ಸಾಮೂಹಿಕ ಹಲ್ಲೆ: ಕಾನೂನು ಸುವ್ಯವಸ್ಥೆ ಪಾಲನೆ ರಾಜ್ಯಗಳ ಹೊಣೆ ಎಂದ ರಾಜನಾಥ್ ಸಿಂಗ್, ವಿಪಕ್ಷಗಳಿಂದ ವಾಕೌಟ್!
ಮಕ್ಕಳ ಕಳ್ಳತನ ವದಂತಿ ಕುರಿತಂತೆ ನಡೆಯುತ್ತಿರುವ ಸಾಮೂಹಿಕ ಹಲ್ಲೆ ಪ್ರಕರಣಗಳ ಸಂಬಂಧ ಕಾನೂನು ಸುವ್ಯವಸ್ಥೆ ಪಾಲನೆ ಮಾಡುವುದು ಆಯಾ ರಾಜ್ಯಗಳ ಕರ್ತವ್ಯ ಎಂದು ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ಅವರು ಗುರುವಾರ ಹೇಳಿದ್ದಾರೆ...

Published On :
ನವದೆಹಲಿ; ಮಕ್ಕಳ ಕಳ್ಳತನ ವದಂತಿ ಕುರಿತಂತೆ ನಡೆಯುತ್ತಿರುವ ಸಾಮೂಹಿಕ ಹಲ್ಲೆ ಪ್ರಕರಣಗಳ ಸಂಬಂಧ ಕಾನೂನು ಸುವ್ಯವಸ್ಥೆ ಪಾಲನೆ ಮಾಡುವುದು ಆಯಾ ರಾಜ್ಯಗಳ ಕರ್ತವ್ಯ ಎಂದು ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ಅವರು ಗುರುವಾರ ಹೇಳಿದ್ದಾರೆ.
ಸಂಸತ್ತಿನ ಮುಂಗಾರು ಅಧಿವೇಶನದ ಎರಡನೇ ದಿನವಾದ ಇಂದು ಸಾಮೂಹಿಕ ಹಲ್ಲೆ ಪ್ರಕರಣಗಳ ಕುರಿತಂತೆ ವಿರೋಧ ಪಕ್ಷಗಳು ಕೇಂದ್ರ ಸರ್ಕಾರದ ವಿರುದ್ಧ ತೀವ್ರವಾಗಿ ಕಿಡಿಕಾರಿದವು.
ಸಾಮೂಹಿಕ ಹಲ್ಲೆ ಪ್ರಕರಣ ಕುರಿತಂತೆ ಕಾಂಗ್ರೆಸ್ ಸಂಸದ ಕೆ.ಸಿ.ವೇಣುಗೋಪಾಲ್ ಅವರ ಪ್ರಶ್ನೆಗೆ ಉತ್ತರಿಸಿದ ರಾಜನಾಥ್ ಸಿಂಗ್ ಅವರು, ಸಾಮೂಹಿಕ ಹಲ್ಲೆ ಪ್ರಕರಣಗಳಲ್ಲಿ ಜನರು ಸಾವನ್ನಪ್ಪಿತ್ತಿರುವುದು ನಿಜ. ಇದನ್ನು ನಾವೂ ಖಂಡಿಸುತ್ತೇವೆ. ಆದರೆ, ಇಂತಹ ಪ್ರಕರಣ ಕುರಿತಂತೆ ಕ್ರಮ ಕೈಗೊಳ್ಳುವುದು ಆಯಾ ರಾಜ್ಯಗಳ ಹೊಣೆಯಾಗಿದೆ. ಕೇಂದ್ರ ಸರ್ಕಾರ ಕೂಡ ವದಂತಿಗಳನ್ನು ಮಟ್ಟಹಾಕಲು ಕ್ರಮಗಳನ್ನು ಕೈಗೊಳ್ಳುತ್ತಿದೆ ಎಂದು ಹೇಳಿದರು.
ಸುಳ್ಳು ಸುದ್ದಿಗಳನ್ನು ಜನರನ್ನು ತಲುಪದಂತೆ ಕ್ರಮ ಕೈಗೊಳ್ಳುವಂತೆಯೂ ಈಗಾಗಲೇ ಸಾಮಾಜಿಕ ಜಾಲತಾಣಗಳಿಗೆ ಸೂಚನೆ ನೀಡಲಾಗಿದೆ. ಇಂತಹ ಪ್ರಕರಣಗಳು ನಿಜಕ್ಕೂ ದುರಾದೃಷ್ಟಕರ ಸಂಗತಿ. ತಪ್ಪಿತಸ್ಥರ ವಿರುದ್ದ ಕ್ರಮ ಕೈಗೊಳ್ಳುವಂತೆ ಈ ಮೂಲಕ ಆಯಾ ರಾಜ್ಯ ಸರ್ಕಾರಗಳ ಬಳಿ ಮನವಿ ಮಾಡಿಕೊಳ್ಳುತ್ತೇನೆಂದು ತಿಳಿಸಿದರು.
ರಾಜನಾಥ್ ಸಿಂಗ್ ಅವರು ಈ ಹೇಳಿಕೆಗೆ ತೀವ್ರ ವಿರೋಧ ವ್ಯಕ್ತಪಡಿಸಿದ ಕಾಂಗ್ರೆಸ್ ಸಂಸದರು ಲೋಕಸಭೆಯಿಂದ ಹೊರ ನಡೆದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
ರಾಜನಾಥ್ ಸಿಂಗ್Congressಕಾಂಗ್ರೆಸ್ParliamentRajnath SinghLok SabhaಲೋಕಸಭೆMonsoon sessionಮುಂಗಾರು ಅಧಿವೇಶನಸಂಸತ್ತುLynchingState concernಸಾಮೂಹಿಕ ಹಲ್ಲೆರಾಜ್ಯ ಹಿತಾಸಕ್ತಿ
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


