ದೇಶ

ಕರುಣಾನಿಧಿ ಆರೋಗ್ಯದಲ್ಲಿ ಚೇತರಿಕೆ - ಸ್ಟಾಲಿನ್

ಜ್ವರದಿಂದ ಅನಾರೋಗ್ಯಕ್ಕೊಳಗಾಗಿದ್ದ ಡಿಎಂಕೆ ವರಿಷ್ಠ ಕರುಣಾನಿಧಿ ಅವರು ಚೇತರಿಸಿಕೊಳ್ಳುತ್ತಿದ್ದು, ಜ್ವರ ನಿಯಂತ್ರಣಕ್ಕೆ ಬಂದಿದೆ ಎಂದು ಅವರ ಪುತ್ರ ಎಂ. ಕೆ. ಸ್ಟಾಲಿನ್ ತಿಳಿಸಿದ್ದಾರೆ.

ಕರುಣಾನಿಧಿ  ಆರೋಗ್ಯದಲ್ಲಿ   ಚೇತರಿಕೆ - ಸ್ಟಾಲಿನ್
ಸ್ಟಾಲಿನ್
Published On :

ಚೆನ್ನೈ : ಜ್ವರದಿಂದ ಅನಾರೋಗ್ಯಕ್ಕೊಳಗಾಗಿದ್ದ ಡಿಎಂಕೆ ವರಿಷ್ಠ ಕರುಣಾನಿಧಿ ಅವರು ಚೇತರಿಸಿಕೊಳ್ಳುತ್ತಿದ್ದು, ಜ್ವರ ನಿಯಂತ್ರಣಕ್ಕೆ ಬಂದಿದೆ ಎಂದು  ಅವರ ಪುತ್ರ ಎಂ. ಕೆ. ಸ್ಟಾಲಿನ್ ತಿಳಿಸಿದ್ದಾರೆ.

2016 ಅಕ್ಟೋಬರ್ ತಿಂಗಳಿನಿಂದ ಕರುಣಾನಿಧಿ ಅವರ ಆರೋಗ್ಯದಲ್ಲಿ  ಸಮಸ್ಯೆ ಉಂಟಾಗುತ್ತಿದ್ದು, ಕೆಲ ದಿನಗಳ ಹಿಂದೆ  ಉಸಿರಾಟದ ಅನುಕೂಲಕ್ಕಾಗಿ ಟ್ರಾಚಿಯೊಸ್ಟಾಮಿ ಟ್ಯೂಬ್ ಶಸ್ತ್ರ ಚಿಕಿತ್ಸೆ ಮಾಡಲಾಗಿತ್ತು ಎಂದು ಸ್ಟಾಲಿನ್ ಹೇಳಿದರು.

ಕರುಣಾನಿಧಿ ಅವರಿಗೆ ಅನಾರೋಗ್ಯ ಹಿನ್ನೆಲೆಯಲ್ಲಿ ಅವರ ನಿವಾಸ  ಗೋಪಾಲಪುರಂನಲ್ಲಿ ಅಸಂಖ್ಯಾತ ಸಂಖ್ಯೆಯಲ್ಲಿ ಪಕ್ಷದ ಕಾರ್ಯಕರ್ತರು ನೆರೆದಿದ್ದು, ಬಿಗಿ ಬಂದೋಬಸ್ತ್ ಏರ್ಪಡಿಸಲಾಗಿದೆ.

 ಎಂಡಿಎಂಕೆ ಮುಖ್ಯಸ್ಥ ವೈಕೋ, ತಮಿಳುನಾಡು ಬಿಜೆಪಿ ಮುಖ್ಯಸ್ಥ ಟಿ. ಸೌಂದರಾಜನ್,  ಮತ್ತಿತರರು  ಕರುಣಾನಿಧಿ ಅವರ ನಿವಾಸಕ್ಕೆ ಭೇಟಿ ನೀಡಿ, ಅವರ ಕುಟುಂಬ ಸದಸ್ಯರಿಂದ ಆರೋಗ್ಯದ ಬಗ್ಗೆ ಮಾಹಿತಿ ಪಡೆದುಕೊಂಡರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.