ಮಹಾರಾಷ್ಟ್ರ ಬಂದ್ : ಹಿಂಸಾಚಾರದ ಹಿನ್ನೆಲೆಯಲ್ಲಿ 447 ಮಂದಿ ಬಂಧನ
ಮರಾಠ ಸಮುದಾಯಕ್ಕೆ ಮೀಸಲಾತಿಗೆ ಒತ್ತಾಯಿಸಿ ಮುಂಬೈಯಲ್ಲಿ ಇಂದು ನಡೆದ ಪ್ರತಿಭಟನಗೆ ಸಂಬಂಧಿಸಿದಂತೆ ರಾಜ್ಯಾದ್ಯಂತ 400 ಕ್ಕೂ ಹೆಚ್ಚು ಮಂದಿಯನ್ನು ಬಂಧಿಸಲಾಗಿದೆ.

ಮುಂಬೈ : ಮರಾಠ ಸಮುದಾಯಕ್ಕೆ ಮೀಸಲಾತಿಗೆ ಒತ್ತಾಯಿಸಿ ಮುಂಬೈಯಲ್ಲಿ ಇಂದು ನಡೆದ ಪ್ರತಿಭಟನಗೆ ಸಂಬಂಧಿಸಿದಂತೆ ರಾಜ್ಯಾದ್ಯಂತ 400 ಕ್ಕೂ ಹೆಚ್ಚು ಮಂದಿಯನ್ನು ಬಂಧಿಸಲಾಗಿದೆ.
ಪ್ರತಿಭಟನಾಕಾರರು ಬಸ್ ಗಳ ಮೇಲೆ ದಾಳಿ ನಡೆಸಿ ಸ್ಥಳೀಯ ರೈಲು ಗಳ ಮೇಲೆ ಕಲ್ಲು ತೂರಾಟ ನಡೆಸಿದ್ದರು. ಹಿಂಸಾಚಾರಕ್ಕೆ ಸಂಬಂಧಿಸಿದಂತೆ 447 ಮಂದಿಯನ್ನು ಬಂಧಿಸಲಾಗಿದೆ. ಅವರ ಮೇಲೆ ಪ್ರಕರಣ ದಾಖಲು ಪ್ರಕ್ರಿಯೆ ನಡೆಯುತ್ತಿದೆ ಎಂದು ಪೊಲೀಸ್ ವಕ್ತಾರರು ತಿಳಿಸಿದ್ದಾರೆ.
ಮರಾಠ ಸಂಘಟನೆಗಳು ಮುಂಬೈಗೆ ಬಂದ್ ಗೆ ಕರೆ ನೀಡಿದ್ದ ಹಿನ್ನೆಲೆಯಲ್ಲಿ ನಗರದ 45 ಕಡೆಗಳಲ್ಲಿ ಪ್ರತಿಭಟನೆ ನಡೆದಿತ್ತು. ಕೆಲವು ಕಡೆಗಳಲ್ಲಿ ಬಿಇಎಸ್ ಟಿ ಬಸ್ ಗಳ ಮೇಲೆ ಕಲ್ಲು ತೂರಾಟ ನಡೆದಿದ್ದು, ಸಾರ್ವಜನಿಕ ಆಸ್ತಿಪಾಸ್ತಿ ಮೇಲೆ ನಷ್ಟ ಉಂಟುಮಾಡಲಾಗಿದೆ ಎಂದು ಅವರು ಹೇಳಿದ್ದಾರೆ.
ಸಾರ್ವಜನಿಕ ಆಸ್ತಿ ಧ್ವಂಸ ಪ್ರಕರಣಕ್ಕೆ ಸಂಬಂಧಿಸಿದಂತೆ ಥಾಣೆ ನಗರದ 20 ಮಂದಿಯನ್ನು ಬಂಧಿಸಲಾಗಿದೆ. ಈ ಪ್ರಕರಣದಲ್ಲಿ ಮತ್ತಷ್ಟು ಮಂದಿ ಭಾಗಿಯಾಗಿರುವುದನ್ನು ಪತ್ತೆ ಹಚ್ಚಲಾಗಿದೆ ಎಂದು ಠಾಣೆ ಪೊಲೀಸ್ ಆಯುಕ್ತ ಪರಮ್ ಬಿರ್ ಸಿಂಗ್ ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


