ದೇಶ

ದೆಹಲಿ ಸರ್ಕಾರಿ ಶಾಲೆಯಲ್ಲಿ 10ನೇ ತರಗತಿ ಬಾಲಕನನ್ನು ಹೊಡೆದು ಸಾಯಿಸಿದ ವಿದ್ಯಾರ್ಥಿಗಳ ಗುಂಪು

ವಿದ್ಯಾರ್ಥಿಗಳ ಗುಂಪೊಂದು 10ನೇ ತರಗತಿಯ ಬಾಲಕನನ್ನು ಹೊಡೆದು ಸಾಯಿಸಿದ ಆಘಾತಕಾರಿ ಘಟನೆ ದೆಹಲಿಯ...

ದೆಹಲಿ ಸರ್ಕಾರಿ ಶಾಲೆಯಲ್ಲಿ 10ನೇ ತರಗತಿ ಬಾಲಕನನ್ನು ಹೊಡೆದು ಸಾಯಿಸಿದ ವಿದ್ಯಾರ್ಥಿಗಳ ಗುಂಪು
ಸಾಂದರ್ಭಿಕ ಚಿತ್ರ
Published On :
ನವದೆಹಲಿ: ವಿದ್ಯಾರ್ಥಿಗಳ ಗುಂಪೊಂದು 10ನೇ ತರಗತಿಯ ಬಾಲಕನನ್ನು ಹೊಡೆದು ಸಾಯಿಸಿದ ಆಘಾತಕಾರಿ ಘಟನೆ ದೆಹಲಿಯ ಸರ್ಕಾರಿ ಶಾಲೆಯಲ್ಲಿ ನಡೆದಿದೆ ಎಂದು ಗುರುವಾರ ವರದಿಗಳು ತಿಳಿಸಿವೆ.
ವರದಿಗಳ ಪ್ರಕಾರ ನಿನ್ನೆ ಜ್ಯೋತಿ ನಗರದ ಎಸ್ ಕೆವಿ ಶಾಲೆಯಲ್ಲಿ ಈ ಘಟನೆ ನಡೆದಿದ್ದು, 17 ವರ್ಷದ ಗೌರವ್ ಎಂಬ ವಿದ್ಯಾರ್ಥಿಯ ಮೇಲೆ ಇತರೆ ವಿದ್ಯಾರ್ಥಿಗಳು ಗಂಭೀರವಾಗಿ ಹಲ್ಲೆ ನಡೆಸಿದ್ದಾರೆ.
ಕೂಡಲೇ ಸ್ಥಳಕ್ಕೆ ಆಗಮಿಸಿದ ಪೊಲೀಸರು, ಗೌರವ್ ಗಂಭೀರವಾಗಿ ಗಾಯಗೊಂಡು ಬಿದ್ದಿರುವುದನ್ನು ಗಮನಿಸಿದ್ದಾರೆ. ನಂತರ ಗೌರವ್ ಸಹೋದರ ಗೋವಿಂದ್ ನೆರವಿನೊಂದಿಗೆ ಜಿಟಿಬಿ ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಆದರೆ ದಾರಿ ಮಧ್ಯಯೇ ಗೌರವ್ ಮೃತಪಟ್ಟಿದ್ದಾರೆ ಎಂದು ವೈದ್ಯರು ತಿಳಿಸಿರುವುದಾಗಿ ಪೊಲೀಸರು ಹೇಳಿದ್ದಾರೆ.
ಗೌರವ ಬಾಬರ್ ಪುರದಲ್ಲಿ ತನ್ನ ಪೋಷಕರ ಜೊತೆ ವಾಸಿಸುತ್ತಿದ್ದು, ಬುಧವಾರ ತನ್ನ ಶಿಕ್ಷಕರನ್ನು ಭೇಟಿ ಮಾಡಲು ಹೋದ ವೇಳೆ ಗೌರವ್ ಮತ್ತು ಇತರೆ ವಿದ್ಯಾರ್ಥಿಗಳ ನಡುವೆ ಜಗಳವಾಗಿದೆ ಎಂದು ಅವರು ತಿಳಿಸಿದ್ದಾರೆ.
ಈ ಸಂಬಂಧ ಕೆಲ ವಿದ್ಯಾರ್ಥಿಗಳ ವಿರುದ್ಧ ಕೊಲೆ ಪ್ರಕರಣ ದಾಖಲಿಸಿದ್ದು, ತನಿಖೆ ನಡೆಯುತ್ತಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.