ಅಧಿವೇಶನದ ನಡುವಲ್ಲೇ ಮೋದಿ ವಿದೇಶ ಪ್ರವಾಸ: ಮಲ್ಲಿಕಾರ್ಜುನ ಖರ್ಗೆ ವಾಗ್ದಾಳಿ
ಸಂಸತ್ತಿ ಮುಂಗಾರು ಅಧಿವೇಶನ ನಡೆಯುತ್ತಿದ್ದು, ಈ ನಡುವಲ್ಲೇ ಪ್ರಧಾನಮಂತ್ರಿ ನರೇಂದ್ರ ಮೋದಿಯವರು 5 ದಿನಗಳ ಕಾಲ ವಿದೇಶಿ ಪ್ರವಾಸ ಕೈಗೊಂಡಿರುವುದಕ್ಕೆ ಕಾಂಗ್ರೆಸ್ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆಯವರು ಮೋದಿ ವಿರುದ್ಧ ತೀವ್ರವಾಗಿ ಕಿಡಿಕಾರಿದ್ದಾರೆ...

Published On :
ನವದೆಹಲಿ: ಸಂಸತ್ತಿ ಮುಂಗಾರು ಅಧಿವೇಶನ ನಡೆಯುತ್ತಿದ್ದು, ಈ ನಡುವಲ್ಲೇ ಪ್ರಧಾನಮಂತ್ರಿ ನರೇಂದ್ರ ಮೋದಿಯವರು 5 ದಿನಗಳ ಕಾಲ ವಿದೇಶಿ ಪ್ರವಾಸ ಕೈಗೊಂಡಿರುವುದಕ್ಕೆ ಕಾಂಗ್ರೆಸ್ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆಯವರು ಮೋದಿ ವಿರುದ್ಧ ತೀವ್ರವಾಗಿ ಕಿಡಿಕಾರಿದ್ದಾರೆ.
ಮೋದಿ ಪ್ರವಾಸ ಕುರಿತಂತೆ ಪ್ರತಿಕ್ರಿಯೆ ನೀಡಿರುವ ಅವರು, ಸಂಸತ್ತಿನಲ್ಲಿ ಅಧಿವೇಶನ ಪ್ರಗತಿಯಲ್ಲಿದೆ. ವಿದೇಶದಲ್ಲಿ ನಡೆಯುತ್ತಿರುವ ಸಭೆಗಳನ್ನು ಮೋದಿಯವರು ನಿಯಂತ್ರಿಸಬಹುದಿತ್ತು. ಅದೇನು ಆಹ್ವಾನಿತ ಸಭೆಯಾಗಿರಲಿಲ್ಲ. ಬಹುಮತ ಇರುವ ಕಾರಣ ಸಂಸತ್ತು ಅಧಿವೇಶನವನ್ನು ಬಿಟ್ಟು, ವಿದೇಶೀ ಪ್ರವಾಸ ಕೈಗೊಂಡಿದ್ದಾರೆಂದು ವಾಗ್ದಾಳಿ ನಡೆಸಿದ್ದಾರೆ.
ಬೊಫೋರ್ಸ್ ಹಗರಣಕ್ಕೆ ಸಂಬಂಧಿಸಿದಂತೆ ಈ ಹಿಂದೆ ಸಂಸತ್ತು ಜಂಟಿ ಸಮಿತಿಯನ್ನು ರಚನೆ ಮಾಡಲಾಗಿತ್ತು. ಇದೀಗ ರಫೇಲ್ ಒಪ್ಪಂದ ಕುರಿತಂತೆಯೂ ಸಮಿತಿಯನ್ನು ರಚನೆ ಮಾಡಬೇಕು. ಯುದ್ಧ ವಿಮಾನಗಳು ಅಗ್ಗದ ದರವನ್ನು ಹೊಂದಿದ್ದೇ ಆಗಿದ್ದರೆ, ಅವಿಶ್ವಾಸ ನಿರ್ಣಯ ಮಂಡನೆ ವೇಳೆ ಮೋದಿ ಹೇಳಿಕೆ ನೀಡಬೇಕಿತ್ತು. ಭ್ರಷ್ಟಾಚಾರವನ್ನು ಮರೆಮಾಚುವ ಸಲುವಾಗಿ ಇದೀಗ ಬಿಜೆಪಿ ಹೇಳಿಕೆಗಳನ್ನು ನೀಡುತ್ತಿದೆ ಎಂದು ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


