ಜಿಎಸ್ ಟಿ ಸಭೆ: 17 ಐಷಾರಾಮಿ ಉತ್ಪನ್ನಗಳ ತೆರಿಗೆ ಇಳಿಕೆ, ಮಧ್ಯಮ ವರ್ಗದವರಿಗೆ ಉಪಯೋಗಗಳೇನು ಗೊತ್ತೇ?
ಜಿಎಸ್ ಟಿಯ 28 ನೇ ಸಭೆಯಲ್ಲಿ ಸ್ಯಾನಿಟರಿ ನ್ಯಾಪ್ಕಿನ್ ನ್ನು ಜಿ ಎಸ್ ಟಿ ವ್ಯಾಪ್ತಿಯಿಂದ ಹೊರಗಿಡುವುದೂ ಸೇರಿದಂತೆ ಹಲವು ಮಹತ್ವದ ನಿರ್ಧಾರಗಳನ್ನು ಕೈಗೊಳ್ಳಲಾಗಿದ್ದು....

Published On :
ನವದೆಹಲಿ: ಜಿಎಸ್ ಟಿಯ 28 ನೇ ಸಭೆಯಲ್ಲಿ ಸ್ಯಾನಿಟರಿ ನ್ಯಾಪ್ಕಿನ್ ನ್ನು ಜಿ ಎಸ್ ಟಿ ವ್ಯಾಪ್ತಿಯಿಂದ ಹೊರಗಿಡುವುದೂ ಸೇರಿದಂತೆ ಹಲವು ಮಹತ್ವದ ನಿರ್ಧಾರಗಳನ್ನು ಕೈಗೊಳ್ಳಲಾಗಿದ್ದು, ಮಧ್ಯಮ ವರ್ಗದವರು ಹೆಚ್ಚು ಬಳಕೆ ಮಾಡುವ ಉತ್ಪನ್ನಗಳ ಮೇಲಿನ ತೆರಿಗೆ ಇಳಿಕೆ ಮಾಡಲಾಗಿದೆ.
ಜಿಎಸ್ ಟಿ ಸಭೆಯ ಬಳಿಕ ಮಾತನಾಡಿರುವ ಕೇಂದ್ರ ವಿತ್ತ ಸಚಿವ ಪಿಯೂಷ್ ಗೋಯಲ್, "ಪಾದರಕ್ಷೆಗಳು, ಸಣ್ಣ ಟಿವಿಗಳು ಸೇರಿದಂತೆ ದಿನ ನಿತ್ಯ ಬಳಕೆಯಾಗುವ ಉತ್ಪನ್ನಗಳ ಮೇಲಿನ ತೆರಿಗೆಯನ್ನು ಜಿಎಸ್ ಟಿ ಸಭೆಯಲ್ಲಿ ಇಳಿಕೆ ಮಾಡಲಾಗಿದೆ" ಎಂದು ತಿಳಿಸಿದ್ದಾರೆ.
ಶೇ.12 ರಷ್ಟು ತೆರಿಗೆ ವ್ಯಾಪ್ತಿಗೆ ಒಳಪಡುತ್ತಿದ್ದ ಸ್ಯಾನಿಟರಿ ನ್ಯಾಪ್ಕಿನ್ ಗಳನ್ನು ಜಿಎಸ್ ಟಿ ವ್ಯಾಪ್ತಿಯಿಂದ ಹೊರಗಿಡಲಾಗಿದ್ದರೆ, ಪಾದರಕ್ಷೆಗಳು, ವಾಟರ್ ಹೀಟರ್, ಎಲೆಕ್ಟ್ರಿಕ್ ಇಸ್ತ್ರಿ ಯಂತ್ರಗಳು, ಲಿಥಿಯಂ-ಐಯಾನ್ ಬ್ಯಾಟರಿಗಳು, ಹೇರ್ ಡೈ, ವ್ಯಾಕ್ಯೂಮ್ ಕ್ಲೀನರ್, ಆಹಾರ ವಸ್ತುಗಳು, ಎಥೆನಾಲ್, ಫ್ರಿಡ್ಜ್ , ವಾಷಿಂಗ್ ಮಷೀನ್, 68 ಸೆಂಟೀ ಮೀಟರ್ ವರೆಗಿನ ಟಿ.ವಿಗಳ ತೆರಿಗೆ ಸ್ಲ್ಯಾಬ್ ನ್ನು ಇಳಿಕೆ ಮಾಡಲಾಗಿದೆ.
