ಆಲಿಂಗನದ ವಿಷಯ: ಈಗ ಬಿಜೆಪಿ ಸಂಸದರು ನಾನು ಎದುರಾದರೆ 2 ಹೆಜ್ಜೆ ಹಿಂದಿಡುತ್ತಾರೆ- ರಾಹುಲ್ ಗಾಂಧಿ
ಲೋಕಸಭೆಯ ಕಲಾಪದ ವೇಳೆ ಭಾಷಣದ ಮಾಡಿದ ಬಳಿಕ ಪ್ರಧಾನಿ ನರೇಂದ್ರ ಮೋದಿ ಅವರನ್ನು ಅಪ್ಪಿಕೊಂಡು ಸುದ್ದಿಯಾಗಿದ್ದ ರಾಹುಲ್ ಗಾಂಧಿ ಈಗ ಮತ್ತೊಮ್ಮೆ ಅಪ್ಪುಗೆಯ ಬಗ್ಗೆ ಮಾತನಾಡಿದ್ದಾರೆ.

Published On :
ನವದೆಹಲಿ: ಲೋಕಸಭೆಯ ಕಲಾಪದ ವೇಳೆ ಭಾಷಣದ ಮಾಡಿದ ಬಳಿಕ ಪ್ರಧಾನಿ ನರೇಂದ್ರ ಮೋದಿ ಅವರನ್ನು ಅಪ್ಪಿಕೊಂಡು ಸುದ್ದಿಯಾಗಿದ್ದ ರಾಹುಲ್ ಗಾಂಧಿ ಈಗ ಮತ್ತೊಮ್ಮೆ ಅಪ್ಪುಗೆಯ ಬಗ್ಗೆ ಮಾತನಾಡಿದ್ದಾರೆ. ಮತ್ಯಾರನ್ನ ಅಪ್ಪಿಕೊಳ್ಳುತ್ತಾರೆ ಎಂದು ಹುಬ್ಬೇರಿಸಬೇಡಿ, ಈ ಬಾರಿ ಅವರು ಬಿಜೆಪಿ ಸಂಸದರ ಬಗ್ಗೆ ಮಾತನಾಡಿದ್ದು, ಬಿಜೆಪಿ ಸಂಸದರಿಗೆ ನಾನು ಎದುರಾದರೆ 2 ಹೆಜ್ಜೆ ಹಿಂದಿರುತ್ತಾರೆ ಎಂದು ರಾಹುಲ್ ಗಾಂಧಿ ಹೇಳಿದ್ದಾರೆ.
ನೀವು ವಿರೋಧಿಗಳೊಂದಿಗೆ ನಿಮ್ಮ ಎಲ್ಲಾ ಶಕ್ತಿಯನ್ನೂ ಬಳಸಿ ಹೋರಾಡಬಹುದು, ಆದರೆ ದ್ವೇಷ ಎಂಬುದು ಆಯ್ಕೆಯಾಗಿರುತ್ತದೆ, ಬಿಜೆಪಿ-ಕಾಂಗ್ರೆಸ್ ನಡುವೆ ಹೋರಾಟ ಇದ್ದೇ ಇರುತ್ತದೆ, ಆದರೆ ನಾವು ಅವರನ್ನು ದ್ವೇಷಿಸುವುದಿಲ್ಲ ಆದರೆ ಅದನ್ನೇ ಅವರೂ ಪಾಲಿಸುತ್ತಾರಾ ಎಂಬುದು ಗೊತ್ತಿಲ್ಲ. ಈಗ ನಾನು ಬಿಜೆಪಿ ಸಂಸದರಿಗೆ ಎದುರಾದರೆ, ಅವರನ್ನೂ ಅಪ್ಪಿಕೊಳ್ಳುತ್ತೇನೆಂದುಕೊಂಡಿದ್ದು 2 ಹೆಜ್ಜೆ ಹಿಂದಿಡುತ್ತಾರೆ, ನಾನು ಯಾರನ್ನೂ ದ್ವೇಷಿಸುವುದಿಲ್ಲ ಎಂದು ರಾಹುಲ್ ಗಾಂಧಿ ಹೇಳಿದ್ದಾರೆ.
