ಗಾಝಿಯಾಬಾದ್ ಕಟ್ಟಡ ಕುಸಿತ: ಬಿರುಕು ಕಾಣಿಸಿಕೊಂಡಿದ್ದರೂ ಕಾಮಗಾರಿ ಮುಂದುವರೆಸಲು ಸೂಚನೆ!
ಗಾಝಿಯಾಬಾದ್ ನಲ್ಲಿ ನಿರ್ಮಾಣ ಹಂತದಲ್ಲಿದ್ದ 5 ಅಂತಸ್ತಿನ ಕಟ್ಟಡ ಕುಸಿತ ಕಂಡಿದ್ದು, ಇಬ್ಬರು ಮೃತಪಟ್ಟಿದ್ದಾರೆ.

Published On :
ನವದೆಹಲಿ: ಗಾಝಿಯಾಬಾದ್ ನಲ್ಲಿ ನಿರ್ಮಾಣ ಹಂತದಲ್ಲಿದ್ದ 5 ಅಂತಸ್ತಿನ ಕಟ್ಟಡ ಕುಸಿತ ಕಂಡಿದ್ದು, ಇಬ್ಬರು ಮೃತಪಟ್ಟಿದ್ದಾರೆ. ಘಟನಾ ಸ್ಥಳದಲ್ಲಿದ್ದ ಹಲವು ಕಾರ್ಮಿಕರಿಗೆ ಗಾಯಗಳಾಗಿದ್ದು, ಕಟ್ಟಡದಲ್ಲಿ ಬಿರುಕು ಕಾಣಿಸಿಕೊಂಡಿದ್ದರೂ ಸಹ ಕಾಮಗಾರಿ ಮುಂದುವರೆಸಲು ಸೂಚನೆ ನೀಡಲಾಗಿತ್ತು ಎಂದು ಹೇಳಿದ್ದಾರೆ.
ಕಾರ್ಮಿಕರ ಹೇಳಿಕೆಯನ್ನು ಎಎನ್ಐ ವರದಿ ಮಾಡಿದ್ದು, ಕಟ್ಟಡದಲ್ಲಿ ಬಿರುಕು ಕಾಣಿಸಿಕೊಂಡಿದ್ದರೂ ಸಹ ಬಿಲ್ಡರ್ ಕಾಮಗಾರಿಯನ್ನು ಮುಂದುವರೆಸುವಂತೆ ಸೂಚನೆ ನೀಡಿದ್ದರು ಎಂಬ ಮಾಹಿತಿಯನ್ನು ಬಹಿರಂಗಪಡಿಸಿದ್ದಾರೆ.
"ಕಟ್ಟಡದ ಭಾಗದಲ್ಲಿ ಬಿರುಕು ಕಾಣಿಸಿಕೊಂಡಿರುವುದರ ಬಗ್ಗೆ ಬಿಲ್ಡರ್ ಗೆ ತಿಳಿಸಿದ್ದೆವು, ಆದರೆ ಸಿಮೆಂಟ್ ಹಾಕಿ ಬಿರುಕನ್ನು ಮುಚ್ಚವಂತೆ ಬಿಲ್ಡರ್ ಸೂಚನೆ ನೀಡಿದ್ದರು. ಅಷ್ಟೇ ಅಲ್ಲದೇ ಎಂದಿನಂತೆ ಕಾಮಗಾರಿ ಮುಂದುವರೆಸುವಂತೆಯೂ ಹೇಳಿದ್ದರು". ನಾವು ಮೊದಲನೇ ಮಹಡಿಯಲ್ಲಿ ಕೆಲಸ ಮಾಡುತ್ತಿದ್ದಾಗ ಗ್ರೌಂಡ್ ಫ್ಲೋರ್ ನಲ್ಲಿ ಕುಸಿತ ಉಂಟಾಗಿರಬೇಕು ಎಂದು ಎಂದು ಕಾರ್ಮಿಕರು ಹೇಳಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ಗಾಝಿಯಾಬಾದ್ ನ ಜಿಲ್ಲಾ ಮ್ಯಾಜಿಸ್ಟ್ರೇಟ್ ತನಿಖೆಗೆ ಆದೇಶಿಸಿದ್ದು, ಮೇಲ್ನೋಟಕ್ಕೆ ಕಟ್ಟಡದ ಗುಣಮಟ್ಟದಿಂದ ಈ ಅನಾಹುತ ಸಂಭವಿಸಿದೆ ಎಂದು ಹೇಳಲಾಗುತ್ತಿದೆ. ಘಟನಾ ಸ್ಥಳದಿಂದ 7 ಜನರನ್ನು ರಕ್ಷಣೆ ಮಾಡಲಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.
