ಮುಂದಿನ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ 150 ಸೀಟು ಗೆಲ್ಲಬಹುದು: ಚಿದಂಬರಂ
ಕಳೆದ ಲೋಕಸಭೆ ಚುನಾವಣೆಯಲ್ಲಿ 48 ಸ್ಥಾನಗಳಲ್ಲಿ ಗೆದ್ದಿದ್ದ ಕಾಂಗ್ರೆಸ್ ಮುಂದಿನ ಲೋಕಸಭೆ ಚುನಾವಣೆಯಲ್ಲಿ ಇದಕ್ಕೂ ಮೂರು ಪಟ್ಟು ಅಂದರೆ 150 ಸ್ಥಾನಗಳಲ್ಲಿ...

Published On :
ನವದೆಹಲಿ: ಕಳೆದ ಲೋಕಸಭೆ ಚುನಾವಣೆಯಲ್ಲಿ 48 ಸ್ಥಾನಗಳಲ್ಲಿ ಗೆದ್ದಿದ್ದ ಕಾಂಗ್ರೆಸ್ ಮುಂದಿನ ಲೋಕಸಭೆ ಚುನಾವಣೆಯಲ್ಲಿ ಇದಕ್ಕೂ ಮೂರು ಪಟ್ಟು ಅಂದರೆ 150 ಸ್ಥಾನಗಳಲ್ಲಿ ಗೆಲ್ಲುವ ಸಾಮರ್ಥ್ಯವಿದೆ ಎಂದು ಮಾಜಿ ಕೇಂದ್ರ ಸಚಿವ ಪಿ. ಚಿದಂಬರಂ ಹೇಳಿದ್ದಾರೆ.
ನವದೆಹಲಿಯಲ್ಲಿ ನಡೆಯುತ್ತಿರುವ ಕಾಂಗ್ರೆಸ್ ಕಾರ್ಯಕಾರಿ ಸಮಿತಿಯಲ್ಲಿ ಮಾತನಾಡಿದ ಚಿದಂಬರಂ ಅವರು, ದೇಶದ 12 ರಾಜ್ಯಗಳಲ್ಲಿ ಈಗಲೂ ಕಾಂಗ್ರೆಸ್ ಪ್ರಬಲವಾಗಿದ್ದು ಮುಂದಿನ ಲೋಕಸಭಾ ಚುನಾವಣೆಯಲ್ಲಿ ಈ ರಾಜ್ಯಗಳಿಂದ 150 ಸೀಟುಗಳನ್ನು ಗೆಲ್ಲಬಹುದು. ಉಳಿದ ಸ್ಥಾನಗಳನ್ನು ಪ್ರಾದೇಶಿಕ ಪಕ್ಷಗಳು ಗೆಲ್ಲಬಹುದಾಗಿದ್ದು ಅವುಗಳೊಂದಿಗೆ ಮೈತ್ರಿ ಮಾಡಿಕೊಂಡು ಸರ್ಕಾರ ರಚಿಸಬಹುದು ಎಂದು ಹೇಳಿದರು.
ಇದೇ ವೇಳೆ ಮಾತನಾಡಿದ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಅವರು, ತಳ ಮಟ್ಟದಿಂದ ಪಕ್ಷವನ್ನು ಸಂಘಟಿಸಬೇಕಾದ ದೊಡ್ಡ ಸವಾಲು ನಮ್ಮ ಮುಂದಿದೆ. ಪ್ರತಿ ಕ್ಷೇತ್ರದಲ್ಲೂ ನಮ್ಮ ವಿರುದ್ಧ ಮತ ಚಲಾಯಿಸುವ ಮತದಾರರ ನಂಬಿಕೆಗಳನ್ನು ಗೆಲುವುದು ಅಗತ್ಯ ಈ ಕೆಲಸವನ್ನು ಪ್ರತಿಯೊಬ್ಬ ಕಾರ್ಯಕರ್ತನು ಮಾಡಬೇಕು ಎಂದು ಹೇಳಿದರು.
ಇನ್ನು ಕಾಂಗ್ರೆಸ್ ವರಿಷ್ಟೆ ಸೋನಿಯಾ ಗಾಂಧಿ ಅವರು ಮಾತನಾಡಿ, ಪ್ರಧಾನಿ ನರೇಂದ್ರ ಮೋದಿ ಅವರ ವಾಕ್ಚಾತುರ್ಯವು ಕೇಂದ್ರ ಸರ್ಕಾರದ ಪತನ ಪ್ರಾರಂಭವಾಗಿರುವುದನ್ನು ಸೂಚಿಸಿದೆ. ಅಲ್ಲದೆ ಅದು ತನ್ನ ಹತಾಶ ಮನಸ್ಥಿತಿಯನ್ನು ಪ್ರತಿಬಿಂಬಿಸುತ್ತಿದೆ. ನಾವು ಒಗ್ಗಟ್ಟಾಗಿ ಕೆಲಸ ಮಾಡಲು ಬದ್ದವಾಗಿದ್ದೇವೆ. ಪ್ರಜಾಪ್ರಭುತ್ವವನ್ನು ರಕ್ಷಿಸುವ ಕೆಲಸಕ್ಕೆ ನಾವು ರಾಹುಲ್ ಅವರೊಂದಿಗೆ ಕೈಜೋಡಿಸಬೇಕಿದೆ ಎಂದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
ನವದೆಹಲಿNew DelhiP Chidambaramಪಿ ಚಿದಂಬರಂRahul Gandhiರಾಹುಲ್ ಗಾಂಧಿಕಾಂಗ್ರೆಸ್ ಕಾರ್ಯಕಾರಿ ಸಮಿತಿಲೋಕಸಭೆ ಚುನಾವಣೆ 2019Congress Working Committee2019 Lok Sabha poll
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


