ಮಮತಾ ಬ್ಯಾನರ್ಜಿ ಬಿಜೆಪಿ ವಿರೋಧಿ ಬಣದ ಪ್ರಧಾನಿ ಅಭ್ಯರ್ಥಿ: ಓಮರ್ ಅಬ್ದುಲ್ಲಾ ಸುಳಿವು?
2019 ರ ಲೋಕಸಭಾ ಚುನಾವಣೆಗೆ ಬಿಜೆಪಿ ವಿರೋಧಿ ಬಣದ ಪ್ರಧಾನಿ ಅಭ್ಯರ್ಥಿಯಾಗಿ ಮಮತಾ ಬ್ಯಾನರ್ಜಿ ಆಯ್ಕೆಗೊಳ್ಳುವ ಬಗ್ಗೆ ಜಮ್ಮು-ಕಾಶ್ಮೀರ ಸಿಎಂ ಓಮರ್ ಅಬ್ದುಲ್ಲಾ ಸುಳಿವು ನೀಡಿದ್ದಾರೆ.

Published On :
ನವದೆಹಲಿ: 2019 ರ ಲೋಕಸಭಾ ಚುನಾವಣೆಗೆ ಬಿಜೆಪಿ ವಿರೋಧಿ ಬಣದ ಪ್ರಧಾನಿ ಅಭ್ಯರ್ಥಿಯಾಗಿ ಮಮತಾ ಬ್ಯಾನರ್ಜಿ ಆಯ್ಕೆಗೊಳ್ಳುವ ಬಗ್ಗೆ ಜಮ್ಮು-ಕಾಶ್ಮೀರ ಸಿಎಂ ಓಮರ್ ಅಬ್ದುಲ್ಲಾ ಸುಳಿವು ನೀಡಿದ್ದಾರೆ.
ಪಶ್ಚಿಮ ಬಂಗಾಳದ ಸಚಿವಾಲಯದಲ್ಲಿ ಮಮತಾ ಬ್ಯಾನರ್ಜಿ ಅವರನ್ನು ಭೇಟಿ ಮಾಡಿರುವ ಓಮರ್ ಅಬ್ದುಲ್ಲಾ, "ನಾವು ಮಮತಾ ಬ್ಯಾನರ್ಜಿಯವರನ್ನು ರಾಷ್ಟ್ರ ರಾಜಧಾನಿಗೆ ಕರೆದುಕೊಂಡು ಹೋಗುತ್ತೆವೆ, ಆ ಮೂಲಕ ಮಮತಾ ಬ್ಯಾನರ್ಜಿಯವರು ಕೋಲ್ಕತ್ತಾದಲ್ಲಿ ಮಾಡಿರುವ ಕೆಲಸಗಳನ್ನು ಇಡೀ ದೇಶಕ್ಕೂ ಅಳವಡಿಸಬಹುದು ಎಂದು ಹೇಳಿದ್ದು, ಮಮತಾ ಬ್ಯಾನರ್ಜಿ ಬಿಜೆಪಿ ವಿರೋಧಿ ಬಣದ ಪ್ರಧಾನಿ ಅಭ್ಯರ್ಥಿಯಾಗಲಿದ್ದಾರೆಯೇ ಎಂಬ ಸುಳಿವು ನೀಡಿದ್ದಾರೆ.
"ಮಮತಾ ಬ್ಯಾನರ್ಜಿ ಅವರೊಂದಿಗೆ ದೇಶದ ರಾಜಕೀಯ ವಿದ್ಯಮಾನ ಹಾಗೂ ಕಾಶ್ಮೀರದ ಬಗ್ಗೆ ಮಾತನಾಡಿದೆ. ಜಮ್ಮು-ಕಾಶ್ಮೀರದ ಬಗ್ಗೆಯೂ ಸಿಎಂ ಮಮತಾ ಬ್ಯಾನರ್ಜಿ ಅವರಿಗೆ ಆತಂಕವಿದೆ ಎಂದು ಓಮರ್ ಅಬ್ದುಲ್ಲಾ ಹೇಳಿದ್ದು, ಎನ್ ಸಿ ಹಾಗೂ ಟಿಎಂಸಿ ಸಮಾನ ಮನಸ್ಕ ಪಕ್ಷಗಳು, ನಮ್ಮಿಬ್ಬರ ಪಕ್ಷದ ನಡುವೆ ಹೆಚ್ಚು ವ್ಯತ್ಯಾಸವಿಲ್ಲ ಎಂದು ಹೇಳಿದ್ದಾರೆ.
