ಕಾಂಗ್ರೆಸ್‌ಗೆ ಮುಖಭಂಗ, ವಿಪಕ್ಷಗಳ ಅವಿಶ್ವಾಸ ವಿರುದ್ಧ ಗೆದ್ದ ಪ್ರಧಾನಿ ಮೋದಿ!
ಕಾಂಗ್ರೆಸ್ ನೇತೃತ್ವದ ಯುಪಿಎಗೆ ತೀವ್ರ ಮುಖಭಂಗವಾಗಿದ್ದು ವಿಪಕ್ಷಗಳ ಅವಿಶ್ವಾಸ ನಿರ್ಣಯ ವಿರುದ್ಧ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಎನ್ಡಿಎ ಸರ್ಕಾರದ ಭರ್ಜರಿ ಗೆಲುವು ಸಾಧಿಸಿದೆ...

Published On :
ನವದೆಹಲಿ: ಕಾಂಗ್ರೆಸ್ ನೇತೃತ್ವದ ಯುಪಿಎಗೆ ತೀವ್ರ ಮುಖಭಂಗವಾಗಿದ್ದು ವಿಪಕ್ಷಗಳ ಅವಿಶ್ವಾಸ ನಿರ್ಣಯ ವಿರುದ್ಧ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಎನ್ಡಿಎ ಸರ್ಕಾರದ ಭರ್ಜರಿ ಗೆಲುವು ಸಾಧಿಸಿದೆ.
ಲೋಕಸಭೆಯಲ್ಲಿ ಅವಿಶ್ವಾಸ ನಿರ್ಣಯ ಸೋಲು ಕಂಡಿದೆ. ಮ್ಯಾಜಿಕ್ ನಂಬರ್ ಗೆ 248 ಮತಗಳು ಬೇಕಿದ್ದು ನರೇಂದ್ರ ಮೋದಿ ಸರ್ಕಾರಕ್ಕೆ 325 ಮತಗಳು ಬಂದಿವೆ. ಕಾಂಗ್ರೆಸ್ ನೇತೃತ್ವದ ಯುಪಿಎ ಅವಿಶ್ವಾಸ ನಿರ್ಣಯ ಪರವಾಗಿ 126 ಮತಗಳನ್ನು ಪಡೆದಿದೆ.
451 ಸಂಸದರು ಲೋಕಸಭೆಯಲ್ಲಿ ಹಾಜರಿದ್ದು ಬಟನ್ ಒತ್ತುವ ಮೂಲಕ ಮತ ಚಲಾಯಿಸಿದರು. ಇನ್ನು ಮೋದಿ ಸರ್ಕಾರದ ಪರವಾಗಿ 325 ಮತಗಳು ಬಂದಿದ್ದು 199 ಮತಗಳ ಅಂತರದಿಂದ ಗೆಲುವು ಸಾಧಿಸಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Narendra Modiನರೇಂದ್ರ ಮೋದಿCongressಕಾಂಗ್ರೆಸ್bjpಬಿಜೆಪಿRahul Gandhiರಾಹುಲ್ ಗಾಂಧಿLok SabhaಲೋಕಸಭೆNo Confidance Motion
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


