ಆಲ್ವಾರ್ ಸಾಮೂಹಿಕ ಹಲ್ಲೆ ಪ್ರಕರಣ: ಬಂಧಿತ ಗೋಸಂರಕ್ಷಕರನ್ನು ಬಿಡುಗಡೆಗೊಳಿಸುವಂತೆ ಬಿಜೆಪಿ ಶಾಸಕನ ಆಗ್ರಹ
ಆಲ್ವಾರ್ ಸಾಮೂಹಿಕ ಹತ್ಯೆ ಪ್ರಕರಣದಲ್ಲಿ ಬಂಧಿರಾಗಿರುವ ಗೋಸಂರಕ್ಷಕರನ್ನು ಬಿಡುಗಡೆಗೊಳಿಸುವಂತೆ ಬಿಜೆಪಿ ಶಾಸಕ ಗ್ಯಾನ್ ದೇವ್ ಅಹುಜಾ ..

Published On :
ರಾಜಸ್ತಾನ: ಆಲ್ವಾರ್ ಸಾಮೂಹಿಕ ಹತ್ಯೆ ಪ್ರಕರಣದಲ್ಲಿ ಬಂಧಿರಾಗಿರುವ ಗೋಸಂರಕ್ಷಕರನ್ನು ಬಿಡುಗಡೆಗೊಳಿಸುವಂತೆ ಬಿಜೆಪಿ ಶಾಸಕ ಗ್ಯಾನ್ ದೇವ್ ಅಹುಜಾ ಆಗ್ರಹಿಸಿದ್ದಾರೆ.
ಹಸು ಸಾಗಿಸುತ್ತಿದ್ದ ಎಂಬ ಶಂಕೆಯ ಮೇಲೆ 28 ವರ್,ದ ರಕ್ಬರ್ ಖಾನ್ ಮೇಲೆ ಹಲ್ಲೆ ನಡೆಸಲಾಗಿತ್ತು. ನಂತರ ಆತ ಪೊಲೀಸ್ ಕಸ್ಟಡಿಯಲ್ಲಿ ಸಾವನ್ನಪ್ಪಿದ್ದ. ಹೀಗಾಗಿ ಪ್ರಕರಣವನ್ನು ಕಸ್ಟೋಡಿಯಲ್ ಡೆತ್ ಎಂದು ಪರಿಗಣಿಸಿ ನ್ಯಾಯಾಂಗ ತನಿಖೆ ನಡೆಸುವಂತೆ ಗೃಹ ಸಚಿವ ಗುಲಬ್ ಚಂದ್ ಕಟಾರಿಯಾ ಆದೇಶಿಸಿದ್ದರು.
ರಕ್ಬರ್ ಖಾನ್ ಜನರ ಹಲ್ಲೆಯಿಂದ ಸಾವನ್ನಪ್ಪಿಲ್ಲ, ಆತ ಪೊಲೀಸರ ವಶದಲ್ಲಿದ್ದಾಗ ಸತ್ತಿದ್ದಾನೆ, ಹೀಗಾಗಿ ಮುಗ್ಧರನ್ನು ಏಕೆ ಪೊಲೀಸರು ಬಂಧಿಸಬೇಕು, ಬಂಧಿತರನ್ನು ಬಿಡುಗಡೆಗೊಳಿಸಬೇಕು ಎಂದು ಅಹುಜಾ ಗೃಹ ಸಚಿವರನ್ನು ಒತ್ತಾಯಿಸಿದ್ದಾರೆ.
ಕೂಡಲೇ ಬಂಧಿರನ್ನು ಬಿಡುಗಡೆಗೊಳಿಸಬೇಕು ಎಂದಿರುವ ಶಾಸಕ ಅಹುಜಾ ಗೋಕಳ್ಳಸಾಗಣಿಕೆಯಲ್ಲಿ ತೊಡಗಿದ್ದ ಅಸ್ಲಾಂನನ್ನು ತಕ್ಷಣ ಬಂಧಿಸಬೇಕು ಎಂದು ಆಗ್ರಹಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
ArrestಬಂಧನBJP MLAಬಿಜೆಪಿ ಶಾಸಕcow vigilantesAlwar lynching caseಆಲ್ವಾರ್ ಸಾಮೂಹಿಕ ಹಲ್ಲೆ ಪ್ರಕರಣಗೋಸಂರಕ್ಷಕರು
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