ಶೇ.28 ರಿಂದ 18ಕ್ಕೆ ಇಳಿಕೆಯಾಗಿರುವ 17 ವಸ್ತುಗಳು
- ವಾಟರ್ ಹೀಟರ್
- ವ್ಯಾಕ್ಯೂಮ್ ಕ್ಲೀನರ್
- ಫ್ರಿಡ್ಜ್
- ವಾಷಿಂಗ್ ಮಷೀನ್
- 68 ಸೆಂಟೀ ಮೀಟರ್ ವರೆಗಿನ ಟಿ.ವಿ
ಶೇ.5 ಕ್ಕೆ ಇಳಿಕೆಯಾಗಿರುವ ವಸ್ತುಗಳು
- ಕೋಟಾ ಕಲ್ಲು
- ಸ್ಯಾಂಡ್ ಸ್ಟೋನ್ (ಮರಳುಗಲ್ಲು)
- ಎಥೆನಾಲ್
ಶೇ.5 ರಷ್ಟು ತೆರಿಗೆ ವ್ಯಾಪ್ತಿಗೆ ಒಳಪಡುತ್ತಿದ್ದ ಪಾದರಕ್ಷೆಗಳ ಮೌಲ್ಯವನ್ನು ರೂ,500 ರಿಂದ 1,000 ಕ್ಕೆ ಹೆಚ್ಚಿಸಲಾಗಿದ್ದು, ಒಟ್ಟಾರೆ 100 ಉತ್ಪನ್ನಗಳ ಬೆಲೆಯ ಮೇಲೆ ಪರಿಣಾಮ ಬೀರಲಿದೆ. ಮುಂದಿನ ಜಿಎಸ್ ಟಿ ಸಭೆಯನ್ನು ಆಗಸ್ಟ್ 4 ಕ್ಕೆ ನಿಗದಿಪಡಿಸಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.
ಬ್ರೇಕಿಂಗ್ ನ್ಯೂಸ್
ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಹೆಚ್ಚಿದ ಒತ್ತಡ: ಮುಖ್ಯ ಚುನಾವಣಾ ಆಯುಕ್ತರನ್ನ ವಜಾ ಮಾಡೊದು ಅಷ್ಟು ಸುಲಭನಾ? ಯಾರಿಗಿದೆ ಆ ಪವರ್? ಸಂವಿಧಾನ ಹೇಳುವುದೇನು?ರಾಹುಕಾಲ ಎಂದರೇನು? ಮದುವೆಗೆ ಅನ್ವಯಿಸುತ್ತದೆಯೇ? ರಾಹು ಶಾಂತಿಗಾಗಿ ನಿಂಬೆ ಹಣ್ಣು ದೀಪ ಹಚ್ಚುವುದು ಸೂಕ್ತವೇ?ಗೌರಿಬಿದನೂರಿನ ಮಣ್ಣಲ್ಲಿ ಅರಳಿದ ಮರುಭೂಮಿ ಹಣ್ಣು: ಅಸಾಧ್ಯವನ್ನು ಸಾಧ್ಯವಾಗಿಸಿದ ಹಠವಾದಿ; ಸ್ವಾವಲಂಬಿ ಕೃಷಿಗೆ ಹೊಸ ಭಾಷ್ಯ ಬರೆದ ದಿವಾಕರ್ ಚನ್ನಪ್ಪ..!ಕರ್ನಾಟಕದ ನಂ.1 ಶ್ರೀಮಂತ ಯಾರು ಗೊತ್ತಾ? ಅಂಬಾನಿ, ಅದಾನಿ ಬಿಡಿ; ಇಲ್ಲಿದೆ ನಮ್ಮ ಕರುನಾಡ ಸಿರಿವಂತರ ಟಾಪ್ ಲಿಸ್ಟ್!ಫ್ಯಾಟ್ ನಿಂದ ಫಿಟ್ ವರೆಗೆ: ಸಾಹೇಬಲಾಲ್ ಛಪ್ಪರ್ಬಂದ್ ಸ್ಫೂರ್ತಿದಾಯಕ ಪಯಣವಿದೇಶಿ ಪ್ರವಾಸದ ಪ್ಲ್ಯಾನ್ ಇದೆಯೇ? ಒಂದು ಸಣ್ಣ ತಪ್ಪು ಭಾರೀ ದಂಡಕ್ಕೆ ಕಾರಣವಾಗಬಹುದು; ಪ್ರವಾಸಿಗರು ತಿಳಿದಿರಲೇಬೇಕಾದ ನಿಯಮಗಳಿವು...!ಮನಸ್ಸಿದ್ದರೆ ಮಾರ್ಗ ಎಂಬುದನ್ನು ರುಜುವಾತು ಮಾಡಿದ ಛಲವಾದಿ; 27 ವರ್ಷಗಳ ಹೋರಾಟದಲ್ಲಿ 26 ಬಾರಿ ಸೋತು 59ನೇ ವಯಸ್ಸಿನಲ್ಲಿ ಸರ್ಕಾರಿ ಶಿಕ್ಷಕರಾದ ವಿಜಯ್ಪಶ್ಚಿಮ ಘಟ್ಟಗಳ ESA - ಕಸ್ತೂರಿರಂಗನ್ ವರದಿ ಇನ್ನೂ ಏಕೆ ಜಾರಿಗೆ ಬಂದಿಲ್ಲ?


