ಗಾಜಿಯಾಬಾದ್ ಕಟ್ಟಡ ಕುಸಿತ : ನಾಲ್ವರು ಶಂಕಿತರ ಪತ್ತೆ
ಉತ್ತರ ಪ್ರದೇಶದ ಗಾಜಿಯಾಬಾದ್ ನಲ್ಲಿ ನಿನ್ನೆ ಸಂಭವಿಸಿದ ನಿರ್ಮಾಣ ಹಂತದ ಕಟ್ಟಡ ಕುಸಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ನಾಲ್ವರನ್ನು ಪತ್ತೆ ಹಚ್ಚಿರುವುದಾಗಿ ಪೊಲೀಸರು ತಿಳಿಸಿದ್ದಾರೆ.

ಗಾಜಿಯಾಬಾದ್ : ಉತ್ತರ ಪ್ರದೇಶದ ಗಾಜಿಯಾಬಾದ್ ನಲ್ಲಿ ನಿನ್ನೆ ಸಂಭವಿಸಿದ ನಿರ್ಮಾಣ ಹಂತದ ಕಟ್ಟಡ ಕುಸಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ನಾಲ್ವರನ್ನು ಪತ್ತೆ ಹಚ್ಚಿರುವುದಾಗಿ ಪೊಲೀಸರು ತಿಳಿಸಿದ್ದಾರೆ.
ದಾಖಲೆಗಳ ಪ್ರಕಾರ ಕಟ್ಟಡ ನಿರ್ಮಿಸುತ್ತಿದ್ದ ಭೂಮಿ ಬಿಲ್ಡರ್ ಗೆ ಸೇರಿದ್ದು, ಈ ಸಂಬಂಧ ನಾಲ್ವರನ್ನು ಪತ್ತೆ ಹಚ್ಚಲಾಗಿದೆ. ಅವರನ್ನು ವಶಕ್ಕೆ ಪಡೆಯುವ ಪ್ರಕ್ರಿಯೆ ಮುಂದುವರೆಯುತ್ತಿದೆ. ಅವರ ವಿರುದ್ಧ ಎಫ್ ಐಆರ್ ದಾಖಲಿಸಿ, ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಮೀರತ್ ಇನ್ಸ್ ಪೆಕ್ಟರ್ ಜನರಲ್ ರಾಮ್ ಕುಮಾರ್ ತಿಳಿಸಿದ್ದಾರೆ.
ಐದು ಅಂತಸ್ತಿನ ಕಟ್ಟಡ ಕುಸಿದಿದ್ದರಿಂದ ಒಬ್ಬರು ಮೃತಪಟ್ಟಿದ್ದು, ಹಲವು ಮಂದಿ ಅವಶೇಷಗಳಡಿ ಸಿಲುಕಿಕೊಂಡಿದ್ದರು. ಕಟ್ಟಡ ಕುಸಿತ ಘಟನೆಗೆ ಸಂಬಂಧಿಸಿದಂತೆ ತಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ವಿದೇಶಾಂಗ ವ್ಯವಹಾರಗಳ ರಾಜ್ಯ ಖಾತೆ ಸಚಿವ ವಿ. ಕೆ. ಸಿಂಗ್ ಹೇಳಿದ್ದಾರೆ.
ಘಟನೆ ಸಂಬಂಧ ತನಿಖೆಗೆ ಆದೇಶಿಸಲಾಗಿದೆ. ಇದರ ಜವಾಬ್ದಾರಿ ತೆಗೆದುಕೊಂಡಿರುವವರ ವಿರುದ್ದ ಸೂಕ್ತ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಲಾಗಿದೆ. ಘಟನೆಯಲ್ಲಿ ಏಳು ಮಂದಿಯನ್ನು ರಕ್ಷಿಸಲಾಗಿದೆ. ಒಬ್ಬರಿಗೆ ತೀವ್ರ ರೀತಿಯ ವಾಗಿದ್ದು, ರಕ್ಷಣಾ ಕಾರ್ಯಾಚರಣೆ ಮುಂದುವರೆದಿದೆ. ಅಕ್ರಮ ಕಟ್ಟಡಗಳನ್ನು ತೆರವುಗೊಳಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ವಿ. ಕೆ. ಸಿಂಗ್ ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


