ಆಗಸ್ಟ್ 15 ರಿಂದ ಬಿಜೆಪಿ ಹಠಾವೊ, ದೇಶ ಬಚಾವೋ ಆಂದೋಲನ ಪ್ರಾರಂಭ- ಮಮತಾ
2019 ರ ಲೋಕಸಭಾ ಚುನಾವಣೆ ಬಿಜೆಪಿಗೆ ದೊಡ್ಡ ಅಗ್ನಿ ಪರೀಕ್ಷೆಯಾಗಲಿದ್ದು, ಆಗಸ್ಟ್ 15 ರಿಂದ ಬಿಜೆಪಿ ಹಠಾವೋ, ದೇಶ ಬಚಾವೋ ಆಂದೋಲನಾ ಪ್ರಾರಂಭಿಸುವುದಾಗಿ ತೃಣಮೂಲ ಕಾಂಗ್ರೆಸ್ ಅಧ್ಯಕ್ಷೆ ಮಮತಾ ಬ್ಯಾನರ್ಜಿ ತಿಳಿಸಿದ್ದಾರೆ.

ಕೋಲ್ಕತ್ತಾ: 2019 ರ ಲೋಕಸಭಾ ಚುನಾವಣೆ ಬಿಜೆಪಿಗೆ ದೊಡ್ಡ ಅಗ್ನಿ ಪರೀಕ್ಷೆಯಾಗಲಿದ್ದು, ಆಗಸ್ಟ್ 15 ರಿಂದ ಬಿಜೆಪಿ ಹಠಾವೋ, ದೇಶ ಬಚಾವೋ ಆಂದೋಲನಾ ಪ್ರಾರಂಭಿಸುವುದಾಗಿ ತೃಣಮೂಲ ಕಾಂಗ್ರೆಸ್ ಅಧ್ಯಕ್ಷೆ ಮಮತಾ ಬ್ಯಾನರ್ಜಿ ತಿಳಿಸಿದ್ದಾರೆ.
ಹುತಾತ್ಮ ದಿನದ ಅಂಗವಾಗಿ ಆಯೋಜಿಸಿದ್ದ ಕಾರ್ಯಕ್ರಮವೊಂದರಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ದೇಶದ ಎಲ್ಲಾ ಕಡೆ ಗುಂಪು ಹಲ್ಲೆಗಳು ಹೆಚ್ಚಾಗುತ್ತಿದ್ದು, ಜನರಲ್ಲಿ ತಾಲಿಬಾನ್ ಭೀತಿ ಸೃಷ್ಟಿಸಲಾಗುತ್ತಿದೆ. ಬಿಜೆಪಿ , ಆರ್ ಎಸ್ ಎಸ್ ನಲ್ಲಿ ಕೆಲವರು ಒಳ್ಳೆವರಿದ್ದು, ಅವರಿಗೆ ಗೌರವ ನೀಡುತ್ತೇನೆ. ಆದರೆ. ಮತ್ತೆ ಕೆಲವರು ಕೊಳಕು ರಾಜಕೀಯ ಮಾಡುತ್ತಿದ್ದಾರೆ ಎಂದು ಆರೋಪಿಸಿದರು.
ಪಶ್ಚಿಮ ಬಂಗಾಳದಲ್ಲಿ ಎಡರಂಗದ ಸರ್ಕಾರದ ವೇಳೆಯಲ್ಲಿ 1993ರಲ್ಲಿ ಪೊಲೀಸರ ಗುಂಡೇಟಿಗೆ ಬಲಿಯಾದ 13 ಯುವ ಕಾಂಗ್ರೆಸ್ ಕಾರ್ಯಕರ್ತರ ಸ್ಮರಣೆ ಹಿನ್ನೆಲೆಯಲ್ಲಿ ಪ್ರತಿ ವರ್ಷ ಜುಲೈ 21 ರಂದು ತೃಣಮೂಲ ಕಾಂಗ್ರೆಸ್ ವತಿಯಿಂದ ಹುತಾತ್ಮರ ದಿನ ಆಚರಿಸಲಾಗುತ್ತದೆ. ಆ ವೇಳೆಯಲ್ಲಿ ಮಮತಾ ಬ್ಯಾನರ್ಜಿ ಯುವ ಕಾಂಗ್ರೆಸ್ ನಾಯಕರಾಗಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


