ದೇಶ

ಕೊಹಿನೂರ್ ವಜ್ರ ವಾಪಸ್ ತರಲು ವಿದೇಶಿ ಅಧಿಕಾರಿಗಳ ಜತೆ ಚರ್ಚೆ: ವಿಕೆ ಸಿಂಗ್

ಜಗತ್ತಿನ ಅಮೂಲ್ಯ ವಜ್ರಗಳಲ್ಲಿ ಒಂದಾಗಿರುವ ಕೊಹಿನೂರ್ ಮತ್ತು ಇತರ ಪ್ರಾಚೀನ ವಸ್ತುಗಳನ್ನು ವಾಪಸ್ ತರುವ ಕುರಿತಂತೆ ವಿದೇಶಿ ಅಧಿಕಾರಿಗಳ ಜತೆ ಚರ್ಚಿಸುತ್ತಿರುವುದಾಗಿ...

ಕೊಹಿನೂರ್ ವಜ್ರ ವಾಪಸ್ ತರಲು ವಿದೇಶಿ ಅಧಿಕಾರಿಗಳ ಜತೆ ಚರ್ಚೆ: ವಿಕೆ ಸಿಂಗ್
ಕೊಹಿನೂರ್
Published On :
ನವದೆಹಲಿ: ಜಗತ್ತಿನ ಅಮೂಲ್ಯ ವಜ್ರಗಳಲ್ಲಿ ಒಂದಾಗಿರುವ ಕೊಹಿನೂರ್ ಮತ್ತು ಇತರ ಪ್ರಾಚೀನ ವಸ್ತುಗಳನ್ನು ವಾಪಸ್ ತರುವ ಕುರಿತಂತೆ ವಿದೇಶಿ ಅಧಿಕಾರಿಗಳ ಜತೆ ಚರ್ಚಿಸುತ್ತಿರುವುದಾಗಿ ಕೇಂದ್ರ ಸಚಿವ ವಿಕೆ ಸಿಂಗ್ ಹೇಳಿದ್ದಾರೆ. 
ಲೋಕಸಭೆಯಲ್ಲಿ ಪ್ರಶ್ನೆಯೊಂದಕ್ಕೆ ಲಿಖಿತ ಉತ್ತರ ನೀಡಿದ ಅವರು ಭಾರತೀಯರು ಮತ್ತು ಸಂಸತ್ ವ್ಯಕ್ತಪಡಿಸಿದ ಭಾವನೆಗಳನ್ನು ಗಮನದಲ್ಲಿಟ್ಟುಕೊಂಡು, ಭಾರತದ ಪುರಾತತ್ವ ಸಮೀಕ್ಷೆಯಿಂದ ಮಾಹಿತಿ ಪಡೆದು ಮತ್ತೆ ಕೊಹಿನೂರ್ ಮತ್ತು ಇತರ ಪ್ರಾಚೀನ ವಸ್ತುಗಳನ್ನು ವಾಪಸ್ ತರಲು ವಿದೇಶಿ ಅಧಿಕಾರಿಗಳ ಜತೆ ಚರ್ಚಿಸುತ್ತಿರುವುದಾಗಿ ಹೇಳಿದರು. 
ಅಮೂಲ್ಯವಾದ ಕೊಹಿನೂರ್ ವಜ್ರ ಹಾಗೂ ಇತರ ಪ್ರಾಚೀನ ವಸ್ತುಗಳನ್ನು ಮರಳಿ ತರಲು ವಿದೇಶಾಂಗ ಸಚಿವಾಲಯ ಪ್ರಯತ್ನಿಸುತ್ತಿದೆಯೇ ಎಂದು ಕೇಳಿದ ಪ್ರಶ್ನೆಗೆ ಸಚಿವರು ಈ ಹೇಳಿಕೆ ನೀಡಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.