ಸಂಸತ್ ಗೆ ಸುಳ್ಳು ಮಾಹಿತಿ ಆರೋಪ, ರಾಹುಲ್ ಗಾಂಧಿ ವಿರುದ್ಧ ಬಿಜೆಪಿ ಹಕ್ಕು ಚ್ಯುತಿ ಮಂಡನೆ?
ಲೋಕಸಭೆಯಲ್ಲಿ ಅವಿಶ್ವಾಸ ನಿರ್ಣಯ ಗೊತ್ತುವಳಿ ಚರ್ಚೆ ವೇಳೆ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಸರ್ಕಾರದ ವಿರುದ್ಧ ಸುಳ್ಳು ಆರೋಪಗಳನ್ನು ಮಾಡಿದ್ದಾರೆ ಎಂದು ಆರೋಪಿಸಿ ಬಿಜೆಪಿ ಪಕ್ಷ ರಾಹುಲ್ ವಿರುದ್ಧ ಹಕ್ಕುಚ್ಯುತಿ ಮಂಡಿಸುವುದಾಗಿ ಹೇಳಿದೆ.

Published On :
ನವದೆಹಲಿ: ಲೋಕಸಭೆಯಲ್ಲಿ ಅವಿಶ್ವಾಸ ನಿರ್ಣಯ ಗೊತ್ತುವಳಿ ಚರ್ಚೆ ವೇಳೆ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಸರ್ಕಾರದ ವಿರುದ್ಧ ಸುಳ್ಳು ಆರೋಪಗಳನ್ನು ಮಾಡಿದ್ದಾರೆ ಎಂದು ಆರೋಪಿಸಿ ಬಿಜೆಪಿ ಪಕ್ಷ ರಾಹುಲ್ ವಿರುದ್ಧ ಹಕ್ಕುಚ್ಯುತಿ ಮಂಡಿಸುವುದಾಗಿ ಹೇಳಿದೆ.
ಅವಿಶ್ವಾಸ ನಿರ್ಣಯದ ವೇಳೆ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ರಫೆಲ್ ಯುದ್ಧ ವಿಮಾನ ಖರೀದಿ ಒಪ್ಪಂದ, ಜಿಎಸ್ ಟಿ, ಜಯ್ ಷಾ ಆಸ್ತಿ ಸೇರಿದಂತೆ ಸಾಕಷ್ಟು ವಿಚಾರಗಳ ಕುರಿತು ಮಾತನಾಡಿದ್ದರು. ಈ ಎಲ್ಲ ಅಂಶಗಳನ್ನೂ ತಳ್ಳಿ ಹಾಕಿರುವ ಬಿಜೆಪಿ ರಾಹುಲ್ ಗಾಂಧಿ ದೇಶಕ್ಕೆ ಸುಳ್ಳು ಮಾಹಿತಿ ನೀಡಿದ್ದಾರೆ ಎಂದು ಆರೋಪಿಸಿದೆ. ಅಲ್ಲದೆ ಸುಳ್ಳು ಆರೋಪಗಳ ಮೂಲಕ ಸರ್ಕಾರದ ಘನತೆಗೆ ಧಕ್ಕೆ ತರಲು ಯತ್ನಿಸಿದ್ದಾರೆ ಎಂದು ಬಿಜೆಪಿ ಆರೋಪಿಸಿದೆ.
ಅಂತೆಯೇ ರಫೆಲ್ ಒಪ್ಪಂದ, ಜಿಎಸ್ ಟಿ ಕುರಿತು ರಾಹುಲ್ ಗಾಂಧಿ ಆಡಿರುವ ಮಾತುಗಳಲ್ಲಿ ಯಾವುದೇ ಸತ್ಯಾಂಶವಿಲ್ಲ ಎಂದಿರುವ ಬಿಜೆಪಿ, ದೇಶಕ್ಕೆ ಸುಳ್ಳು ಮಾಹಿತಿ ನೀಡಿದ ರಾಹುಲ್ ವಿರುದ್ಧ ಹಕ್ಕುಚ್ಯುತಿ ಮಂಡನೆಗೆ ಅವಕಾಶ ನೀಡುವಂತೆ ಸ್ಪೀಕರ್ ಅವರಲ್ಲಿ ಮನವಿ ಮಾಡಿದ್ದಾರೆ ಎಂದು ತಿಳಿದುಬಂದಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
ನವದೆಹಲಿNew DelhibjpಬಿಜೆಪಿRahul Gandhiರಾಹುಲ್ ಗಾಂಧಿNo Confidence Motionಅವಿಶ್ವಾಸ ನಿರ್ಣಯprivilege motionಹಕ್ಕುಚ್ಯುತಿ ಮಂಡನೆIndian Parliementಭಾರತದ ಸಂಸತ್ತು
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