ಆದರೆ ಪ್ರಧಾನಿ ಅಭ್ಯರ್ಥಿ ಬಗ್ಗೆ ನೇರವಾಗಿ ಏನನ್ನೂ ಹೇಳದ ಓಮರ್ ಅಬ್ದುಲ್ಲಾ, 2019 ರ ಲೋಕಸಭಾ ಚುನಾವಣೆ ಇನ್ನೂ ಘೋಷಣೆಯಾಗಿಲ್ಲ. ಆದ್ದರಿಂದ ಪ್ರಧಾನಿ ಅಭ್ಯರ್ಥಿ ಬಗ್ಗೆ ಈಗಲೇ ಚರ್ಚೆ ಬೇಡ ಎಂದು ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Mamata Banerjeeಮಮತಾ ಬ್ಯಾನರ್ಜಿ2019 elections2019 ಲೋಕಸಭಾ ಚುನಾವಣೆPM Candidateಪ್ರಧಾನಿ ಅಭ್ಯರ್ಥಿanti-BJP frontಬಿಜೆಪಿ ವಿರೋಧಿ ಬಣ
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.
ಬ್ರೇಕಿಂಗ್ ನ್ಯೂಸ್
ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಹೆಚ್ಚಿದ ಒತ್ತಡ: ಮುಖ್ಯ ಚುನಾವಣಾ ಆಯುಕ್ತರನ್ನ ವಜಾ ಮಾಡೊದು ಅಷ್ಟು ಸುಲಭನಾ? ಯಾರಿಗಿದೆ ಆ ಪವರ್? ಸಂವಿಧಾನ ಹೇಳುವುದೇನು?ರಾಹುಕಾಲ ಎಂದರೇನು? ಮದುವೆಗೆ ಅನ್ವಯಿಸುತ್ತದೆಯೇ? ರಾಹು ಶಾಂತಿಗಾಗಿ ನಿಂಬೆ ಹಣ್ಣು ದೀಪ ಹಚ್ಚುವುದು ಸೂಕ್ತವೇ?ಗೌರಿಬಿದನೂರಿನ ಮಣ್ಣಲ್ಲಿ ಅರಳಿದ ಮರುಭೂಮಿ ಹಣ್ಣು: ಅಸಾಧ್ಯವನ್ನು ಸಾಧ್ಯವಾಗಿಸಿದ ಹಠವಾದಿ; ಸ್ವಾವಲಂಬಿ ಕೃಷಿಗೆ ಹೊಸ ಭಾಷ್ಯ ಬರೆದ ದಿವಾಕರ್ ಚನ್ನಪ್ಪ..!ಕರ್ನಾಟಕದ ನಂ.1 ಶ್ರೀಮಂತ ಯಾರು ಗೊತ್ತಾ? ಅಂಬಾನಿ, ಅದಾನಿ ಬಿಡಿ; ಇಲ್ಲಿದೆ ನಮ್ಮ ಕರುನಾಡ ಸಿರಿವಂತರ ಟಾಪ್ ಲಿಸ್ಟ್!ಫ್ಯಾಟ್ ನಿಂದ ಫಿಟ್ ವರೆಗೆ: ಸಾಹೇಬಲಾಲ್ ಛಪ್ಪರ್ಬಂದ್ ಸ್ಫೂರ್ತಿದಾಯಕ ಪಯಣವಿದೇಶಿ ಪ್ರವಾಸದ ಪ್ಲ್ಯಾನ್ ಇದೆಯೇ? ಒಂದು ಸಣ್ಣ ತಪ್ಪು ಭಾರೀ ದಂಡಕ್ಕೆ ಕಾರಣವಾಗಬಹುದು; ಪ್ರವಾಸಿಗರು ತಿಳಿದಿರಲೇಬೇಕಾದ ನಿಯಮಗಳಿವು...!ಮನಸ್ಸಿದ್ದರೆ ಮಾರ್ಗ ಎಂಬುದನ್ನು ರುಜುವಾತು ಮಾಡಿದ ಛಲವಾದಿ; 27 ವರ್ಷಗಳ ಹೋರಾಟದಲ್ಲಿ 26 ಬಾರಿ ಸೋತು 59ನೇ ವಯಸ್ಸಿನಲ್ಲಿ ಸರ್ಕಾರಿ ಶಿಕ್ಷಕರಾದ ವಿಜಯ್ಪಶ್ಚಿಮ ಘಟ್ಟಗಳ ESA - ಕಸ್ತೂರಿರಂಗನ್ ವರದಿ ಇನ್ನೂ ಏಕೆ ಜಾರಿಗೆ ಬಂದಿಲ್ಲ?


