ದೇಶ

ಕಾಂಗ್ರೆಸ್ ಅಧ್ಯಕ್ಷ ರಾಹುಲ್'ರನ್ನು ಲೋಫರ್ ಎಂದ ಗೋವಾ ಬಿಜೆಪಿ ವಕ್ತಾರ

ಪ್ರಧಾನಮಂತ್ರಿ ನರೇಂದ್ರ ಮೋದಿಯವರ ವಿರುದ್ಧ ವಾಗ್ದಾಳಿ ನಡೆಸಿದ ಬಳಿಕ ಲೋಕಸಭೆಯಲ್ಲಿ ಕಣ್ಣು ಹೊಡೆದ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಅವರನ್ನು ಗೋವಾ ಬಿಜೆಪಿ ವಕ್ತಾರ 'ಲೋಫರ್' ಎಂದು ನಿಂದಿಸಿದ್ದಾರೆ...

ಕಾಂಗ್ರೆಸ್ ಅಧ್ಯಕ್ಷ ರಾಹುಲ್'ರನ್ನು ಲೋಫರ್ ಎಂದ ಗೋವಾ ಬಿಜೆಪಿ ವಕ್ತಾರ
ಗೋವಾ ಬಿಜೆಪಿ ವಕ್ತಾರ ದತ್ತಪ್ರಸಾದ್ ನಾಯಕ್
Published On :
ಪಣಜಿ: ಪ್ರಧಾನಮಂತ್ರಿ ನರೇಂದ್ರ ಮೋದಿಯವರ ವಿರುದ್ಧ ವಾಗ್ದಾಳಿ ನಡೆಸಿದ ಬಳಿಕ ಲೋಕಸಭೆಯಲ್ಲಿ ಕಣ್ಣು ಹೊಡೆದ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಅವರನ್ನು ಗೋವಾ ಬಿಜೆಪಿ ವಕ್ತಾರ 'ಲೋಫರ್' ಎಂದು ನಿಂದಿಸಿದ್ದಾರೆ. 
ರಾಹುಲ್ ಗಾಂಧಿಯವರ ಹೇಳಿಕೆಯಲ್ಲಿ ಯಾವುದೇ ಸತ್ಯಗಳಿಲ್ಲ. ಭಾರತದ ಜನತೆಯ ಸಮಸ್ಯೆಗಳ ಬಗ್ಗೆ ಅವರಿಗೆ ಇರಿವೂ ಇಲ್ಲ. ಪ್ರಜಾಪ್ರಭುತ್ವದ ದೇವಾಲಯವಾಗಿರುವ ಸಂಸತ್ತಿನಲ್ಲಿ ಪ್ರಧಾನಮಂತ್ರಿಗಳನ್ನು ಆಲಂಗಿಸಿಕೊಂಡು ರಾಹುಲ್ ಲೋಫರ್'ನಂತೆ ಕಣ್ಣು ಹೊಡೆದಿದ್ದಾರೆಂದು ಗೋವಾ ಬಿಜೆಪಿ ವಕ್ತಾರ ದತ್ತಪ್ರಸಾದ್ ನಾಯಕ್ ಅವರು ಹೇಳಿದ್ದಾರೆ. 
ಕಾಲೇಜುಗಳಲ್ಲಿ ಹುಡುಗಿಯರನ್ನು ನೋಡಿ ಕಣ್ಣು ಹೊಡೆಯುವ ಲೋಫರ್ ಗಳ ಬಗ್ಗೆ ನಾವು ಕೇಳಿದ್ದೆವು. ಇಂತಹ ನಾಚಿಕೆಗೇಡಿನ ಕೃತ್ಯ ಪ್ರಜಾಪ್ರಭುತ್ವದ ದೇವಾಲಯದಲ್ಲಿ ಎಂದು ನಡೆದಿರಲಿಲ್ಲ. ಕಾಂಗ್ರೆಸ್ ಪಕ್ಷ ಗಾಂಧಿ ಕುಟುಂಬದ ಸೂತ್ರದ ಬೊಂಬೆಯಾಗಿದೆ ಎಂದು ವಾಗ್ದಾಳಿ ನಡೆಸಿದ್ದಾರೆ. 
ಮಾಜಿ ಪ್ರಧಾನಮಂತ್ರಿ ಮನಮೋಹನ್ ಸಿಂಗ್ ಅವರು ಅಂದಿನ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿಯವರ ಕೈಗೊಂಬೆಯಾಗಿದ್ದರು. ಎಲ್ಲಾ ಕಾಂಗ್ರೆಸ್ ಅಧ್ಯಕ್ಷರೂ ಈ ಹಿಂದೆ ಕಾಂಗ್ರೆಸ್ ಹೈಕಮಾಂಡ್ ಸೂತ್ರದ ಗೊಂಬೆಗಳಾಗಿದ್ದರು ಎನ್ನುವುದನ್ನು ಗೋವಾ ಕಾಂಗ್ರೆಸ್ ಅಧ್ಯಕ್ಷ ಗಿರೀಶ್ ಚೋದನ್'ಕರ್ ಮರೆತಿದ್ದಾರೆಂದು ವ್ಯಂಗ್ಯವಾಡಿದ್ದಾರೆ. 
ಈ ಹೇಳಿಕೆಗೆ ಟೀಕೆಗಳು ವ್ಯಕ್ತವಾದ ಹಿನ್ನಲೆಯಲ್ಲಿ ತಮ್ಮ ಹೇಳಿಕೆಯನ್ನು ಸಮರ್ಥಿಸಿಕೊಂಡಿರುವ ಬಿಜೆಪಿ ನಾಯಕ, ಲೋಕಸಭೆಯಲ್ಲಿ ರಾಹುಲ್ ಗಾಂಧಿಯವರ ವರ್ತನೆಯನ್ನು ಇಡೀ ದೇಶವೇ ನೋಡಿದೆ. ಸಂಸತ್ತಿಗೆ ರಾಹುಲ್ ಅಗೌರವ ತೋರಿಸಿದ್ದಾರೆ. ಕಾಲೇಜುಗಳಲ್ಲಿ ಹುಡುಗಿಯರನ್ನು ನೋಡುವ ಹುಡುಗರು ಲೋಫರ್ ಗಳಂತೆ ಕಣ್ಣು ಹೊಡೆಯುವುದನ್ನು ಪ್ರತೀಯೊಬ್ಬರೂ ನೋಡಿಸುತ್ತಾರೆ. ಇದೇ ರೀತಿ ರಾಹುಲ್ ಗಾಂಧಿ ನಡೆದುಕೊಂಡಿದ್ದು, ಈ ರೀತಿಯ ವರ್ತನೆಯನ್ನು ನಾವು ಖಂಡಿಸುತ್ತೇವೆಂದು ತಿಳಿಸಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.