ಬಿಜೆಪಿಯಿಂದ ಭ್ರಷ್ಟಚಾರಿಗಳ ರಕ್ಷಣೆ; 'ಬೆದರಿಕೆ' ಹಾಕುತ್ತಿಲ್ಲ, 'ಶಾಪ' ನೀಡುತ್ತಿದ್ದೇವೆ: ಟಿಡಿಪಿ
ಪ್ರಧಾನಿ ಮೋದಿ ಮತ್ತು ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಅವರು ಸುಳ್ಳು ಭರವಸೆಗಳನ್ನು ನೀಡಿ ಆಂಧ್ರ ಪ್ರದೇಶಕ್ಕೆ ಅನ್ಯಾಯ ಮಾಡಿದ್ದಾರೆ ಎಂದು ಟಿಡಿಪಿ ಆರೋಪಿಸಿದೆ.

Published On :
ನವದೆಹಲಿ: ಪ್ರಧಾನಿ ಮೋದಿ ಮತ್ತು ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಅವರು ಸುಳ್ಳು ಭರವಸೆಗಳನ್ನು ನೀಡಿ ಆಂಧ್ರ ಪ್ರದೇಶಕ್ಕೆ ಅನ್ಯಾಯ ಮಾಡಿದ್ದಾರೆ ಎಂದು ಟಿಡಿಪಿ ಆರೋಪಿಸಿದೆ.
ಸಂಸತ್ ಕಲಾಪದಲ್ಲಿ ಅವಿಶ್ವಾಸ ನಿರ್ಣಯದ ಕುರಿತು ನಡೆದ ಚರ್ಚೆಯಲ್ಲಿ ಮಾತನಾಡಿದ ಟಿಡಿಪಿ ಸಂಸದ ಗಲ್ಲಾ ಜಯದೇವ್ ಅವರು, ಕೇಂದ್ರ ಸರ್ಕಾರ ತಾರತಮ್ಯ ನೀತಿ ಅನುಸರಿಸುತ್ತಿದೆ. ಆಂಧ್ರ ಪ್ರದೇಶ ಹಳೆಯ ಹೆಸರಾದರೂ ಅದು ಹೊಸ ರಾಜ್ಯ, ತೆಲಂಗಾಣ ಹೊಸ ಹೆಸರಾದರೂ ಅದು ಹಳೆಯ ರಾಜ್ಯ. ಇದು ಕೇಂದ್ರ ಸರ್ಕಾರಕ್ಕೆ ತಿಳಿದಿದ್ದರೂ ಆರ್ಥಿಕವಾಗಿ ತೆಲಂಗಾಣಕ್ಕೆ ಬೆಂಬಲ ನೀಡಿದೆ. ಮೋದಿ ಸರ್ಕಾರ 2014ರ ಚುನಾವಣೆ ವೇಳೆ ಆಂಧ್ರ ಪ್ರದೇಶಕ್ಕೆ ವಿಶೇಷ ಸ್ಥಾನಮಾನ ನೀಡುವ ಭರವಸೆ ನೀಡಿದ್ದರು. ಆದರೆ ಎನ್ ಡಿಎ ಸರ್ಕಾರ ರಚನೆಯಾಗಿ 4 ವರ್ಷಗಳೇ ಕಳೆದರೂ ಈ ವರೆಗೂ ಕೇಂದ್ರ ಸರ್ಕಾರ ನೀಡಿದ್ದ ಭರವಸೆಗಳನ್ನು ಈಡೇರಿಸಿಲ್ಲ ಎಂದು ಹೇಳಿದರು.
ಸದನದಲ್ಲಿ ತೆಲುಗಿನ ಬ್ಲಾಕ್ ಬಸ್ಟರ್ ಚಿತ್ರ ಭರತ್ ಅನೇ ನೇನು ಎಂಬ ಚಿತ್ರವನ್ನು ಪ್ರಸಾಪಿಸಿದ ಗಲ್ಲಾ ಜಯದೇವ್ ಅವರು, ಕೊಟ್ಟ ಮಾತನ್ನು ಉಳಿಸಿಕೊಳ್ಳಲು ನಾಯಕ ಹೋರಾಡುವ ಬಗೆಯನ್ನು ಚಿತ್ರದಲ್ಲಿ ವಿವರಿಸಲಾಗಿದೆ. ಆದರೆ ಇದಕ್ಕೆ ವ್ಯತಿರಿಕ್ತವಾಗಿ ಮೋದಿ ಸರ್ಕಾರ ನಡೆದುಕೊಳ್ಳುತ್ತಿದ್ದು, ನೀಡಿದ ಯಾವುದೇ ಭರವಸೆಗಳನ್ನೂ ಮೋದಿ ಸರ್ಕಾರ ಈಡೇರಿಸಿಲ್ಲ. ಎನ್ ಡಿಎ ಆಂಧ್ರ ಪ್ರದೇಶದ 5 ಕೋಟಿ ಜನರಿಗೆ ಅನ್ಯಾಯ ಮಾಡಿಜದೆ ಎಂದು ಹೇಳಿದರು.
