ಭಾರತೀಯ ಯೋಧರ ಮೇಲೆ ಉಗ್ರರ ದಾಳಿ, ಓರ್ವ ಯೋಧ ಹುತಾತ್ಮ
ಜಮ್ಮು ಮತ್ತು ಕಾಶ್ಮೀರದ ರಾಜಧಾನಿ ಶ್ರೀನಗರದಲ್ಲಿ ಸಿಆರ್ಪಿಎಫ್ ತುಕಡಿ ಮೇಲೆ ಭಯೋತ್ಪಾದಕರು ಗುಂಡಿನ ದಾಳಿ ನಡೆಸಿದ್ದು ಇದರಲ್ಲಿ ಓರ್ವ ಭಾರತೀಯ ಯೋಧ ಹುತಾತ್ಮರಾಗಿದ್ದಾರೆ...

Published On :
ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ರಾಜಧಾನಿ ಶ್ರೀನಗರದಲ್ಲಿ ಸಿಆರ್ಪಿಎಫ್ ತುಕಡಿ ಮೇಲೆ ಭಯೋತ್ಪಾದಕರು ಗುಂಡಿನ ದಾಳಿ ನಡೆಸಿದ್ದು ಇದರಲ್ಲಿ ಓರ್ವ ಭಾರತೀಯ ಯೋಧ ಹುತಾತ್ಮರಾಗಿದ್ದಾರೆ.
ಬಾಟಾಮಾಲೋ ಪ್ರದೇಶದಲ್ಲಿನ ಸಿಆರ್ಪಿಎಫ್ ತುಕಡಿ ಮೇಲೆ ಉಗ್ರರು ಏಕಾಏಕಿಯಾಗಿ ದಾಳಿ ನಡೆಸಿದ್ದಾರೆ. ಪರಿಣಾಮ ಓರ್ವ ಯೋಧ ಹುತಾತ್ಮರಾಗಿದ್ದು ಇಬ್ಬರು ಯೋಧರಿಗೆ ಗಂಭೀರ ಗಾಯಗಳಾಗಿವೆ. ಗಾಯಾಳು ಯೋಧರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಮೃತ ಯೋಧನನ್ನು 23 ವರ್ಷದ ಶಂಕರ್ ಲಾಲ್ ಎಂದು ಗುರುತಿಸಲಾಗಿದೆ. ಘಟನಾ ಸ್ಥಳವನ್ನು ಯೋಧರು ಸುತ್ತುವರೆದಿದ್ದು ಅಡಗಿ ಕುಳಿತಿರುವ ಉಗ್ರರಿಗಾಗಿ ಶೋಧ ಕಾರ್ಯ ನಡೆಸುತ್ತಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Indian Armyಉಗ್ರರುಜಮ್ಮು ಮತ್ತು ಕಾಶ್ಮೀರJammu and KashmirterroristCRPFಹುತಾತ್ಮಭಾರತೀಯ ಸೇನೆmartyredಸಿಆರ್ಎಪಿಎಫ್
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