ಪತ್ರಕರ್ತ ಕರಣ್ ಥಾಪರ್ ಅವರ ಪುಸ್ತಕ ಬಿಡುಗಡೆ ಸಮಾರಂಭದಲ್ಲಿ ರಾಹುಲ್ ಗಾಂಧಿ ಈ ಹೇಳಿಕೆ ನೀಡಿದ್ದಾರೆ. ಲೋಕಸಭೆಯಲ್ಲಿ ಅವಿಶ್ವಾಸ ನಿರ್ಣಯ ಮಂಡನೆ ವೇಳೆ ಭಾಷಣ ಮಾಡಿದ್ದ ರಾಹುಲ್ ಗಾಂಧಿ ಪ್ರಧಾನಿ ನರೇಂದ್ರ ಮೋದಿಯನ್ನು ಅಪ್ಪಿಕೊಂಡು, ಕಣ್ಣು ಹೊಡೆದು ತೀವ್ರ ಟೀಕೆಗೆ ಗುರಿಯಾಗಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.
ಬ್ರೇಕಿಂಗ್ ನ್ಯೂಸ್
ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಹೆಚ್ಚಿದ ಒತ್ತಡ: ಮುಖ್ಯ ಚುನಾವಣಾ ಆಯುಕ್ತರನ್ನ ವಜಾ ಮಾಡೊದು ಅಷ್ಟು ಸುಲಭನಾ? ಯಾರಿಗಿದೆ ಆ ಪವರ್? ಸಂವಿಧಾನ ಹೇಳುವುದೇನು?ರಾಹುಕಾಲ ಎಂದರೇನು? ಮದುವೆಗೆ ಅನ್ವಯಿಸುತ್ತದೆಯೇ? ರಾಹು ಶಾಂತಿಗಾಗಿ ನಿಂಬೆ ಹಣ್ಣು ದೀಪ ಹಚ್ಚುವುದು ಸೂಕ್ತವೇ?ಗೌರಿಬಿದನೂರಿನ ಮಣ್ಣಲ್ಲಿ ಅರಳಿದ ಮರುಭೂಮಿ ಹಣ್ಣು: ಅಸಾಧ್ಯವನ್ನು ಸಾಧ್ಯವಾಗಿಸಿದ ಹಠವಾದಿ; ಸ್ವಾವಲಂಬಿ ಕೃಷಿಗೆ ಹೊಸ ಭಾಷ್ಯ ಬರೆದ ದಿವಾಕರ್ ಚನ್ನಪ್ಪ..!ಕರ್ನಾಟಕದ ನಂ.1 ಶ್ರೀಮಂತ ಯಾರು ಗೊತ್ತಾ? ಅಂಬಾನಿ, ಅದಾನಿ ಬಿಡಿ; ಇಲ್ಲಿದೆ ನಮ್ಮ ಕರುನಾಡ ಸಿರಿವಂತರ ಟಾಪ್ ಲಿಸ್ಟ್!ಫ್ಯಾಟ್ ನಿಂದ ಫಿಟ್ ವರೆಗೆ: ಸಾಹೇಬಲಾಲ್ ಛಪ್ಪರ್ಬಂದ್ ಸ್ಫೂರ್ತಿದಾಯಕ ಪಯಣವಿದೇಶಿ ಪ್ರವಾಸದ ಪ್ಲ್ಯಾನ್ ಇದೆಯೇ? ಒಂದು ಸಣ್ಣ ತಪ್ಪು ಭಾರೀ ದಂಡಕ್ಕೆ ಕಾರಣವಾಗಬಹುದು; ಪ್ರವಾಸಿಗರು ತಿಳಿದಿರಲೇಬೇಕಾದ ನಿಯಮಗಳಿವು...!ಮನಸ್ಸಿದ್ದರೆ ಮಾರ್ಗ ಎಂಬುದನ್ನು ರುಜುವಾತು ಮಾಡಿದ ಛಲವಾದಿ; 27 ವರ್ಷಗಳ ಹೋರಾಟದಲ್ಲಿ 26 ಬಾರಿ ಸೋತು 59ನೇ ವಯಸ್ಸಿನಲ್ಲಿ ಸರ್ಕಾರಿ ಶಿಕ್ಷಕರಾದ ವಿಜಯ್ಪಶ್ಚಿಮ ಘಟ್ಟಗಳ ESA - ಕಸ್ತೂರಿರಂಗನ್ ವರದಿ ಇನ್ನೂ ಏಕೆ ಜಾರಿಗೆ ಬಂದಿಲ್ಲ?