ಬ್ರೇಕಿಂಗ್ ನ್ಯೂಸ್
ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಹೆಚ್ಚಿದ ಒತ್ತಡ: ಮುಖ್ಯ ಚುನಾವಣಾ ಆಯುಕ್ತರನ್ನ ವಜಾ ಮಾಡೊದು ಅಷ್ಟು ಸುಲಭನಾ? ಯಾರಿಗಿದೆ ಆ ಪವರ್? ಸಂವಿಧಾನ ಹೇಳುವುದೇನು?ರಾಹುಕಾಲ ಎಂದರೇನು? ಮದುವೆಗೆ ಅನ್ವಯಿಸುತ್ತದೆಯೇ? ರಾಹು ಶಾಂತಿಗಾಗಿ ನಿಂಬೆ ಹಣ್ಣು ದೀಪ ಹಚ್ಚುವುದು ಸೂಕ್ತವೇ?ಗೌರಿಬಿದನೂರಿನ ಮಣ್ಣಲ್ಲಿ ಅರಳಿದ ಮರುಭೂಮಿ ಹಣ್ಣು: ಅಸಾಧ್ಯವನ್ನು ಸಾಧ್ಯವಾಗಿಸಿದ ಹಠವಾದಿ; ಸ್ವಾವಲಂಬಿ ಕೃಷಿಗೆ ಹೊಸ ಭಾಷ್ಯ ಬರೆದ ದಿವಾಕರ್ ಚನ್ನಪ್ಪ..!ಕರ್ನಾಟಕದ ನಂ.1 ಶ್ರೀಮಂತ ಯಾರು ಗೊತ್ತಾ? ಅಂಬಾನಿ, ಅದಾನಿ ಬಿಡಿ; ಇಲ್ಲಿದೆ ನಮ್ಮ ಕರುನಾಡ ಸಿರಿವಂತರ ಟಾಪ್ ಲಿಸ್ಟ್!ಫ್ಯಾಟ್ ನಿಂದ ಫಿಟ್ ವರೆಗೆ: ಸಾಹೇಬಲಾಲ್ ಛಪ್ಪರ್ಬಂದ್ ಸ್ಫೂರ್ತಿದಾಯಕ ಪಯಣವಿದೇಶಿ ಪ್ರವಾಸದ ಪ್ಲ್ಯಾನ್ ಇದೆಯೇ? ಒಂದು ಸಣ್ಣ ತಪ್ಪು ಭಾರೀ ದಂಡಕ್ಕೆ ಕಾರಣವಾಗಬಹುದು; ಪ್ರವಾಸಿಗರು ತಿಳಿದಿರಲೇಬೇಕಾದ ನಿಯಮಗಳಿವು...!ಮನಸ್ಸಿದ್ದರೆ ಮಾರ್ಗ ಎಂಬುದನ್ನು ರುಜುವಾತು ಮಾಡಿದ ಛಲವಾದಿ; 27 ವರ್ಷಗಳ ಹೋರಾಟದಲ್ಲಿ 26 ಬಾರಿ ಸೋತು 59ನೇ ವಯಸ್ಸಿನಲ್ಲಿ ಸರ್ಕಾರಿ ಶಿಕ್ಷಕರಾದ ವಿಜಯ್ಪಶ್ಚಿಮ ಘಟ್ಟಗಳ ESA - ಕಸ್ತೂರಿರಂಗನ್ ವರದಿ ಇನ್ನೂ ಏಕೆ ಜಾರಿಗೆ ಬಂದಿಲ್ಲ?


