆ. 
ಬಿಜೆಪಿ ನೇತೃತ್ವದ ಕೇಂದ್ರ ಸರಕಾರ ಇದೀಗ ಸಾಗುತ್ತಿರುವ ಸಂಸತ್ತಿನ ಮಳೆಗಾಲದ ಅಧಿವೇಶನದಲ್ಲಿ ಮಾಹಿತಿ ಹಕ್ಕು ವಿವಾದಾತ್ಮಕ ತಿದ್ದುಪಡಿ ಮಸೂದೆಯನ್ನು ಮಂಡಿಸಲಿದೆ ಮತ್ತು ಅದಕ್ಕೆ ಮೊದಲೇ ರಾಹುಲ್‌ ಈ ತಿದ್ದುಪಡಿಗಿರುವ ತಮ್ಮ ವಿರೋಧವನ್ನು ಸಾಮಾಜಿಕ ಮಾಧ್ಯಮಗಳಲ್ಲಿ ವ್ಯಕ್ತಪಡಿಸಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.