ಆಂಧ್ರ ಪ್ರದೇಶಕ್ಕಾಗಿ ಧರ್ಮಯುದ್ಧ
'ಟಿಡಿಪಿ ಅವಿಶ್ವಾಸ ನಿರ್ಣಯ ಮಂಡಿಸುತ್ತಿದೆ. ಇದು ಬಿಜೆಪಿ ಮತ್ತು ಟಿಡಿಪಿ ನಡುವಿನ ಹೋರಾಟವಲ್ಲ. ಆಂಧ್ರದ ಜನರು ಮತ್ತು ಕೇಂದ್ರ ನಡುವಿನ 'ಧರ್ಮಯುದ್ಧ' ಎಂದು ಅವಿಶ್ವಾಸ ಮಂಡಿಸಿದ ಟಿಡಿಪಿ ಸದಸ್ಯ ಜಯದೇವ್ ಗಲ್ಲಾ ಹೇಳಿದರು. ಆಂಧ್ರದ 5 ಕೋಟಿ ಜನರಿಗೆ ಅನ್ಯಾಯವಾಗಿದೆ. ಕೊಟ್ಟಿದ್ದ ಭರವಸೆಯಲ್ಲಿ ಈಡೇರಿಸಿಲ್ಲ ಎಂದು ಪ್ರತಿಪಾದಿಸಿದರು.
ಬಿಜೆಪಿಯಿಂದ ಭ್ರಷ್ಟಚಾರಿಗಳ ರಕ್ಷಣೆ, 'ಬೆದರಿಕೆ' ಹಾಕುತ್ತಿಲ್ಲ. 'ಶಾಪ' ನೀಡುತ್ತಿದ್ದೇವೆ
ಪ್ರಧಾನಿ ಅವರು ಸೀಮಾಂಧ್ರವನ್ನು ‘ಸ್ಕ್ಯಾಮ್ ಆಂಧ್ರ’ ಎಂದು ಟೀಕಿಸಿದ್ದರು. ಆದರೆ, ಬಿಜೆಪಿ ಭ್ರಷ್ಟಾಚಾರಿಗಳನ್ನು ರಕ್ಷಿಸುತ್ತಿದೆ. ಕರ್ನಾಟಕದಲ್ಲಿ ಹಲವು ದೂರುಗಳಿರುವ ಜನಾರ್ಧನ ರೆಡ್ಡಿ ಅವರನ್ನು ರಕ್ಷಿಸುತ್ತಿದ್ದೀರಿ ಎಂದ ಜಯದೇವ ಗಲ್ಲಾ ಅವರು ಸರ್ಕಾರ ಕೆಲವರ ಹಿತಕ್ಕಾಗಿ ಮಾತ್ರ ಕಾರ್ಯ ನಿರ್ವಹಿಸುತ್ತಿದೆ ಎಂದು ಹೇಳಿದರು. 2016ರಲ್ಲಿ ಆಂಧ್ರಕ್ಕೆ ವಿಶೇಷ ಪ್ಯಾಕೇಜ್ ನೀಡುವುದಾಗಿ ಕೇಂದ್ರ ಸರ್ಕಾರ ಹೇಳಿತ್ತು. ನಾವಿನ್ನೂ ಭರವಸೆ ಈಡೇರಲಿದೆ ಎಂಬ ನಿರೀಕ್ಷೆಯಲ್ಲಿದ್ದೇವೆ. ನಾವು ಕೇಂದ್ರ ಸರ್ಕಾರ, ಪ್ರಧಾನಿಗೆ 'ಬೆದರಿಕೆ' ಹಾಕುತ್ತಿಲ್ಲ. 'ಶಾಪ' ನೀಡುತ್ತಿದ್ದೇವೆ. ಇದು ಪ್ರಜಾಪ್ರಭುತ್ವ ಮತ್ತು ಸರ್ಕಾರದ ನಡುವಿನ ಹೋರಾಟ ಎಂದು ಹೇಳಿದರು. ಸರ್ಧಾರ್ ವಲ್ಲಬಾಭಾಯಿ ಪಟೇಲ್ ಮತ್ತು ಛತ್ರಪತಿ ಶಿವಾಜಿ ಮಹಾರಾಜರ ಪ್ರತಿಮೆಗೆ ನೂರಾರು ಕೋಟಿ ಅನುದಾನ ನೀಡಲು ಕೇಂದ್ರ ಸರ್ಕಾರ ಕ್ರಮ ಕೈಗೊಂಡಿದೆ. ಆದರೆ, ಆಂಧ್ರದ ರಾಜಧಾನಿಗೆ ಯಾವ ಯೋಜನೆಯನ್ನೂ ನೀಡುತ್ತಿಲ್ಲ ಎಂದು ದೂರಿದರು. ಸ್ಪೀಕರ್ ಸುಮಿತ್ರಾ ಮಹಾಜನ್ ಅವರು ನೀಡಿದ್ದ ಸಮಯ ಮೀರಿ ಜಯದೇವ್ ಗಲ್ಲಾ ಅವರು ನಿರ್ಣಯ ಮಂಡನೆಯನ್ನು ಮುಂದುವರಿಸಿದ್ದರಿಂದ ಬಿಜೆಪಿ ಸದಸ್ಯರು ಆಕ್ಷೇಪಿಸಿದರು. ಆಗ, ಮಂಡನೆ ಮುಗಿಸುವಂತೆ ಸ್ಪೀಕರ್ ಸೂಚಸಿದರು. ಟಿಡಿಪಿ ಪ್ರಧಾನಿ ನರೇಂದ್ರ ಮೋದಿ ಅವರ ವಿರುದ್ಧ ನೀಡಿರುವ ಹೇಳಿಕೆಗಳನ್ನು ಹಿಂಪಡೆಯಬೇಕು ಎಂದು ರಕ್ಷಣಾ ಸಚಿವೆ ನಿರ್ಮಾಲಾ ಸೀತಾರಾಮನ್ ಆಗ್ರಹಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.
