ದೇಶ

ಜಮ್ಮು-ಕಾಶ್ಮೀರ : ಕುಲ್ಗಾಂನಲ್ಲಿ ಮೂವರು ಉಗ್ರರ ಹತ್ಯೆ, ಎನ್ ಕೌಂಟರ್ ಪ್ರಗತಿಯಲ್ಲಿ

ಜಮ್ಮು-ಕಾಶ್ಮೀರದ ಕುಲ್ಗಾಂ ಪ್ರದೇಶದಲ್ಲಿ ಪೊಲೀಸ್ ಕಾನ್ಸ್ ಟೇಬಲ್ ಅಪಹರಿಸಿ ಕೊಂದ ಬಳಿಕ ಭದ್ರತಾ ಪಡೆಗಳು ಕಾರ್ಯಾಚರಣೆ ಮುಂದುವರೆಸಿದ್ದು, ಎನ್ ಕೌಂಟರ್ ನಲ್ಲಿ ಮೂವರು ಉಗ್ರರನ್ನು ಹತ್ಯೆ ಮಾಡುವಲ್ಲಿ ಯಶಸ್ವಿಯಾಗಿದ್ದಾರೆ

ಜಮ್ಮು-ಕಾಶ್ಮೀರ : ಕುಲ್ಗಾಂನಲ್ಲಿ ಮೂವರು ಉಗ್ರರ ಹತ್ಯೆ,  ಎನ್ ಕೌಂಟರ್ ಪ್ರಗತಿಯಲ್ಲಿ
ಭದ್ರತಾ ಪಡೆಗಳು
Published On :

ಶ್ರೀನಗರ: ಜಮ್ಮು-ಕಾಶ್ಮೀರದ ಕುಲ್ಗಾಂ  ಪ್ರದೇಶದಲ್ಲಿ ಪೊಲೀಸ್ ಕಾನ್ಸ್ ಟೇಬಲ್ ಅಪಹರಿಸಿ ಕೊಂದ ಬಳಿಕ  ಭದ್ರತಾ ಪಡೆಗಳು ಕಾರ್ಯಾಚರಣೆ ಮುಂದುವರೆಸಿದ್ದು, ಎನ್ ಕೌಂಟರ್ ನಲ್ಲಿ ಮೂವರು ಉಗ್ರರನ್ನು ಹತ್ಯೆ ಮಾಡುವಲ್ಲಿ ಯಶಸ್ವಿಯಾಗಿದ್ದಾರೆ. ಕಾರ್ಯಾಚರಣೆ ಪ್ರಗತಿಯಲ್ಲಿದೆ  .

ಪೊಲೀಸ್ ಕಾನ್ಸ್ ಟೇಬಲ್  ಸಲೀಂ ಅಹ್ಮದ್ ಶಾ ಅವರನ್ನು ಅಪಹರಿಸಿ ಹತ್ಯೆಗೈಯಲಾಗಿದ್ದ ಸ್ಥಳದಿಂದ ಸ್ವಲ್ಪ ದೂರದಲ್ಲಿ ಎನ್ ಕೌಂಟರ್ ಕಾರ್ಯಾಚರಣೆ ನಡೆಯುತ್ತಿದೆ.  ಶಾ ಕಥುವಾದಲ್ಲಿ ಪೊಲೀಸ್ ತರಬೇತಿ ಪಡೆಯುತ್ತಿದ್ದರು.ರಜೆಯ ಮೇಲೆ ಕುಲ್ಗಾಂನಲ್ಲಿರುವ  ಮನೆಯಲ್ಲಿದ್ದಾಗ ಅವರನ್ನು ಅಪಹರಿಸಿ ಹತ್ಯೆಗೈಯಲಾಗಿತ್ತು.

ರಾಜ್ಯ ಪೊಲೀಸ್ ಹಾಗೂ ಸೇನೆಯೊಂದಿಗೆ  ಸಿಆರ್ ಪಿಎಫ್ ಪೊಲೀಸರು  ಉಗ್ರರ ವಿರುದ್ಧದ ಕಾರ್ಯಾಚಾರಣೆಯಲ್ಲಿ ಪಾಲ್ಗೊಂಡಿದ್ದಾರೆ. ಶ್ರೀನಗರದಿಂದ 70  ಕಿಲೋ ಮೀಟರ್ ದೂರದಲ್ಲಿರುವ ಕುಲ್ಗಾಂ ಖುದ್ವಾನಿ ಬಳಿ ಕಾರ್ಯಾಚಾರಣೆ ನಡೆಯುತ್ತಿದೆ.

ನಾಲ್ವರು ಉಗ್ರರಿರುವ ಬಗ್ಗೆ ಭದ್ರತಾ ಪಡೆಗಳು ಅನುಮಾನ ವ್ಯಕ್ತಪಡಿಸಿವೆ. ಕೆಲ ವ್ಯಕ್ತಿಗಳು ಭದ್ರತಾ ಪಡೆಗಳ ಮೇಲೆ ಕಲ್ಲು ತೂರಾಟ ನಡೆಸಿದ್ದರು ಎಂದು ಪೊಲೀಸರು ಹೇಳಿದ್ದಾರೆ. 
ಪೊಲೀಸ್ ಕಾನ್ಸ್ ಟೇಬಲ್ ಕೊಂದ ಸ್ಥಳದಲ್ಲಿ ಉಗ್ರರು ಅಡಗಿರುವ ಬಗ್ಗೆ ರಹಸ್ಯ ಮಾಹಿತಿ ಪಡೆದು ಭದ್ರತಾ ಪಡೆಗಳು ಶೋಧ ಕಾರ್ಯಾಚರಣೆ ಕೈಗೊಂಡಿವೆ.  ಭದ್ರತಾ ಪಡೆಗಳು ಮೇಲೆ ಉಗ್ರರು ಗುಂಡಿನ ದಾಳಿ ನಡೆಸಿದ ನಂತರ ಶೋಧ ಕಾರ್ಯಾಚರಣೆ  ಹಠಾತ್ ಆಗಿ ಎನ್ ಕೌಂಟರ್ ಆಗಿ ಬದಲಾಯಿತು ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.