ಪಾಕಿಸ್ತಾನಿ ಎಫೆಕ್ಟ್: ಧ್ವಜವನ್ನು ಬದಲಾವಣೆ ಮಾಡಲು ಮುಂದಾದ ಇಂಡಿಯನ್ ಯೂನಿಯನ್ ಮುಸ್ಲಿಂ ಲೀಗ್
ಇಂಡಿಯನ್ ಯೂನಿಯನ್ ಮುಸ್ಲಿಂ ಲೀಗ್ ಸಂಘಟನೆ ತನ್ನಲ್ಲಿ ಮಹತ್ವದ ಬದಲಾವಣೆ ಮಾಡಲು ಮುಂದಾಗಿದೆ.

Published On :
ತಿರುವನಂತಪುರಂ: ಇಂಡಿಯನ್ ಯೂನಿಯನ್ ಮುಸ್ಲಿಂ ಲೀಗ್ ಸಂಘಟನೆ ತನ್ನಲ್ಲಿ ಮಹತ್ವದ ಬದಲಾವಣೆ ಮಾಡಲು ಮುಂದಾಗಿದೆ.
ಇಂಡಿಯನ್ ಯೂನಿಯನ್ ಮುಸ್ಲಿಂ ಲೀಗ್ ನ ಧ್ವಜ ಪಾಕಿಸ್ತಾನಿ ಮುಸ್ಲಿಂ ಲೀಗ್ ನ ಧ್ವಜವನ್ನೇ ಹೋಲುತ್ತಿತ್ತು. ಈ ಬಗ್ಗೆ ಉತ್ತರ ಪ್ರದೇಶ ಶಿಯಾ ಸೆಂಟ್ರಲ್ ವಕ್ಫ್ ಬೋರ್ಡ್ ನ ಅಧ್ಯಕ್ಷ ಸಯೀದ್ ವಸೀಂ ರಿಜ್ವಿ ಸುಪ್ರೀಂ ಕೋರ್ಟ್ ಗೆ ಪಿಐಎಲ್ ಸಲ್ಲಿಸಿದ್ದರು. ಪಾಕಿಸ್ತಾನಿ ಮುಸ್ಲಿಂ ಲೀಗ್ ನ ಧ್ವಜವನ್ನೇ ಹೋಲುವ ಇಂಡಿಯನ್ ಯೂನಿಯನ್ ಮುಸ್ಲಿಂ ಲೀಗ್ ಧ್ವಜದಲ್ಲಿ ಇಸ್ಲಾಂ ಗೆ ಸಂಬಂಧಿಸಿದ್ದೇನೂ ಇಲ್ಲ ಎಂದು ಆರೋಪಿಸಿದ್ದರು. ವಿಚಾರಣೆ ನಡೆಸಿದ್ದ ಕೋರ್ಟ್ ಕೇಂದ್ರ ಸರ್ಕಾರದ ಅಭಿಪ್ರಾಯ ಕೇಳಿತ್ತು.
ಪಾಕಿಸ್ತಾನಿ ಎಫೆಕ್ಟ್ ನಿಂದಾಗಿ ಎಚ್ಚೆತ್ತುಕೊಂಡಿರುವ ಇಂಡಿಯನ್ ಯೂನಿಯನ್ ಮುಸ್ಲಿಂ ಲೀಗ್ ಈಗ ಧ್ವಜ ಬದಲಾವಣೆಗೆ ಮುಂದಾಗಿದೆ ಎನ್ನಲಾಗುತ್ತಿದ್ದು ಮುಸ್ಲಿಂ ಯೂತ್ ಲೀಗ್ ನಾಯಕರು ಪಕ್ಷಕ್ಕೆ ಧ್ವಜ ಬದಲಾವಣೆ ಮಾಡುವಂತೆ ಸಲಹೆ ನೀಡಿದ್ದಾರೆ. ಆದರೆ ಮುಸ್ಲಿಂ ಲೀಗ್ ನ ಕೆಲವು ನಾಯಕರು ಈ ಅಂಶವನ್ನು ತಳ್ಳಿ ಹಾಕಿದ್ದು ವಸೀಂ ರಿಜ್ವಿ ಅವರ ಆರೋಪವನ್ನು ಗಂಭೀರವಾಗಿ ಪರಿಗಣಿಸಬಾರದು ಎಂದು ಹೇಳಿದ್ದಾರೆ.