ಬ್ರೇಕಿಂಗ್ ನ್ಯೂಸ್
ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಹೆಚ್ಚಿದ ಒತ್ತಡ: ಮುಖ್ಯ ಚುನಾವಣಾ ಆಯುಕ್ತರನ್ನ ವಜಾ ಮಾಡೊದು ಅಷ್ಟು ಸುಲಭನಾ? ಯಾರಿಗಿದೆ ಆ ಪವರ್? ಸಂವಿಧಾನ ಹೇಳುವುದೇನು?ರಾಹುಕಾಲ ಎಂದರೇನು? ಮದುವೆಗೆ ಅನ್ವಯಿಸುತ್ತದೆಯೇ? ರಾಹು ಶಾಂತಿಗಾಗಿ ನಿಂಬೆ ಹಣ್ಣು ದೀಪ ಹಚ್ಚುವುದು ಸೂಕ್ತವೇ?ಗೌರಿಬಿದನೂರಿನ ಮಣ್ಣಲ್ಲಿ ಅರಳಿದ ಮರುಭೂಮಿ ಹಣ್ಣು: ಅಸಾಧ್ಯವನ್ನು ಸಾಧ್ಯವಾಗಿಸಿದ ಹಠವಾದಿ; ಸ್ವಾವಲಂಬಿ ಕೃಷಿಗೆ ಹೊಸ ಭಾಷ್ಯ ಬರೆದ ದಿವಾಕರ್ ಚನ್ನಪ್ಪ..!ಕರ್ನಾಟಕದ ನಂ.1 ಶ್ರೀಮಂತ ಯಾರು ಗೊತ್ತಾ? ಅಂಬಾನಿ, ಅದಾನಿ ಬಿಡಿ; ಇಲ್ಲಿದೆ ನಮ್ಮ ಕರುನಾಡ ಸಿರಿವಂತರ ಟಾಪ್ ಲಿಸ್ಟ್!ಫ್ಯಾಟ್ ನಿಂದ ಫಿಟ್ ವರೆಗೆ: ಸಾಹೇಬಲಾಲ್ ಛಪ್ಪರ್ಬಂದ್ ಸ್ಫೂರ್ತಿದಾಯಕ ಪಯಣವಿದೇಶಿ ಪ್ರವಾಸದ ಪ್ಲ್ಯಾನ್ ಇದೆಯೇ? ಒಂದು ಸಣ್ಣ ತಪ್ಪು ಭಾರೀ ದಂಡಕ್ಕೆ ಕಾರಣವಾಗಬಹುದು; ಪ್ರವಾಸಿಗರು ತಿಳಿದಿರಲೇಬೇಕಾದ ನಿಯಮಗಳಿವು...!ಮನಸ್ಸಿದ್ದರೆ ಮಾರ್ಗ ಎಂಬುದನ್ನು ರುಜುವಾತು ಮಾಡಿದ ಛಲವಾದಿ; 27 ವರ್ಷಗಳ ಹೋರಾಟದಲ್ಲಿ 26 ಬಾರಿ ಸೋತು 59ನೇ ವಯಸ್ಸಿನಲ್ಲಿ ಸರ್ಕಾರಿ ಶಿಕ್ಷಕರಾದ ವಿಜಯ್ಪಶ್ಚಿಮ ಘಟ್ಟಗಳ ESA - ಕಸ್ತೂರಿರಂಗನ್ ವರದಿ ಇನ್ನೂ ಏಕೆ ಜಾರಿಗೆ ಬಂದಿಲ್ಲ?


