ಕಾಶ್ಮೀರ ಕ್ರಿಕೆಟ್ ಸಂಸ್ಥೆಯ ಹಣ ದುರ್ಬಳಕೆ: ವಿಚಾರಣೆಗೆ ಹಾಜರಾಗುವಂತೆ ಫಾರೂಕ್ ಅಬ್ದುಲ್ಲಾಗೆ ಕೋರ್ಟ್ ನಿರ್ದೇಶನ
ಜಮ್ಮು ಮತ್ತು ಕಾಶ್ಮೀರ ಕ್ರಿಕೆಟ್ ಸಂಸ್ಥೆಯಲ್ಲಿ ಹಣದ ಅವ್ಯವಹಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಶ್ಮೀರ ಕೋರ್ಟ್ ವಿಚಾರಣೆಗೆ ಹಾಜರಾಗುವಂತೆ ನ್ಯಾಷನಲ್ ಕಾನ್ಫರೆನ್ಸ್ ಪಕ್ಷದ ಮುಖ್ಯಸ್ಥ ಫಾರೂಕ್ ಅಬ್ದುಲ್ಲಾ ಅವರಿಗೆ ಸೂಚಿಸಿದೆ.

Published On :
ಶ್ರೀನಗರ: ಜಮ್ಮು ಮತ್ತು ಕಾಶ್ಮೀರ ಕ್ರಿಕೆಟ್ ಸಂಸ್ಥೆಯಲ್ಲಿ ಹಣದ ಅವ್ಯವಹಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಶ್ಮೀರ ಕೋರ್ಟ್ ವಿಚಾರಣೆಗೆ ಹಾಜರಾಗುವಂತೆ ನ್ಯಾಷನಲ್ ಕಾನ್ಫರೆನ್ಸ್ ಪಕ್ಷದ ಮುಖ್ಯಸ್ಥ ಫಾರೂಕ್ ಅಬ್ದುಲ್ಲಾ ಅವರಿಗೆ ಸೂಚಿಸಿದೆ.
ಮುಂಬರುವ ಆಗಸ್ಚ್ 29ರಂದು ಈ ಪ್ರಕರಣದ ವಿಚಾರಣೆ ನಡೆಯಲಿದ್ದು, ಅಂದು ಕಡ್ಡಾಯವಾಗಿ ಫಾರೂಕ್ ಅಬ್ದುಲ್ಲಾ ಹಾಜರಾಗಬೇಕು ಎಂದು ಕೋರ್ಟ್ ಸೂಚಿಸಿದೆ. 'ಪ್ರಕರಣದ ಸಂಬಂಧ ಆರೋಪಿಗಳು ಜಾಮೀನು ಕೋರಿ ಅರ್ಜಿ ಸಲ್ಲಿಕೆ ಮಾಡಲು ಮತ್ತು ಖುದ್ದು ಹಾಜರಾತಿಗೆ ವಿನಾಯಿತಿ ಕೋರಲು ಅವರು ಮುಂಬರುವ ವಿಚಾರಣೆಗೆ ಕಡ್ಡಾಯವಾಗಿ ಹಾಜರಾಗಲೇ ಬೇಕು ಎಂದು ಕೋರ್ಟ್ ಆದೇಶಿಸಿದೆ.
ಕಾಶ್ಮೀರ ಕ್ರಿಕೆಟ್ ಸಂಸ್ಛೆಯಲ್ಲಿನ ಅವ್ಯವಹಾರ ಪ್ರಕರಣಕ್ಕೆ ಸಂಬಂಧಿಸದಂತೆ ಜುಲೈ 16ರಂದು ಸಿಬಿಐ ಅಧಿಕಾರಿಗಳು ಚಾರ್ಜ್ ಶೀಟ್ ಸಲ್ಲಿಕೆ ಮಾಡಿದ್ದರು. ಈ ಚಾರ್ಜ್ ಶೀಟ್ ನಲ್ಲಿ ಒಟ್ಟು 4 ಪ್ರಮುಖ ಆರೋಪಿಗಳ ಹೆಸರು ಉಲ್ಲೇಖವಾಗಿದ್ದು. ಈ ಪೈಕಿ ಕಾಶ್ಮೀರ ಮಾಜಿ ಸಿಎಂ ಹಾಗೂ ಕಾಶ್ಮೀರ ಕ್ರಿಕೆಟ್ ಸಂಸ್ಥೆಯ ಮಾಜಿ ಅಧ್ಯಕ್ಷ ಫಾರೂಕ್ ಅಬ್ದುಲ್ಲಾ, ಮಾಜಿ ಎಂಡಿ ಸಲೀಮ್ ಖಾನ್, ಮಾಜಿ ಕಾರ್ಯದರ್ಶಿ ಅಹ್ಸಾನ್ ಅಹ್ಮದ್ ಮಿರ್ಜಾ ಮತ್ತು ಮಾಜಿ ಖಜಾಂಚಿ ಬಷೀರ್ ಅಹ್ನದ್ ಮಿಸ್ಗರ್ ಸೇರಿ ಒಟ್ಟು 4 ಮಂದಿಯ ವಿರುದ್ಧ ಅಧಿಕಾರಿಗಳು ಚಾರ್ಜ್ ಶೀಟ್ ಸಲ್ಲಿಕೆ ಮಾಡಿದ್ದರು. 2015ರಲ್ಲಿ ಕಾಶ್ಮೀರ ಹೈಕೋರ್ಟ್ ಪ್ರಕರಣವನ್ನು ಸಿಬಿಐಗೆ ವಹಿಸಿತ್ತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
ಶ್ರೀನಗರSrinagarಜಮ್ಮು ಮತ್ತು ಕಾಶ್ಮೀರJammu and KashmirFarooq Abdullahಫಾರೂಕ್ ಅಬ್ಗುಲ್ಲಾJ-K Cricket Associationಕಾಶ್ಮೀರ ಕ್ರಿಕೆಟ್ ಅಸೋಸಿಯೇಷನ್
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


