ದೇಶವನ್ನು ಅಪಾಯಕಾರಿ ಆಡಳಿತದಿಂದ ರಕ್ಷಿಸಬೇಕಿದೆ: ಸೋನಿಯಾ ಗಾಂಧಿ
ಪ್ರಜಾಪ್ರಭುತ್ವದ ಮೌಲ್ಯಗಳೊಡನೆ ರಾಜಿ ಮಾಡಿಕೊಳ್ಳುವ ಅಪಾಯಕಾರಿ ಆಡಳಿತದಿಂದ ದೇಶವನ್ನು ರಕ್ಷಿಸಬೇಕು ಎಂದು ಕಾಂಗ್ರೆಸ್ ಪಕ್ಷದ ಮಾಜಿ ಅಧ್ಯಕ್ಷೆ, ಹಿರಿಯ ಣಾಯಕಿ ಸೋನಿಯಾ ಗಾಂಧಿ ಹೇಳಿದ್ದಾರೆ.

Published On :
ನವದೆಹಲಿ: ಪ್ರಜಾಪ್ರಭುತ್ವದ ಮೌಲ್ಯಗಳೊಡನೆ ರಾಜಿ ಮಾಡಿಕೊಳ್ಳುವ ಅಪಾಯಕಾರಿ ಆಡಳಿತದಿಂದ ದೇಶವನ್ನು ರಕ್ಷಿಸಬೇಕು ಎಂದು ಕಾಂಗ್ರೆಸ್ ಪಕ್ಷದ ಮಾಜಿ ಅಧ್ಯಕ್ಷೆ, ಹಿರಿಯ ಣಾಯಕಿ ಸೋನಿಯಾ ಗಾಂಧಿ ಹೇಳಿದ್ದಾರೆ.
ರಾಹುಲ್ ಗಾಂಧಿಯವರ ನೇತೃತ್ವದಲ್ಲಿ ಹೊಸದಾಗಿ ರಚನೆಯಾದ ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಸಭೆ ಎದುರು ಮಾತನಾಡಿದ ಸೊನಿಯಾ ಗಾಂಧಿ ನರೇಂದ್ರ ಮೋದಿ ಸರ್ಕಾರದ ವಿರುದ್ಧ ವಾಕ್ಪ್ರಹಾರ ನಡೆಸಿದರು.
"ದೇಶದ ಬಡಜನತೆ ಭಯ ಹಾಗೂ ಹತಾಶೆಯ ಜೀವನ ನಡೆಸುವ ವಾತಾವರಣ ನಿರ್ಮಾಣವಾಗಿದೆ.ಈ ಕುರಿತಂತೆ ನಾವುಗಳು ಎಚ್ಚರ ವಹಿಸಬೇಕಿದೆ" ಅವರು ಹೇಳಿದ್ದಾರೆ.
"ಪ್ರಧಾನಿ ನರೇಂದ್ರ ಮೋದಿ ಅವರ ವಾಕ್ಚಾತುರ್ಯವು ಕೇಂದ್ರ ಸರ್ಕಾರದ ಪತನ ಪ್ರಾರಂಭವಾಗಿರುವುದನ್ನು ಸೂಚಿಸಿದೆ. ಅಲ್ಲದೆ ಅದು ತನ್ನ ಹತಾಶ ಮನಸ್ಥಿತಿಯನ್ನು ಪ್ರತಿಬಿಂಬಿಸುತ್ತಿದೆ. ನಾವು ಒಗ್ಗಟ್ಟಾಗಿ ಕೆಲಸ ಮಾಡಲು ಬದ್ದವಾಗಿದ್ದೇವೆ.ಪ್ರಜಾಪ್ರಭುತ್ವವನ್ನು ರಕ್ಷಿಸುವ ಕೆಲಸಕ್ಕೆ ನಾವು ರಾಹುಲ್ ಅವರೊಂದಿಗೆ ಕೈಜೋಡಿಸುತ್ತೇವೆ" ಸೋನಿಯಾ ಗಾಂಧಿ ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Sonia Gandhiಸೋನಿಯಾ ಗಾಂಧಿModi governmentಮೋದಿ ಸರ್ಕಾರAlwar lynchingCongress Working Committeeಆಳ್ವಾರ್ ಸಾಮೂಹಿಕ ಹಲ್ಲೆಕಾಂಗ್ರೆಸ್ ಕಾರ್ಯಕಾರಿ ಸಮಿ
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


