ಕಳೆದ 3 ವರ್ಷಗಳಲ್ಲಿ ವಿವಿ ಹಾಗೂ ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ರ‍್ಯಾಗಿಂಗ್ ಪ್ರಕರಣಗಳು ದ್ವಿಗುಣ!
ಕಾಲೇಜುಗಳಲ್ಲಿ ರ‍್ಯಾಗಿಂಗ್ ಪ್ರವೃತ್ತಿಗೆ ಕಡಿವಾಣ ಹಾಕಲು ಎಷ್ಟೇ ಕಠಿಣ ಕ್ರಮಗಳನ್ನು ಕೈಗೊಂಡರೂ ಕಳೆದ ಮೂರು ವರ್ಷಗಳಲ್ಲಿ ವಿಶ್ವವಿದ್ಯಾಲಯ ಹಾಗೂ ಉನ್ನತ...

Published On :
ನವದೆಹಲಿ: ಕಾಲೇಜುಗಳಲ್ಲಿ ರ‍್ಯಾಗಿಂಗ್ ಪ್ರವೃತ್ತಿಗೆ ಕಡಿವಾಣ ಹಾಕಲು ಎಷ್ಟೇ ಕಠಿಣ ಕ್ರಮಗಳನ್ನು ಕೈಗೊಂಡರೂ ಕಳೆದ ಮೂರು ವರ್ಷಗಳಲ್ಲಿ ವಿಶ್ವವಿದ್ಯಾಲಯ ಹಾಗೂ ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ರ‍್ಯಾಗಿಂಗ್ ಪ್ರಕರಣಗಳು ದ್ವಿಗುಣವಾಗಿದೆ ಎಂಬ ಆತಂಕಕಾರಿ ವಿಷಯ ಬಹಿರಂಗಗೊಂಡಿದೆ.
ವಿಶ್ವವಿದ್ಯಾಲಯ ಹಾಗೂ ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ರ‍್ಯಾಗಿಂಗ್ ಪ್ರಕರಣಗಳು ದ್ವಿಗುಣವಾಗಿದೆ ಎಂದು ಕೇಂದ್ರ ಮಾನವ ಸಂಪನ್ಮೂಲ ಅಭಿವೃದ್ಧಿ ಸಚಿವ ಪ್ರಕಾಶ್ ಜಾವಡೇಕರ್ ಹೇಳಿದ್ದಾರೆ.
ರಾಜ್ಯಸಭೆಯಲ್ಲಿ ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, 2015ರಲ್ಲಿ 423 ದೂರುಗಳು ದಾಖಲಾಗಿದ್ದು ಪಶ್ಚಿಮ ಬಂಗಾಳದಲ್ಲಿ ಹೆಚ್ಚು ದೂರುಗಳು ದಾಖಲಾಗಿತ್ತು. ಇನ್ನು 2016ರಲ್ಲಿ 5,215 ಮತ್ತು 2017ರಲ್ಲಿ 901 ರ‍್ಯಾಗಿಂಗ್ ದೂರುಗಳು ದಾಖಲಾಗಿವೆ ಎಂದರು.
ಕಳೆದ ವರ್ಷ ಹೆಚ್ಚಾಗಿ ಉತ್ತರಪ್ರದೇಶ, ಮಧ್ಯಪ್ರದೇಶ ಮತ್ತು ಪಶ್ಚಿಮಬಂಗಾಳದಲ್ಲಿ ಹೆಚ್ಚು ದೂರುಗಳು ದಾಖಲಾಗಿದ್ದು ಕಳೆದ ಮೂರು ವರ್ಷಗಳಲ್ಲಿ ವಿಶ್ವವಿದ್ಯಾಲಯ ಧನಸಹಾಯ ಆಯೋಗ(ಯುಜಿಸಿ) ಅನುದಾನಿತ ವಿಶ್ವವಿದ್ಯಾಲಯಗಳಲ್ಲಿ 1,839 ದೂರುಗಳು ದಾಖಲಾಗಿವೆ. ಇವುಗಳ ಪೈಕಿ 812 ಪ್ರಕರಣಗಳಲ್ಲಿ ವಿದ್ಯಾರ್ಥಿಗಳಿಗೆ ಶಿಕ್ಷೆ ನೀಡಲಾಗಿದ್ದು 309 ಪ್ರಕರಣಗಳಲ್ಲಿ ವಿದ್ಯಾರ್ಥಿಗಳನ್ನು ಅಮಾನತು ಮಾಡಲಾಗಿದೆ ಎಂದರು.
ಇನ್ನು ಕಳೆದ ಮೂರು ವರ್ಷಗಳಲ್ಲಿ ನಾಗಲ್ಯಾಂಡ್, ಅಂಡಮಾನ್ ಮತ್ತು ನಿಕೋಬಾರ್, ಡಮನ್ ಮತ್ತು ಡಿಯೂ, ದಾದ್ರಾ ಮತ್ತು ನಗರ್ ಹವೇಲಿ ಮತ್ತು ಲಕ್ಷಾದೀಪ್ ಗಳಿಂದ ಒಂದೂ ರ‍್ಯಾಗಿಂಗ್ ದೂರುಗಳು ದಾಖಲಾಗಿಲ್ಲ ಎಂದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
HRDವಿಶ್ವವಿದ್ಯಾಲಯraggingvarsitiesರ್ಯಾಗಿಂಗ್ಉನ್ನತ ಶಿಕ್ಷಣ ಸಂಸ್ಥೆHigher Educational Institutionsಹೆಚ್ಆರ್ಡಿ
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


