ರಾಜ್ಯಸಭೆ: 10 ಭಾಷೆಗಳಲ್ಲಿ ಮಾತನಾಡಿ ದಾಖಲೆ ಬರೆದ ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು
ಉಪರಾಷ್ಟ್ರಪತಿ ಹಾಗೂ ರಾಜ್ಯಸಭಾ ಅಧ್ಯಕ್ಷ ವೆಂಕಯ್ಯ ನಾಯ್ಡು ಅವರು ಬುಧವಾರ ಆರಂಭಗೊಂಡ ಮುಂಗಾರು ಅಧಿವೇಶನದಲ್ಲಿ 10 ಭಾಷೆಗಳಲ್ಲಿ ಮಾತನಾಡಿ ಹೊಸ ದಾಖಲೆ ನಿರ್ಮಿಸಿದ್ದಾರೆ.

Published On :
ನವದೆಹಲಿ: ಉಪರಾಷ್ಟ್ರಪತಿ ಹಾಗೂ ರಾಜ್ಯಸಭಾ ಅಧ್ಯಕ್ಷ ವೆಂಕಯ್ಯ ನಾಯ್ಡು ಅವರು ಬುಧವಾರ ಆರಂಭಗೊಂಡ ಮುಂಗಾರು ಅಧಿವೇಶನದಲ್ಲಿ 10 ಭಾಷೆಗಳಲ್ಲಿ ಮಾತನಾಡಿ ಹೊಸ ದಾಖಲೆ ನಿರ್ಮಿಸಿದ್ದಾರೆ.
ಬುಧವಾರ ಆರಂಭವಾದ ರಾಜ್ಯಸಭೆ ಕಲಾಪದಲ್ಲಿ ವೆಂಕಯ್ಯ ನಾಯ್ಡು ಅವರು, ಯಾವುದೋ ಒಂದು ವಿಚಾರಕ್ಕೆ ಸಂಬಂಧಿಸಿದ ಘೋಷಣೆ ಮಾಡುವಾಗ ಬಂಗಾಳಿ, ಗುಜರಾತಿ, ಕನ್ನಡ, ಮಲಯಾಳಂ, ಮರಾಠಿ, ನೇಪಾಳಿ, ಒರಿಯಾ, ಪಂಜಾಬಿ, ತಮಿಳು ಮತ್ತು ತೆಲುಗು ಭಾಷೆಗಳಲ್ಲಿ ಮಾತನಾಡಿದ್ದು, ಇದು ಹೊಸ ದಾಖಲೆಯಾಗಿ ಮಾರ್ಪಟ್ಟಿದೆ.
ಇದೇ ವೇಳೆ ಉಪರಾಷ್ಟ್ರಪತಿ ವೆಂಕಯ್ಯನಾಯ್ಡು ಅವರು ರಾಜ್ಯಸಭೆ ಕಲಾಪದಲ್ಲಿ 22 ಭಾಷೆಗಳಲ್ಲಿ ಮಾತನಾಡಬಹುದು ಎಂದು ಪ್ರಕಟಿಸಿರು. ಆದರೆ ಸದಸ್ಯರು ಮಾತನಾಡುವಾಗ ಸಚಿವಾಲಯದ ಗಮನಕ್ಕೆ ತರಬೇಕಾಗುತ್ತದೆ ಎಂದೂ ನಾಯ್ಡು ಮಾಹಿತಿ ನೀಡಿದರು.
ರಾಜ್ಯಸಭೆಯಲ್ಲಿ ಈ ಮೊದಲು ರಾಜ್ಯಸಭೆಯಲ್ಲಿ ಅಸ್ಸಾಮೀ, ಬೆಂಗಾಲಿ, ಗುಜರಾತಿ, ಹಿಂದಿ, ಕನ್ನಡ, ಮಲಯಾಳಂ, ಮರಾಠಿ, ಒರಿಯಾ, ಪಂಜಾಬಿ, ತಮಿಳು , ತೆಲುಗು , ಉರ್ದು ಸೇರಿದಂತೆ 17 ಭಾಷೆಗಳಲ್ಲಿ ಮಾತನಾಡುವ ಅವಕಾಶ ಇತ್ತು. ಇದೀಗ ಹೆಚ್ಚುವರಿಯಾಗಿ ದೋಗ್ರಿ, ಕಾಶ್ಮೀರಿ, ಕೊಂಕಣಿ, ಸಾಂಥಾಲಿ ಮತ್ತು ಸಿಂಧಿ ಭಾಷೆಗಳ ಸೇರ್ಪಡೆಯಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
ನವದೆಹಲಿNew DelhiRajya Sabhaರಾಜ್ಯಸಭೆVenkaiah Naiduವೆಂಕಯ್ಯನಾಯ್ಡುMonsoon sessionIndian ParliementRajya Sabha Languagesಭಾರತೀಯ ಸಂಸತ್ತುರಾಜ್ಯಸಭೆ ಭಾಷೆಗಳು
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