ಆದರೆ ಐಯುಎಂಎಲ್ ನ ಶಾಸಕರೊಬ್ಬರು ಧ್ವಜ ಬದಲಾವಣೆ ಮಾಡುವುದಕ್ಕೆ ಸಂಬಂಧಿಸಿದಂತೆ ಹೇಳಿಕೆ ನೀಡಿದ್ದು, ಎಂವೈಎಲ್ ನಾಯಕರು ಮೂರು ವಿವಿಧ ವಿನ್ಯಾಸದ ಧ್ವಜವನ್ನು ನೀಡಿದ್ದಾರೆ. ಆದರೆ ಈವರೆಗೂ ಯಾವುದೇ ನಿರ್ಧಾರ ಕೈಗೊಂಡಿಲ್ಲ ಎಂದು ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
flagಧ್ವಜIndian Union Muslim Leagueಇಂಡಿಯನ್ ಯೂನಿಯನ್ ಮುಸ್ಲಿಂ ಲೀಗ್Pakistani effectಪಾಕಿಸ್ತಾನಿ ಮುಸ್ಲಿಂ ಲೀಗ್
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.
ಬ್ರೇಕಿಂಗ್ ನ್ಯೂಸ್
ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಹೆಚ್ಚಿದ ಒತ್ತಡ: ಮುಖ್ಯ ಚುನಾವಣಾ ಆಯುಕ್ತರನ್ನ ವಜಾ ಮಾಡೊದು ಅಷ್ಟು ಸುಲಭನಾ? ಯಾರಿಗಿದೆ ಆ ಪವರ್? ಸಂವಿಧಾನ ಹೇಳುವುದೇನು?ರಾಹುಕಾಲ ಎಂದರೇನು? ಮದುವೆಗೆ ಅನ್ವಯಿಸುತ್ತದೆಯೇ? ರಾಹು ಶಾಂತಿಗಾಗಿ ನಿಂಬೆ ಹಣ್ಣು ದೀಪ ಹಚ್ಚುವುದು ಸೂಕ್ತವೇ?ಗೌರಿಬಿದನೂರಿನ ಮಣ್ಣಲ್ಲಿ ಅರಳಿದ ಮರುಭೂಮಿ ಹಣ್ಣು: ಅಸಾಧ್ಯವನ್ನು ಸಾಧ್ಯವಾಗಿಸಿದ ಹಠವಾದಿ; ಸ್ವಾವಲಂಬಿ ಕೃಷಿಗೆ ಹೊಸ ಭಾಷ್ಯ ಬರೆದ ದಿವಾಕರ್ ಚನ್ನಪ್ಪ..!ಕರ್ನಾಟಕದ ನಂ.1 ಶ್ರೀಮಂತ ಯಾರು ಗೊತ್ತಾ? ಅಂಬಾನಿ, ಅದಾನಿ ಬಿಡಿ; ಇಲ್ಲಿದೆ ನಮ್ಮ ಕರುನಾಡ ಸಿರಿವಂತರ ಟಾಪ್ ಲಿಸ್ಟ್!ಫ್ಯಾಟ್ ನಿಂದ ಫಿಟ್ ವರೆಗೆ: ಸಾಹೇಬಲಾಲ್ ಛಪ್ಪರ್ಬಂದ್ ಸ್ಫೂರ್ತಿದಾಯಕ ಪಯಣವಿದೇಶಿ ಪ್ರವಾಸದ ಪ್ಲ್ಯಾನ್ ಇದೆಯೇ? ಒಂದು ಸಣ್ಣ ತಪ್ಪು ಭಾರೀ ದಂಡಕ್ಕೆ ಕಾರಣವಾಗಬಹುದು; ಪ್ರವಾಸಿಗರು ತಿಳಿದಿರಲೇಬೇಕಾದ ನಿಯಮಗಳಿವು...!ಮನಸ್ಸಿದ್ದರೆ ಮಾರ್ಗ ಎಂಬುದನ್ನು ರುಜುವಾತು ಮಾಡಿದ ಛಲವಾದಿ; 27 ವರ್ಷಗಳ ಹೋರಾಟದಲ್ಲಿ 26 ಬಾರಿ ಸೋತು 59ನೇ ವಯಸ್ಸಿನಲ್ಲಿ ಸರ್ಕಾರಿ ಶಿಕ್ಷಕರಾದ ವಿಜಯ್ಪಶ್ಚಿಮ ಘಟ್ಟಗಳ ESA - ಕಸ್ತೂರಿರಂಗನ್ ವರದಿ ಇನ್ನೂ ಏಕೆ ಜಾರಿಗೆ ಬಂದಿಲ್ಲ?


