ದೇಶ

ಕರುಣಾನಿಧಿ ಅನಾರೋಗ್ಯ ಊಹಾಪೋಹಾ: ಸ್ಪಷ್ಟನೆ ನೀಡಿದ ಕಾವೇರಿ ಆಸ್ಪತ್ರೆ!

ತಮಿಳುನಾಡು ಮಾಜಿ ಮುಖ್ಯಮಂತ್ರಿ ಮತ್ತು ಡಿಎಂಕೆ ಪಕ್ಷದ ಮುಖ್ಯಸ್ಥ ಎಂ ಕರುಣಾನಿಧಿ ಅನಾರೋಗ್ಯದ ಕುರಿತಂತೆ ಹಬ್ಬುತ್ತಿರುವ ಊಹಪೋಹಗಳಿಗೆ ಬ್ರೇಕ್ ಪ್ರಯತ್ನವನ್ನು ಕಾವೇರಿ ಆಸ್ಪತೆ ಮಾಡಿದ್ದು, ಈ ಕುರಿತು ಪತ್ರಿಕಾ ಪ್ರಕಟಣೆ ಹೊರಡಿಸಿದೆ.

ಕರುಣಾನಿಧಿ ಅನಾರೋಗ್ಯ ಊಹಾಪೋಹಾ: ಸ್ಪಷ್ಟನೆ ನೀಡಿದ ಕಾವೇರಿ ಆಸ್ಪತ್ರೆ!
ಪ್ರಕಟಣೆ ನೀಡಿದ ಕಾವೇರಿ ಆಸ್ಪತ್ರೆ
Published On :
ಚೆನ್ನೈ: ತಮಿಳುನಾಡು ಮಾಜಿ ಮುಖ್ಯಮಂತ್ರಿ ಮತ್ತು ಡಿಎಂಕೆ ಪಕ್ಷದ ಮುಖ್ಯಸ್ಥ ಎಂ ಕರುಣಾನಿಧಿ ಅನಾರೋಗ್ಯದ ಕುರಿತಂತೆ ಹಬ್ಬುತ್ತಿರುವ ಊಹಪೋಹಗಳಿಗೆ ಬ್ರೇಕ್ ಪ್ರಯತ್ನವನ್ನು ಕಾವೇರಿ ಆಸ್ಪತೆ ಮಾಡಿದ್ದು, ಈ ಕುರಿತು ಪತ್ರಿಕಾ ಪ್ರಕಟಣೆ ಹೊರಡಿಸಿದೆ.
ಎಂ ಕರುಣಾನಿಧಿ ಅವರ ಆರೋಗ್ಯದಲ್ಲಿ ವ್ಯತ್ಯಯವಾಗಿದ್ದು, ಅವರಿಗೆ ಅವರ ನಿವಾಸದಲ್ಲೇ ಚಿಕಿತ್ಸೆ ನೀಡಲಾಗುತ್ತಿದೆ. ಡಿಎಂಕೆ ಮೂಲಗಳ ಪ್ರಕಾರ ಕಳೆದೊಂದು ವಾರದಿಂದ ಕರುಣಾನಿಧಿ ಅವರು ತೀವ್ರ ಜ್ವರದಿಂದ ಬಳಲುತ್ತಿದ್ದಾರೆ ಎಂದು ತಿಳಿದುಬಂದಿದೆ. ಇನ್ನು ಕರುಣಾನಿಧಿ ಅವರ ಆರೋಗ್ಯಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣಗಳಲ್ಲಿ ವಿವಿಧ ಬಗೆಯ ಊಹಾಪೋಹಗಳು ಹರಿದಾಡುತ್ತಿದ್ದು, ಗೋಪಾಲಪುರಂನಲ್ಲಿರುವ ಕರುಣಾನಿಧಿ ಅವರ ನಿವಾಸಕ್ಕೆ ಡಿಎಂಕೆ ಕಾರ್ಯಕರ್ತರು ಆತಂಕದಿಂದ ದೌಡಾಯಿಸುತ್ತಿದ್ದಾರೆ. 
ಈ ಹಿನ್ನಲೆಯಲ್ಲಿ ಗೋಪಾಲಪುರಂ ನಿವಾಸದ ಎದುರು ಭಾರಿ ಪೊಲೀಸ್ ಭದ್ರತೆ ಒದಗಿಸಲಾಗಿದೆ.
ಸ್ಪಷ್ಟನೆ ನೀಡಿದ ಕಾವೇರಿ ಆಸ್ಪತ್ರೆ
ಇನ್ನು ಕರುಣಾನಿಧಿ ಅವರಿಗೆ ಚಿಕಿತ್ಸೆ ನೀಡುತ್ತಿರುವ ಕಾವೇರಿ ಆಸ್ಪತ್ರೆ ಈ ಬಗ್ಗೆ ಪತ್ರಿಕಾ ಪ್ರಕಟಣೆ ನೀಡಿದ್ದು, ಅವರ ಆರೋಗ್ಯದಲ್ಲಿ ಕೊಂಚ ಏರಿಳಿತವಾಗಿದೆ. ಆದರೆ ಅವರಿಗೆ ಚಿಕಿತ್ಸೆ ಮುಂದುವರೆಸಲಾಗಿದೆ. ಕರುಣಾ ನಿಧಿ ಅವರು ಜ್ವರ ಮತ್ತು ಮೂತ್ರನಾಳದ ಸೋಂಕಿನಿಂದ ಬಳಲುತ್ತಿದ್ದಾರೆ. ಅವರಿಗೆ ಮನೆಯಲ್ಲಿ ಆಸ್ಪತ್ರೆ ಮಾದರಿಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಅಂತೆಯೇ ಯಾವುದೇ ಕಾರಣಕ್ಕೂ ಅವರನ್ನು ಭೇಟಿ ಮಾಡಲು ಬೆಂಬಲಿಗರಿಗೆ ಅವಕಾಶವಿಲ್ಲ ಎಂದು ಕಾವೇರಿ ಆಸ್ಪತ್ರೆ ತನ್ನ ಪತ್ರಿಕಾ ಪ್ರಕಟಣೆಯಲ್ಲಿ ಹೇಳಿದೆ. 

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.