ದೇಶ

ಯುಪಿಎ ಅಧಿಕಾರದಲ್ಲಿದ್ದಾಗ ನಾವು ಅವಿಶ್ವಾಸ ನಿರ್ಣಯ ಮಂಡಿಸಿರಲಿಲ್ಲ: ರಾಜನಾಥ್ ಸಿಂಗ್

ಕಾಂಗ್ರೆಸ್ ನೇತೃತ್ವದ ಯುಪಿಎ ಸರ್ಕಾರ ಅಧಿಕಾರದಲ್ಲಿದ್ದಾಗ ಬಿಜೆಪಿ ಯಾವತ್ತೂ ಅವಿಶ್ವಾಸ ನಿರ್ಣಯ ಮಂಡಿಸುವ ಮೂಲಕ...

ಯುಪಿಎ ಅಧಿಕಾರದಲ್ಲಿದ್ದಾಗ ನಾವು ಅವಿಶ್ವಾಸ ನಿರ್ಣಯ ಮಂಡಿಸಿರಲಿಲ್ಲ: ರಾಜನಾಥ್ ಸಿಂಗ್
ರಾಜನಾಥ್ ಸಿಂಗ್
Published On :
ನವದೆಹಲಿ: ಕಾಂಗ್ರೆಸ್ ನೇತೃತ್ವದ ಯುಪಿಎ ಸರ್ಕಾರ ಅಧಿಕಾರದಲ್ಲಿದ್ದಾಗ ಬಿಜೆಪಿ ಯಾವತ್ತೂ ಅವಿಶ್ವಾಸ ನಿರ್ಣಯ ಮಂಡಿಸುವ ಮೂಲಕ ಸರ್ಕಾರ ಬೀಳಿಸುವ ಯತ್ನ ಮಾಡಲಿಲ್ಲ ಎಂದು ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ಅವರು ಶುಕ್ರವಾರ ಹೇಳಿದ್ದಾರೆ.
ಇಂದು ಎನ್ ಡಿಎ ಸರ್ಕಾರದ ವಿರುದ್ಧ ಟಿಡಿಪಿ ಮಂಡಿಸಿದ ಅವಿಶ್ವಾಸ ನಿರ್ಣಯದ ಮೇಲಿನ ಚರ್ಚೆಯಲ್ಲಿ ಭಾಗವಹಿಸಿ ಮಾತನಾಡಿದ ರಾಜನಾಥ್ ಸಿಂಗ್ ಅವರು, ಯುಪಿಎಗೆ ಜನಾದೇಶವಿದೆ ಎಂದು ನಾವು ಒಪ್ಪಿಕೊಂಡಿದ್ದೇವು. ಆದರೆ ಈಗ ಅವಿಶ್ವಾಸ ನಿರ್ಣಯಕ್ಕೆ ಸೋಲಾಗುತ್ತದೆ ಎಂದು ಪ್ರತಿಪಕ್ಷಗಳಿಗೆ ಗೊತ್ತಿದ್ದರೂ ಜನಾದೇಶಕ್ಕೆ ವಿರುದ್ಧವಾಗಿ 15 ವರ್ಷಗಳ ನಂತರ ಅವಿಶ್ವಾಸ ನಿರ್ಣಯ ಮಂಡಿಸಲಾಗಿದೆ. ಅದನ್ನು ನಾವು ಈಗಲೂ ಒಪ್ಪಿಕೊಳ್ಳುತ್ತೇವೆ ಎಂದರು. 
ರಫೆಲ್ ಡೀಲ್ ಗೆ ಸಂಬಂಧಿಸಿದಂತೆ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿಯ ಆರೋಪ ಆಧಾರ ರಹಿತ ಎಂದು ಗೃಹ ಸಚಿವರು ಹೇಳಿದರು.
ಇದೇ ವೇಳೆ ದೇಶದಲ್ಲಿ ಹೆಚ್ಚುತ್ತಿರುವ ಸಾಮೂಹಿಕ ಹಿಂಸಾಚಾರದ ಬಗ್ಗೆ ಮಾತನಾಡಿದ ರಾಜನಾಥ್ ಸಿಂಗ್ ಅವರು, ಸಾಮೂಹಿಕ ಹಿಂಸಾಚಾರವನ್ನು ನಾನು ಖಂಡಿಸುತ್ತೇನೆ ಮತ್ತು ಅಗತ್ಯ ಬಿದ್ದರೆ ಅದನ್ನು ನಿಯಂತ್ರಿಸಲು ಕಠಿಣ ಕಾನೂನು ತರಲಾಗುವುದು. ಆದರೆ ಮೊದಲ ಮತ್ತು ಅತಿ ದೊಡ್ಡ ಸಾಮೂಹಿಕ ಹಿಂಸಾಚಾರ 1984ರಲ್ಲೇ ನಡೆದಿತ್ತು ಎಂಬುದನ್ನು ನಿಮ್ಮ ಗಮನಕ್ಕೆ ತರಲು ಬಯಸುತ್ತೇನೆ ಎಂದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.