ಡಿಎಂಕೆ ಮುಖ್ಯಸ್ಥ ಕರುಣಾನಿಧಿ ಆರೋಗ್ಯದಲ್ಲಿ ಚೇತರಿಕೆ, ವದಂತಿಗೆ ಕಿವಿಗೊಡಬೇಡಿ: ಸ್ಟಾಲಿನ್
ತೀವ್ರ ಜ್ವರದಿಂದ ಬಳಲುತ್ತಿದ್ದ ತಮಿಳುನಾಡು ಮಾಜಿ ಮುಖ್ಯಮಂತ್ರಿ ಮತ್ತು ಡಿಎಂಕೆ ಪಕ್ಷದ ಮುಖ್ಯಸ್ಥ ಎಂ ಕರುಣಾನಿಧಿ ಅವರಿಗೆ ಚಿಕಿತ್ಸೆ ನೀಡಲಾಗುತ್ತಿದ್ದು ಜ್ವರ ಕಡಿಮೆಯಾಗಿದ್ದು...

Published On :
ಚೆನ್ನೈ: ತೀವ್ರ ಜ್ವರದಿಂದ ಬಳಲುತ್ತಿದ್ದ ತಮಿಳುನಾಡು ಮಾಜಿ ಮುಖ್ಯಮಂತ್ರಿ ಮತ್ತು ಡಿಎಂಕೆ ಪಕ್ಷದ ಮುಖ್ಯಸ್ಥ ಎಂ ಕರುಣಾನಿಧಿ ಅವರಿಗೆ ಚಿಕಿತ್ಸೆ ನೀಡಲಾಗುತ್ತಿದ್ದು ಜ್ವರ ಕಡಿಮೆಯಾಗಿದ್ದು ಅವರ ಆರೋಗ್ಯದಲ್ಲಿ ಚೇತರಿಗೆ ಕಂಡುಬಂದಿದೆ ಎಂದು ಸ್ಟಾಲಿನ್ ಹೇಳಿದ್ದಾರೆ.
94 ವರ್ಷದ ಕರುಣಾನಿಧಿ ಅವರು ಜ್ವರ ಮತ್ತು ಮೂತ್ರನಾಳದ ಸೋಂಕಿನಿಂದ ಬಳಲುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಅವರಿಗೆ ಮನೆಯಲ್ಲೇ ಆಸ್ಪತ್ರೆ ಮಾದರಿಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಇನ್ನು ಕರುಣಾನಿಧಿ ಅನಾರೋಗ್ಯದ ಕುರಿತು ಹಬ್ಬಿದ್ದ ಊಹಾಪೋಹಗಳಿಗೆ ತೆರೆ ಹೇಳಿದಿರುವ ಪುತ್ರ ಸ್ಟಾಲಿನ್ ಸದ್ಯ ಅವರ ಆರೋಗ್ಯದಲ್ಲಿ ಚೇತರಿಕೆ ಕಂಡುಬಂದಿದೆ ಎಂದು ಹೇಳಿದ್ದಾರೆ.
ಅನಾರೋಗ್ಯ ಕುರಿತಂತೆ ಹಬ್ಬಿದ್ದ ಊಹಾಪೋಹಗಳಿಂದಾಗಿ ಆತಂಕಕ್ಕೆ ಒಳಗಾಗಿದ್ದ ಡಿಎಂಕೆ ಕಾರ್ಯಕರ್ತರು ಗೋಪಾಲಪುರಂನಲ್ಲಿರುವ ಕರುಣಾನಿಧಿ ಅವರ ನಿವಾಸಕ್ಕೆ ದೌಡಾಯಿಸಿದ್ದರು.
ಅನಾರೋಗ್ಯಕ್ಕೀಡಾಗಿರುವ ತಮಿಳುನಾಡು ಮಾಜಿ ಸಿಎಂ ಎಂ ಕರುಣಾನಿಧಿ ಶೀಘ್ರ ಗುಣಮುಖರಾಗಲಿ ಎಂದು ದೇವರಲ್ಲಿ ಪ್ರಾರ್ಥಿಸುವುದಾಗಿ ಪ್ರಧಾನಿ ನರೇಂದ್ರ ಮೋದಿ ಅವರು ಟ್ವೀಟ್ ಮಾಡಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


